7:07 AM Thursday20 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

Mangaluru | ಸುಳ್ಯ ಸಮೀಪ ತೊಟದ ಬಾವಿಗೆ ಬಿದ್ದ ಮರಿಯಾನೆ ರಕ್ಷಣೆ

14/04/2026, 14:02

ಸುಳ್ಯ(reporterkarnataka.com): ಸುಳ್ಯ ಸಮೀಪದ ಪೆರಾಜೆ ಕಲ್ಚರ್ಪೆ ಬಳಿ ಭಾನುವಾರ ರಾತ್ರಿ ಕಾಡಾನೆಯೊಂದು ಬಾವಿಗೆ ಬಿದ್ದಿದ್ದು, ಅದನ್ನು ರಕ್ಷಣೆ ಮಾಡಲಾಯಿತು.
ಕಲ್ಚರ್ಪೆಯ ದಮಯಂತಿ ಅವರ ಮನೆಯ ಸಮೀಪದ ತೊಟದ ಬಳಿ ಬಾವಿ ಇತ್ತು. ಈ ಬಾವಿಯು ಸುಮಾರು 16 ಅಡಿಗಳಷ್ಟು ಆಳವಿದ್ದು, ಅದರ ನೀರು ಬೇಸಿಗೆಯಲ್ಲಿ ಬತ್ತುತ್ತದೆ. ಆಹಾ ರ ಅರಸಿ ತೋಟದ ಕಡೆಗೆ ಬಂದಿದ್ದ ಆನೆಯ ಹಿಂಡಿನಿಂದ ತಪ್ಪಿಸಿಕೊಂಡಿದ್ದ ಮರಿಯಾನೆ ಬಾವಿಯೊಳಗೆ ಬಿದ್ದಿತ್ತು ಎಂದು ಸ್ಥಳಿಯರು ತಿಳಿಸಿದ್ದಾರೆ.

ಆನೆ ಬಾವಿಗೆ ಬಿದ್ದ ಬಗ್ಗೆ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದೆವು. ಅವರು ಹಿಟಾಚಿ ಯಂತ್ರವನ್ನು ತರಿಸಿ ಬಾವಿಯಿಂದ ಆನೆ ಮರಿಯು ಮೇಲಕ್ಕೆ ಬರಲು ದಾರಿ ಮಾಡಿಕೊಟ್ಟರು. ಬೆಳಿಗ್ಗೆ ಆರಂಭವಾದ ರಕ್ಷಣಾ ಕಾರ್ಯಾಚರಣೆ ಸಂಜೆ 4.30ರ ವರೆಗೂ ಮುಂದುವರಿದಿತ್ತು. ಬಾವಿಯಿಂದ ಮೇಲಕ್ಕೆ ಬಂದ ಆನೆಯು ಕಾಡನ್ನು ಸೇರಿದೆ ಎಂದು ಅವರು ಮಾಹಿತಿ ನೀಡಿದರು.
‘ಎರಡು ದಿನಗಳ ಹಿಂದೆ ಕಲ್ಚರ್ಪೆ ಪರಿಸರದಲ್ಲಿ ಆನೆಗಳ ಹಿಂಡು ಕಾಣಿಸಿಕೊಂಡಿತ್ತು. ಆ ಹಿಂಡಿನಲ್ಲೂ ಒಂದು ಮರಿಯಾನೆ ಇತ್ತು. ಆ ಮರಿಯಾನೆಯೇ ಬಾವಿಗೆ ಬಿದ್ದಿರುವ ಸಾಧ್ಯತೆ ಇದೆ’ ಎಂದು ಸ್ಥಳೀಯರೊಬ್ಬರು ತಿಳಿಸಿದ್ದಾರೆ.
ಅರಣ್ಯ ಇಲಾಖೆ ತಂಡ ಸ್ಥಳದಲ್ಲೇ ಇದ್ದು, ಈ ಪರಿಸರದಲ್ಲಿ ಕಾಡಾನೆಗಳ ಚಲನವಲನಗಳ ಮೇಲೆ ನಿಗಾ ಇಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು