3:43 AM Monday12 - October 2026
ಬ್ರೇಕಿಂಗ್ ನ್ಯೂಸ್
ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು

ಇತ್ತೀಚಿನ ಸುದ್ದಿ

ಮಂಗಳೂರು ಶರಣ ಸಾಹಿತ್ಯ ಪರಿಷತ್ ವತಿಯಿಂದ ಕದಳಿ ಮಹಿಳಾ ವೇದಿಕೆ ಉದ್ಘಾಟನೆ

16/08/2022, 08:56

ಮಂಗಳೂರು(reporterkarnataka.com): ಮಂಗಳೂರು ನಗರ ಶರಣ ಸಾಹಿತ್ಯ ಪರಿಷತ್ತಿನ ಕದಳಿ ಮಹಿಳಾ ವೇದಿಕೆ ವತಿಯಿಂದ ಕದಳಿ ಮಹಿಳಾ ವೇದಿಕೆಯ ಉದ್ಘಾಟನಾ ಸಮಾರಂಭ ನಗರದ ಶಾರದಾ ಕಾಲೇಜು ಬಳಿಯಿರುವ ವಾತ್ಸಲ್ಯ ಧಾಮದ ಶತಾಯುಷಿ ದಂಪತಿ ಮಂಟಪದಲ್ಲಿ  ಜರುಗಿತು. ಕಾರ್ಯಕ್ರಮವನ್ನು ಶರಣ ಸಾಹಿತ್ಯ ಪರಿಷತ್ತಿನ ಜಿಲ್ಲಾ ಅಧ್ಯಕ್ಷರಾದ ಜಗನ್ನಾಥಪ್ಪ ಪಡಸಾಲೆ ದೀಪ ಬೆಳಗಿಸಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಅವರು ಮಾತನಾಡುತ್ತಾ, ಕದಳಿ ಮಹಿಳಾ ವೇದಿಕೆಯು ಕೇವಲ ಮಹಿಳೆಯರಿಗಾಗಿ ಮಾತ್ರ ಇರುವಂತದ್ದು. ಮಹಿಳೆಯು ಕೇವಲ ಮನೆಯ ನಾಲ್ಕು ಗೋಡೆಗೆ ಸೀಮಿತವಾಗಿರದೆ ಚುರುಕುತನದಿಂದ ಎಲ್ಲಾ ವಿಭಾಗಗಳಲ್ಲಿ ತನ್ನನ್ನು ತೊಡಗಿಸಿಕೊಂಡರೆ ಮಾತ್ರ ಆಕೆ ಉನ್ನತಿಯನ್ನು ಕಾಣಲು ಸಾಧ್ಯ. ಆದುದರಿಂದ ಹೆಚ್ಚು ಹೆಚ್ಚು ಮಹಿಳೆಯರು ಕದಳಿ ಮಹಿಳಾ ವೇದಿಕೆಗೆ ಸೇರುವಂತಾಗಬೇಕು. ಇಲ್ಲಿ ಯಾವುದೇ ಜಾತಿ ಧರ್ಮದ ಬೇಧವಿಲ್ಲ. ಮುಕ್ತವಾಗಿ ಎಲ್ಲಾ ಮಹಿಳೆಯರು ಭಾಗವಹಿಸಬಹುದು ಎಂದು ತಿಳಿಸಿದರು. 

12ನೇ

ಶತಮಾನದಲ್ಲಿ ಅಕ್ಕಮಹಾದೇವಿ, ನಾಗಮ್ಮ ರಂತವರು ವಚನ ಸಾಹಿತ್ಯವನ್ನು ಬರೆದರು. ಮಹಿಳೆಯು ತನ್ನನ್ನು ತಾನು ತಿಳಿದುಕೊಂಡರೆ ಆಕೆ ಎಲ್ಲಾ ಕ್ಷೇತ್ರಗಳಲ್ಲೂ ಸಾಧನೆಯನ್ನು ಮಾಡಬಹುದು ಎಂದು ಕಿವಿಮಾತು ಹೇಳಿದರು. 

ನಿರ್ಮಲಾ ಚಂದ್ರಶೇಖರ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಶತಾಯುಷಿ ದಂಪತಿ ಮಂಟಪದ ಮುಖ್ಯಸ್ಥರಾದ ಶ್ರೀನಾಥ್ ಹೆಗ್ಡೆಯವರು ಶರಣ ಸಾಹಿತ್ಯದ ಬಗ್ಗೆ ಒಂದೆರಡು ಮಾತುಗಳನ್ನಾಡಿದರು. ಕಾರ್ಯಕ್ರಮದಲ್ಲಿ ಶಕುಂತಲಾ ಅವರು ಚಿಂತನೆಯನ್ನು ನಡೆಸಿಕೊಟ್ಟರು.
ಕಾರ್ಯಕ್ರಮದಲ್ಲಿ ಎನ್.ಆರ್. ಕಾಮತ್, ನರಸಿಂಹ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.
ಸ್ವಾತಿ ಅವರು ರಸಪ್ರಶ್ನೆ ಕಾರ್ಯಕ್ರಮ ನಡೆಸಿಕೊಟ್ಟರು. ಕಾರ್ಯಕ್ರಮದಲ್ಲಿ ದೇವಿ ಸ್ತೋತ್ರ ಹಾಗೂ ಹನುಮಾನ್ ಚಾಲೀಸ್ ಪಠನೆಯನ್ನು ಕಾರ್ಯಕ್ರಮ ನಿರೂಪಕರಾದ ಸುರೇಖಾ ಅವರು ನಡೆಸಿಕೊಟ್ಟರು.

ಇತ್ತೀಚಿನ ಸುದ್ದಿ

ಜಾಹೀರಾತು