10:53 AM Saturday28 - March 2026
ಬ್ರೇಕಿಂಗ್ ನ್ಯೂಸ್
ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ…

ಇತ್ತೀಚಿನ ಸುದ್ದಿ

ಮಂಗಳೂರು ರಥಬೀದಿಯ ವೆಂಕಟರಮಣ ದೇವಳದಲ್ಲಿ ಸಾಮೂಹಿಕ ಬ್ರಹ್ಮೋಪದೇಶ  

13/06/2022, 19:02

ಚಿತ್ರ: ಮಂಜು ನೀರೇಶ್ವಾಲ್ಯ                              ಮಂಗಳೂರು(reporterkarnataka.com) : ಗೌಡ ಸಾರಸ್ವತ ಸಮಾಜದ ಪ್ರತಿಷ್ಠಿತ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಪ್ರತಿಷ್ಠಾ ದಶಮಾನೋತ್ಸವ ಪ್ರಯುಕ್ತ ಶ್ರೀ ದೇವಳದಲ್ಲಿ ಸಮಾಜದ 18 ವಟುಗಳಿಗೆ ಸಾಮೂಹಿಕ ಬ್ರಹ್ಮೋಪದೇಶ ಕಾಶೀ ಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರ ಅಮೃತ ಹಸ್ತಗಳಿಂದ ನೆರವೇರಿತು.

ಭಾನುವಾರ ದೇವತಾ ಪೂಜನೆ , ಉದ್ದಿನ ಮುಹೂರ್ಥ ಕಾರ್ಯಕ್ರಮಗಳು ಜರಗಿದವು . ಸೋಮವಾರ ಕೋಟೇಶ್ವರ ಮೊಕ್ಕಾಂ ನಿಂದ ಶ್ರೀಗಳವರು ಆಗಮಿಸಿ ಶ್ರೀ ದೇವರ ದರ್ಶನ ಬಳಿಕ ಶ್ರೀ ದೇವರ ಸನ್ನಿಧಿಯಲ್ಲಿ ವಟುಗಳು ಶ್ರೀಗಳವರ ಅಮೃತ ಹಸ್ತಗಳಿಂದ  ಯಜ್ನೋಪವಿತ ಧಾರಣೆ

ಬಳಿಕ ರಾಜಾಂಗಣದಲ್ಲಿ  ವಟುಗಳಿಗೆ ಶ್ರೀಗಳವರು ಭಿಕ್ಷೆ ಹಾಗೂ ತಪ್ತ ಮುದ್ರಾಧಾರಣೆ ನೀಡಿದರು . ಬಳಿಕ ಆಶೀರ್ವಚನ ನಡೆಯಿತು. ಈ ಸಂದರ್ಭದಲ್ಲಿ ದೇವಳದ ಮೊಕ್ತೇಸರರಾದ ಅಡಿಗೆ ಬಾಲಕೃಷ್ಣ ಶೆಣೈ , ಸಾಹುಕಾರ್ ಕಿರಣ್ ಪೈ , ಸತೀಶ್ ಪ್ರಭು , ಗಣೇಶ್ ಕಾಮತ್ , ಎಂ . ಜಗನ್ನಾಥ್ ಕಾಮತ್ , ಚಾತುರ್ಮಾಸ ಸಮಿತಿಯ ಚೇರ್ಮನ್ ಮುಂಡ್ಕುರ್ ರಾಮದಾಸ್ ಕಾಮತ್ , ಅಧ್ಯಕ್ಷ ಎಂ . ಪದ್ಮನಾಭ ಪೈ , ತಂತ್ರಿ ಗಳಾದ ಪಂಡಿತ್ ನರಸಿಂಹ ಆಚಾರ್ಯ ಹಾಗೂ ಚಾತುರ್ಮಾಸ ಸಮಿತಿಯ ಪದಾಧಿಕಾರಿಗಳು ಮತ್ತು ನೂರಾರು ಸಮಾಜ ಬಾಂಧವರು ಉಪಸ್ಥಿತರಿದ್ದರು.  

ಇತ್ತೀಚಿನ ಸುದ್ದಿ

ಜಾಹೀರಾತು