8:31 PM Monday17 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಮಂಗಳೂರು: ಸಾಕು ನಾಯಿಯ ತ್ಯಾಜ್ಯ ಸಂಗ್ರಹಿಸುವ ವಾಹನಕ್ಕೆ ನೀಡಿದ ಪಾಪಿಗಳು; ವೀಡಿಯೊ ವೈರಲ್ ಆಗಿ ಘಟನೆ ಬೆಳಕಿಗೆ

11/09/2024, 18:21

ಮಂಗಳೂರು(reporterkarnataka.com): ಜೀವಂತ ಸಾಕು ನಾಯಿಯನ್ನು ತ್ಯಾಜ್ಯ ಸಂಗ್ರಹಿಸುವ ವಾಹನ ನೀಡಿದ ಅಘಾತಕ್ಕಾರಿ ಘಟನೆಯೊಂದು ಬುದ್ದಿವಂತರ ಜಿಲ್ಲೆ ಎನಿಸಿಕೊಂಡ ದ.ಕ. ಜಿಲ್ಲೆಯ ಮಂಗಳೂರಿನಲ್ಲಿ ತಡವಾಗಿ ಬೆಳಕಿಗೆ ಬಂದಿದೆ.
ನಗರದ ಡೊಂಗರಕೇರಿ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಬಲವಂತವಾಗಿ ನಾಯಿಯನ್ನು ತ್ಯಾಜ್ಯ ಸಂಗ್ರಹಿಸುವ ವಾಹನಕ್ಕೆ ಎಳೆದೊಯ್ಯುವ ವೀಡಿಯೊವೊಂದು ವೈರಲ್ ಆಗುವ ಮೂಲಕ ಇಡೀ ಘಟನೆ 2 ದಿನಗಳ ಬಳಿಕ ಬೆಳಕಿಗೆ ಬಂದಿದೆ.
ಡೊಂಗರಕೇರಿಯಲ್ಲಿ ವಾಸಿಸುವ ಕುಟುಂಬವೊಂದರ ಸದಸ್ಯರು ಈ ಅಮಾನವೀಯ ಕೃತ್ಯ ಎಸಗಿದ್ದಾರೆ ಎನ್ನಲಾಗಿದೆ.
ಮನೆ ಬಾಗಿಲಿಗೆ ಬರುವ ತ್ಯಾಜ್ಯ ವಿಲೇವಾರಿ ವಾಹನಕ್ಕೆ ಜೀವಂತ ನಾಯಿಯನ್ನು ಬಲವಂತವಾಗಿ ನೀಡಲಾಗಿದೆ. ಸಾಕು ನಾಯಿ ಮನೆ ಬಿಟ್ಟು ಹೋಗಲು ಕೇಳದಿದ್ದರೂ ಅದನ್ನು ಬಲವಂತವಾಗಿ ಎಳೆದೊಯ್ಯುವ ದೃಶ್ಯ ವೀಡಿಯೊದಲ್ಲಿ ಕಂಡು ಬಂದಿದೆ. ವಿಶೇಷವೆಂದರೆ ತ್ಯಾಜ್ಯ ಸಂಗ್ರಹಕರು ಕೂಡ ನಾಯಿಯನ್ನು ಸ್ವೀಕರಿಸಲು ನಿರಾಕರಿಸದೆ ಅದನ್ನು ಕೂಡ ತ್ಯಾಜ್ಯವೆಂದು ಪರಿಗಣಿಸಿ ಕೊಂಡೊಯ್ದಿದ್ದಾರೆ.


ಈ ಘಟನೆಯನ್ನು ಸ್ಥಳೀಯರು ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಈ ವಿಡಿಯೋ ವೈರಲ್‌ ಆಗಿದೆ.
ವೀಡಿಯೊ ವೈರಲ್ ಆಗುತ್ತಿದ್ದಂತೆ
ಘಟನೆ ಕುರಿತು ಸಂಪೂರ್ಣ ಮಾಹಿತಿ ನೀಡುವಂತೆ ಪಶುಪಾಲನೆ ಇಲಾಖೆ ಮಂಗಳೂರು ಮಹಾನಗರ ಪಾಲಿಕೆಗೆ ನೋಟಿಸ್‌ ನೀಡಿದೆ. ತ್ಯಾಜ್ಯ ವಿಲೇವಾರಿ ವಾಹನ ಕೊಂಡೊಯ್ದಿದ್ದ ಶ್ವಾನವನ್ನು ಪಚ್ಚನಾಡಿ ಡಂಪಿಂಗ್ ಪ್ರದೇಶದಲ್ಲಿ ಬಿಡಲಾಗಿದೆ. ಆದರೆ ಶ್ವಾನ ಇನ್ನೂ ಪತ್ತೆಯಾಗಿಲ್ಲ. ಪಚ್ಚನಾಡಿ ಸುತ್ತಮುತ್ತಲಿನ ಪ್ರದೇಶದಲ್ಲಿ ಹುಡುಕುವ ಕೆಲಸ ನಡೆಯುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು