1:41 PM Wednesday26 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

Mangaluru | ಬೈಕಂಪಾಡಿ ಬಳಿ ಕೇರಳದ ಉದ್ಯಮಿಯ ಕಾರು ಅಡ್ಡಗಟ್ಟಿ ಚಿನ್ನಾಭರಣ ದೋಚಿದ ದರೋಡೆಕೋರರು

29/06/2026, 18:16

ಮಂಗಳೂರು(reporterkarnataka.com): ಕೇರಳ ಮೂಲದ ಉದ್ಯಮಿಯ ಕಾರನ್ನು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಾಡಿದ ಘಟನೆ ಸೋಮವಾರ ಮುಂಜಾನೆ ರಾಷ್ಟ್ರೀಯ ಹೆದ್ದಾರಿ 66ರ ಬೈಕಂಪಾಡಿ ಬಳಿ ನಡೆದಿದೆ.
ಕೇರಳದ ಪಯ್ಯನ್ನೂರು ನಿವಾಸಿ ವಿಕಾಸ್ ಎಂಬವರು ತನ್ನ ಕುಟುಂಬದ ಜತೆ ಪಯಣಿಸುತ್ತಿದ್ದಾಗ 3 ಕಾರಿನಲ್ಲಿ ಬಂದ ದರೋಡೆಕೋರರು ಈ ಕೃತ್ಯ ಎಸಗಿದ್ದಾರೆ.
ಮೂರು ಕಾರುಗಳಲ್ಲಿ ಬಂದ ಸುಮಾರು 7-8 ಮಂದಿ ದರೋಡೆಕೋರರು ವಿಕಾಸ್ ಅವರನ್ನು ಕಾರಿನಿಂದ ಇಳಿಸಿ, ಅವರ ಪತ್ನಿ ಹಾಗೂ ಮಗುವನ್ನು ಕಾರು ಸಹಿತ ಅಪಹರಿಸಿದ್ದರು. ದರೋಡೆಕೋರರು ಪಣಂಬೂರು ಬಳಿ ಚಿನ್ನಾಭರಣಗಳನ್ನೆಲ್ಲ ಲೂಟಿ ಮಾಡಿ ವಿಕಾಸ್ ಅವರ ಪತ್ನಿ ಹಾಗೂ ಮಗುವನ್ನು ರಸ್ತೆಯಲ್ಲೇ ಬಿಟ್ಟು ಕಾರು ಸಹಿತ ಪರಾರಿಯಾಗಿದ್ದಾರೆ. ವಿಕಾಸ್ ಅವರು ಪಣಂಬೂರು ಪೊಲೀಸ್ ಠಾಣೆಗೆ ಈ ಕುರಿತು ದೂರು ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು