9:33 PM Thursday26 - March 2026
ಬ್ರೇಕಿಂಗ್ ನ್ಯೂಸ್
ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್…

ಇತ್ತೀಚಿನ ಸುದ್ದಿ

ಮಂಗಳೂರಿನಲ್ಲಿ ಪ್ರಧಾನಿ ರೋಡ್ ಶೋಗೆ ಕ್ಷಣಗಣನೆ ಆರಂಭ: ಮೈಸೂರಿನಲ್ಲಿ ಮೊದಲ ಬಾರಿಗೆ ಮಾಜಿ ಪ್ರಧಾನಿ ದೇವೇಗೌಡರ ಜತೆ ವೇದಿಕೆ ಹಂಚಲಿರುವ ಮೋದಿ

14/04/2024, 11:13

ಮಂಗಳೂರು(reporterkarnataka.com): ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಕಡಲನಗರಿ ಮಂಗಳೂರು ಹಾಗೂ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ರೋಡ್ ಶೋ ನಡೆಸಲಿದ್ದಾರೆ. ಮಂಗಳೂರಿನಲ್ಲಿ ಸುಮಾರು 2 ಕಿಮೀ. ರೋಡ್ ಶೋ ನಡೆಸಲಿದ್ದು, ಕ್ಷಣಗಣನೆ ಆರಂಭವಾಗಿದೆ.
ಪ್ರಧಾನಿ ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಸಂಜೆ 4 ಗಂಟೆಗೆ ಸಾರ್ವಜನಿಕ ಸಭೆಯಲ್ಲಿ ಮಾತನಾಡಲಿದ್ದಾರೆ. ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡರ ಜತೆ ಪ್ರಥಮ ಬಾರಿಗೆ ವೇದಿಕೆ ಹಂಚಿಕೊಳ್ಳಲಿದ್ದಾರೆ. ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಎಚ್.ಡಿ. ಕುಮಾರಸ್ವಾಮಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮುಂತಾದವರು ಉಪಸ್ಥಿತರಿರುವರು.
ಮಂಗಳೂರಿನಲ್ಲಿ ರಾತ್ರಿ 7.45ಕ್ಕೆ ರೋಡ್ ಶೋ ಆರಂಭವಾಗಲಿದೆ. ಬಜಪೆ ವಿಮಾನ ನಿಲ್ದಾಣದಿಂದ ಮೋದಿ ಅವರು ನೇರವಾಗಿ ಲೇಡಿಹಿಲ್ ಸಮೀಪದ ಶ್ರೀ ನಾರಾಯಣ ಗುರು ವೃತ್ತಕ್ಕೆ ಆಗಮಿಸುವರು. ಅಲ್ಲಿಂದ ರೋಡ್ ಶೋ ಆರಂಭವಾಗಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು