11:42 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

Mangaluru | ಮಳೆ ಅನಾಹುತ: ಮರೋಳಿ ವಾರ್ಡ್ ಸಂಖ್ಯೆ 37ಕ್ಕೆ ಶಾಸಕ ವೇದವ್ಯಾಸ ಕಾಮತ್ ಭೇಟಿ; ಪರಿಶೀಲನೆ

19/07/2025, 13:25

ಮಂಗಳೂರು(reporter,karnataka.com): ನಗರದೆಲ್ಲೆಡೆ ಸುರಿದ ಭಾರೀ ಮಳೆಗೆ ಹಲವೆಡೆ ಪ್ರಾಕೃತಿಕ ಅನಾಹುತಗಳು ಸಂಭವಿಸಿದ್ದು ಮಂಗಳೂರು ನಗರ ದಕ್ಷಿಣ ಕ್ಷೇತ್ರ ವ್ಯಾಪ್ತಿಯ ಮರೋಳಿ ವಾರ್ಡ್ ಸಂಖ್ಯೆ 37ಕ್ಕೆ ಶಾಸಕ ವೇದವ್ಯಾಸ ಕಾಮತ್ ರವರು ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಸತತ ಮಳೆಯಿಂದಾಗಿ ಅಡುಮರೋಳಿ ಶೋಭಾ ಶೆಟ್ಟಿ ಎಂಬುವವರ ಮನೆಯ ಎತ್ತರದ ಕಾಂಪೌಂಡ್ ಕುಸಿದು ಅಪಾರ ನಷ್ಟವುಂಟಾಗಿದೆ. ಅಲ್ಲದೇ ಪಾಂಪು ಮನೆ, ಸುಶಾಂತ್ ಪೂಜಾರಿ, ಮಹಾಬಲ ಎಂಬುವವರ ಮನೆಯ ಹಿಂಬದಿಯ ಗುಡ್ಡ ಕುಸಿದಿದ್ದು ಅಪಾಯಕಾರಿ ಸನ್ನಿವೇಶ ನಿರ್ಮಾಣವಾಗಿದೆ. ಇದರಿಂದಾಗಿ ಮನೆಗಳಿಗೂ ಹಾನಿಯಾಗುವ ಸಂಭವವಿದ್ದು ಕೂಡಲೇ ಸ್ಥಳೀಯರಿಗೆ ಯಾವುದೇ ರೀತಿಯಲ್ಲಿ ತೊಂದರೆಯಾಗದಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ಶಾಸಕರು ಅಧಿಕಾರಿಗಳಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಪ್ರಮುಖರಾದ ಪ್ರಶಾಂತ್ ಮರೋಳಿ, ಜಗದೀಶ್ ಶೆಣೈ, ಜಗನ್ನಾಥ ದೊಡ್ಡಮನೆ, ಸೇರಿದಂತೆ ಪಾಲಿಕೆಯ ಅಧಿಕಾರಿಗಳು, ಸ್ಥಳೀಯರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು