9:29 PM Sunday31 - August 2025
ಬ್ರೇಕಿಂಗ್ ನ್ಯೂಸ್
ದಂತ ವೈದ್ಯಕೀಯ ಸೇವೆ ಹಳ್ಳಿ ಹಳ್ಳಿಗಳಿಗೂ ತಲುಪಲಿ: ಡೆಂಟಿಸ್ಟ್‌ ಶೃಂಗಸಭೆ-2025 ಸಮಾವೇಶದಲ್ಲಿ ಸಚಿವ… ಗೂಡ್ಸ್ ವಾಹನದಲ್ಲಿ ಗಾಂಜಾ ಮಾರಾಟಕ್ಕೆ ಯತ್ನ: ಮಾಲು ಸಹಿತ ಆರೋಪಿ ಬಂಧನ Kodagu | ‘ಹುಡುಗಿ, ಆಂಟಿ ಸರ್ವಿಸ್…’ ಎಂದು ಜಾಲತಾಣದಲ್ಲಿ ಹರಿಯ ಬಿಟ್ಟ: ಮಡಿಕೇರಿ… Kerala | ವಯನಾಡು ತಮರಶೆರಿ ಘಾಟ್ ಬಳಿ ಭೂಕುಸಿತ: ಬದಲಿ ಮಾರ್ಗಕ್ಕೆ ಸಲಹೆ ಕೆಪಿಟಿಸಿಎಲ್ ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್ ಹುದ್ದೆಗಳ ಅಯ್ಕೆ ಪಟ್ಟಿ… ಕೊಚ್ಚಿಯಲ್ಲಿ ಕೌಶಲ್ಯ ಶೃಂಗಸಭೆ | ಪದವಿಗಳಲ್ಲ, ಭವಿಷ್ಯದ ಬಾಗಿಲು ತೆರೆಯುವುದು ಕೌಶಲ್ಯತೆ: ಸಚಿವ… Kodagu | ಗೋಣಿಕೊಪ್ಪದಲ್ಲಿ ಅಸ್ಸಾಂ ವ್ಯಕ್ತಿಯಿಂದ ಅಂಗಡಿ ಶಟರ್ ಮುರಿದು 32 ಹೊಸ… ಮಡಿಕೇರಿ – ವಿರಾಜಪೇಟೆ ಮುಖ್ಯರಸ್ತೆಯ ಮೇಕೇರಿ ಬಳಿ ಮಣ್ಣು ಕುಸಿತ: ವಾಹನ ಸಂಚಾರ… ಅ. 9ರಿಂದ 23ರವರೆಗೆ ಹಾಸನಾಂಬೆ ಉತ್ಸವ; ಈ ಬಾರಿ ದೇವಿ ದರ್ಶನ ನಿಯಮ… ಜಾತ್ಯತೀತತೆಯ ಸಂಕೇತವಾಗಿರುವ ನಾಡ ಹಬ್ಬ, ಧಾರ್ಮಿಕವಲ್ಲ: ಡಾ. ಪುರುಷೋತ್ತಮ ಬಿಳಿಮಲೆ

ಇತ್ತೀಚಿನ ಸುದ್ದಿ

Mangaluru | ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ ಸಾಧನಾ ಪ್ರಶಸ್ತಿ ಪ್ರದಾನ

31/08/2025, 19:14

ಮಂಗಳೂರು(reporterkarnataka.com): ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನೀಡುವ“ಸಾಧನಾ ಪ್ರಶಸ್ತಿ” ಬಂದಿದೆ.
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ೨೦೨೪-೨೫ನೇ ಸಾಲಿನ ವ್ಯವಹಾರದಲ್ಲಿ ಸಾಧಿಸಿದ ಸರ್ವತೋಮುಖ ಪ್ರಗತಿಯನ್ನು ಗುರುತಿಸಿ “ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಸಾಧನಾ ಪ್ರಶಸ್ತಿ ೨೦೨೪-೨೫” ಪ್ರಶಸ್ತಿಯನ್ನು ಆ. ೩೦ ರಂದು ನಡೆದ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ೨೦೨೪-೨೫ನೇ ಸಾಲಿನ ವಾರ್ಷಿಕ ಸಭೆಯಲ್ಲಿ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷ, ಸಹಕಾರ ರತ್ನ ಡಾ| ಎಂ.ಎನ್. ರಾಜೇಂದ್ರ ಕುಮಾರ್ ಅವರು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೌಮ್ಯ ವಿಜಯ್ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಿದರು.
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ೨೦೧೨ರಲ್ಲಿ ಪ್ರಾರಂಭವಾಗಿ ದಶಮಾನೋತ್ಸವಕ್ಕೆ ನಗರದ ಪಡೀಲ್‌ನಲ್ಲಿ ಸ್ವಂತ ಪ್ರಧಾನ ಕಛೇರಿಯನ್ನು ಹೊಂದಿರುತ್ತದೆ. ಪ್ರಸ್ತುತ ದ.ಕ. ಹಾಗೂ ಉಡುಪಿ ಜಿಲ್ಲೆಯಾದ್ಯಂತ ೩೩ ಶಾಖೆಗಳನ್ನು ಹೊಂದಿರುವ ಸಂಘವು, ೨೦೨೪-೨೫ನೇ ಸಾಲಿನಲ್ಲಿ ದುಡಿಯುವ ಬಂಡವಾಳ ರೂ. ೨೫,೭೪೯.೪೮ ಲಕ್ಷ ಹೊಂದಿದ್ದು, ರೂ. ೩.೦೬ ಕೋಟಿಗೂ ಮಿಕ್ಕಿ ಲಾಭ ಗಳಿಸಿರುತ್ತದೆ.
ಈ ಕಾರ್ಯಕ್ರಮದಲ್ಲಿ ಬ್ಯಾಂಕಿನ ಉಪಾಧ್ಯಕ್ಷರಾದ ವಿನಯ ಕುಮಾರ್ ಸೂರಿಂಜೆ, ನಿರ್ದೇಶಕರುಗಳಾದ ಭಾಸ್ಕರ್ ಎಸ್. ಕೋಟ್ಯಾನ್, ಟಿ.ಜಿ. ರಾಜಾರಾಮ ಭಟ್, ಎಂ. ವಾದಿರಾಜ್ ಶೆಟ್ಟಿ, ಶಶಿಕುಮಾರ್ ರೈ ಬಿ., ಎಸ್.ಬಿ. ಜಯರಾಮ ರೈ, ಡಾ. ಐಕಳಬಾವ ದೇವಿ ಪ್ರಸಾದ್ ಶೆಟ್ಟಿ, ಎಂ. ಮಹೇಶ್ ಹೆಗ್ಡೆ, ಬಿ. ಅಶೋಕ್ ಕುಮಾರ್ ಶೆಟ್ಟಿ, ಮೋನಪ್ಪ ಶೆಟ್ಟಿ ಎಕ್ಕಾರು, ಕೆ. ಜೈರಾಜ್ ಬಿ. ರೈ, ಕುಶಾಲಪ್ಪ ಗೌಡ ಪಿ., ಎಸ್. ಎನ್. ಮನ್ಮಥ, ಅಪೆಕ್ಸ್ ಬ್ಯಾಂಕ್ ನ ಪ್ರತಿನಿಧಿಯಾದ ಸದಾಶಿವ ಉಳ್ಳಾಲ್, ವೃತ್ತಿಪರ ನಿರ್ದೇಶಕರಾದ ರಾಜೇಶ್ ರಾವ್, ದ.ಕ ಜಿಲ್ಲೆ ಸಹಕಾರ ಸಂಘಗಳ ಉಪನಿಬಂಧಕರಾದ ಹೆಚ್.ಎನ್, ರಮೇಶ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ (ಪ್ರ) ಗೋಪಾಲಕೃಷ್ಣ ಭಟ್ ಕೆ., ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಉಪಾಧ್ಯಕ್ಷರಾದ ನೇಮಿರಾಜ್ ಪಿ., ನಿರ್ದೇಶಕರುಗಳಾದ ಪರಮೇಶ್ವರ ಜಿ. ಪೂಜಾರಿ, ಆನಂದ ಎಸ್. ಕೊಂಡಾಣ ಮತ್ತಿತ್ತರರು ಉಪಸ್ಥಿತರಿದ್ದರು.
ಅಖಿಲ ಭಾರತ  ಸಹಕಾರ ಸಪ್ತಾಹ ಕಾರ್ಯಕ್ರಮದಲ್ಲಿ ಸಂಘಕ್ಕೆ ಸತತ ಏಳು ಬಾರಿ `ಉತ್ತಮ ಸಹಕಾರಿ ಸಂಘ’ ರಾಜ್ಯ ಪ್ರಶಸ್ತಿ, ಕರ್ನಾಟಕ ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾಮಂಡಳ ನಿ. ಇವರಿಂದ ಸತತ ೧೦ ವರ್ಷಗಳಿಂದ ಇ-ಸ್ಟಾಂಪಿಂಗ್ ಸೇವೆಗೆ ರಾಜ್ಯ ಹಾಗೂ ಜಿಲ್ಲಾ ಪ್ರಶಸ್ತಿ, ಆರೋಗ್ಯ ವಿಮಾ ಯೋಜನೆಯ ಗುರಿ ಮೀರಿದ ಸಾಧನೆಗೆ ಸತತ ೧೦ ವರ್ಷಗಳಿಂದ “ವಿಮಾ ಪ್ರಶಸ್ತಿ”, ೨೦೧೯ನೇ ಸಾಲಿನ “ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ”, ಯುವವಾಹಿನಿ ಕೇಂದ್ರ ಸಮಿತಿ (ರಿ) ಯಿಂದ “ಯುವವಾಹಿನಿ ಸಾಧನಶ್ರೇಷ್ಠ” ಪ್ರಶಸ್ತಿ, ಹೊಸದಿಲ್ಲಿಯ ಇಕೋನಾಮಿಕ್ ಗ್ರೋತ್ ಪೌಂಡೇಶನ್ ನಿಂದ “ಆವಾರ್ಡ್ ಪೋರ್ ಎಕ್ಸ್ಲೆನ್ಸ್ ಇನ್ ಬೆಸ್ಟ್ ಕೋ-ಅಪರೆಟೀವ್ ಸೊಸೈಟಿ” ರಾಷ್ಟ್ರೀಯ ಪ್ರಶಸ್ತಿ ಲಭಿಸಿದ್ದು, ಈ ಎಲ್ಲ ಸಾಧನೆಯೊಂದಿಗೆ ಸಹಕಾರ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಯನ್ನು ಸ್ಮರಿಸಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಸತತ ೧೦ ವರ್ಷಗಳಿಂದ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ `ಸಾಧನಾ’ ಪ್ರಶಸ್ತಿ ಯನ್ನು ಪಡೆದಿರುವುದು ಸಂಘದ ಹೆಗ್ಗಳಿಕೆಯಾಗಿದೆ.

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್‌ರವರ ಮುಂದಾಳತ್ವದಲ್ಲಿ ಮಹಿಳಾ ಸಬಲೀಕರಣ ದೃಷ್ಟಿಯಿಂದ ಮಾಡುತ್ತಿರುವ ಸೇವೆ ಅನನ್ಯ. ಸಂಘದ ವಿಶೇಷತೆ ಎಂದರೆ ಶೇ. ೧೦೦ ರಷ್ಟು ಹಿಂದುಳಿದ ವರ್ಗಕ್ಕೆ ಸೇರಿದ ಸಿಬ್ಬಂದಿಗಳು ಉದ್ಯೋಗದಲ್ಲಿದ್ದು, ಶೇ.೯೫ ರಷ್ಟು ಮಹಿಳಾ ಸಿಬ್ಬಂದಿಗಳೇ ಇದ್ದು ಮಹಿಳೆಯರ ಮುಖಾಂತರ ಸಂಘದ ವ್ಯವಹಾರ ನಡೆಸುತ್ತಿರುವುದು ಅನುಕರಣೀಯ. ಆತ್ಮಶಕ್ತಿ ಸಹಕಾರಿ ಸಂಘವು ಸುಮಾರು ೮೭ಕ್ಕೂ ಮಿಕ್ಕಿ ಆರೋಗ್ಯ ಶಿಬಿರಗಳನ್ನು ಆಯೋಜಿಸಿ ಆ ಮೂಲಕ ೬೫೦ಕ್ಕೂ ಮಿಕ್ಕಿ ಕಣ್ಣಿನ ಕ್ಯಾಟ್ರಾಕ್ಟ್ ಚಿಕಿತ್ಸೆ, ಉಚಿತ ಔಷಧಿ, ಶಸ್ತ್ರ ಚಿಕಿತ್ಸಾ ವೆಚ್ಚ ಹಾಗೂ ೧೯,೦೦೦ಕ್ಕೂ ಮಿಕ್ಕಿ ಕನ್ನಡಕವನ್ನೂ ಉಚಿತವಾಗಿ ವಿತರಿಸಿರುವುದಷ್ಟೇ ಅಲ್ಲದೇ ಉಚಿತ ಆರೋಗ್ಯ ಕಾರ್ಡನ್ನು ಬಡ ಕುಟುಂಬಗಳಿಗೆ ಪ್ರತಿ ವರ್ಷ ವಿತರಿಸಿದೆ. ಅಸಹಾಯಕ ವಿದ್ಯಾರ್ಥಿಗಳಿಗೆ ನೆರವಾಗುವ ನಿಟ್ಟಿನಲ್ಲಿ ಪ್ರತಿ ವರ್ಷ ಸರಕಾರಿ ಕಾಲೇಜುಗಳಿಗೆ ನೇರವಾಗಿ ವಿದ್ಯಾರ್ಥಿಗಳ ದಾಖಲಾತಿ ಮತ್ತು ಪರೀಕ್ಷಾ ಶುಲ್ಕಗಳನ್ನು ಪಾವತಿಸುತ್ತಿರುವುದು ಹೆಮ್ಮೆಯ ವಿಷಯವಾಗಿದೆ. ಅಶಕ್ತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ನೀಡಲಾಗಿದೆ. ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಕರಾವಳಿ ಭಾಗದ ವಿದ್ಯಾರ್ಥಿಗಳಿಗೆ ಉಚಿತ ಪ್ರೇರಣಾ ಶಿಬಿರವನ್ನು ಕಳೆದ ೧೧ ವರ್ಷದಿಂದ ಆಯೋಜಿಸಿ ಸುಮಾರು ೮೦೦ ಬಡ ಅರ್ಹ ವಿದ್ಯಾರ್ಥಿಗಳನ್ನು ಈ ಶಿಬಿರದಿಂದ ಆಯ್ಕೆ ಮಾಡಿ ಅವರಿಗೆ ಉಚಿತವಾಗಿ ಐ.ಎ.ಎಸ್ / ಕೆ.ಎ.ಎಸ್ ಮುಂತಾದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಭಾಗವಹಿಸಲು ಉಚಿತ ತರಬೇತಿ ನೀಡುವುದರ ಜೊತೆಗೆ ಸರ್ಕಾರಿ ಪ್ರೌಡ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಬಡ ವಿದ್ಯಾರ್ಥಿಗಳಿಗೆ ಎಸ್.ಎಸ್.ಎಲ್.ಸಿ ಪರೀಕ್ಷೆಯ ಮಾದರಿ ಪ್ರಶ್ನೋತ್ತರಗಳನ್ನು ದಿನಪತ್ರಿಕೆಗಳ ಸಹಯೋಗದೊಂದಿಗೆ ವಿತರಿಸುತ್ತಾ ಬರುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು