4:54 PM Tuesday30 - June 2026
ಬ್ರೇಕಿಂಗ್ ನ್ಯೂಸ್
ಗೆಳೆಯ ವೈಶಾಖ್‌ ಆತ್ಮಹತ್ಯೆ ಪ್ರಕರಣ: ಫಸ್ಟ್‌ ರಿಯಾಕ್ಷನ್ ಕೊಟ್ಟ ನಟಿ ಕೃಷಿ ತಾಪಂಡ ರೆಸಾರ್ಟ್ ನ ಈಜುಕೊಳದಲ್ಲಿ ದುರಂತ | 10 ಅಡಿ ಎತ್ತರದಿಂದ 4 ಅಡಿ… 2 ದಿನಗಳ ರಾಜ್ಯ ಪ್ರವಾಸ ಮುಗಿಸಿದ ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರಿಗೆ… ಆರೆಸ್ಸೆಸ್ ವಿರುದ್ಧ ಪೋಸ್ಟ್ : ಗೃಹ ಸಚಿವ ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಕೋರ್ಟ್… ಕ್ರಿಪ್ಟೋ ಹೂಡಿಕೆ ಹೆಸರಿನಲ್ಲಿ ಕೋಟ್ಯಂತರ ರೂ. ವಂಚನೆ ಆರೋಪ: ತೀರ್ಥಹಳ್ಳಿ ಕಾಲೇಜು ಪ್ರಾಧ್ಯಾಪಕ… ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ತೂರಿದ ಪ್ರಕರಣ | 4 ಮಂದಿ… ಮುಂಬೈ | ಮೊಹರಂ ವೇಳೆ ಸಾಮೂಹಿಕ ವಿಷಪ್ರಾಶನಕ್ಕೆ ಸಂಚು: 14,900 ಕ್ಯಾಪ್ಸುಲ್‌ ವಶಕ್ಕೆ;… ತೀರ್ಥಹಳ್ಳಿ: ಪಲ್ಸ್ ಪೋಲಿಯೋ ಅಭಿಯಾನಕ್ಕೆ ಶಾಸಕ ಆರಗ ಜ್ಞಾನೇಂದ್ರ ಚಾಲನೆ ಟ್ರೆಕ್ಕಿಂಗ್ ವೇಳೆ ದುರಂತ: ಹೃದಯಾಘಾತದಿಂದ ಚಿತ್ರ ನಿರ್ಮಾಪಕ ಭಾ ಮಾ ಹರೀಶ್ ಪುತ್ರ… ವಿರಾಜಪೇಟೆ: ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು

ಇತ್ತೀಚಿನ ಸುದ್ದಿ

Mangaluru | ಕಥೊಲಿಕ್ ಸಭಾ ಕೇಂದ್ರೀಯ ನೂತನ ಅಧ್ಯಕ್ಷರಾಗಿ ಸಂತೋಷ್ ಡಿಸೋಜ ಬಜ್ಪೆ ಆಯ್ಕೆ

12/05/2025, 20:28

ಮಂಗಳೂರು(reporterkarnataka.com):ಮಂಗಳೂರು ಧರ್ಮಕ್ಷೇತ್ರದ ಕಥೊಲಿಕ್ ಸಭಾ ಮಂಗ್ಳುರ್ ಪ್ರದೇಶ್ (ರಿ.) ಸಂಘಟನೆಯ 2025-26ನೇ ಸಾಲಿನ ವಾರ್ಷಿಕ ಚುನಾವಣೆಯು ಮಂಗಳೂರು ಧರ್ಮಕ್ಷೇತ್ರದ ಧರ್ಮಾಧ್ಯಕ್ಷರ ನಿವಾಸದ ಸಭಾ ಭವನದಲ್ಲಿ ನಡೆದಿದ್ದು, ನೂತನ ಕೇಂದ್ರೀಯ ಅಧ್ಯಕ್ಷರಾಗಿ ಸಂತೋಷ್ ಡಿಸೋಜ ಬಜ್ಪೆ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ.

ಕೇಂದ್ರೀಯ ಆಧ್ಯಾತ್ಮಿಕ ನಿರ್ದೇಶಕರಾದ ವಂದನೀಯ ಡಾ. ಜೆ.ಬಿ. ಸಲ್ಡಾನ್ಹಾ ಅವರು ಚುನಾವಣೆಯ ಮೊದಲು ನೂತನ ಪೋಪ್ ಲಿಯೋ 14ರ ಅವರ ಚುನಾವಣೆಯನ್ನು ಸ್ಮರಿಸಿ ಅದೇ ರೀತಿ ಪ್ರಾರ್ಥನೆಯ ಮೂಲಕ ಚುನಾವಣೆಯನ್ನು ನಡೆಸಲು ಮಾರ್ಗದರ್ಶನ ನೀಡೀದರು. ಅಧ್ಯಕ್ಷ ಸಂತೋಷ್ ಡಿಸೋಜ ಬಜ್ಪೆ, ಪ್ರಥಮ ಉಪಾಧ್ಯಕ್ಷ ಲೋರೆನ್ಸ್ ಡಿಸೋಜ ಸುರತ್ಕಲ್, ದ್ವಿತೀಯ ಉಪಾಧ್ಯಕ್ಷ ಲಿಯೋ ರೊಡ್ರಿಗಸ್ ಮಡಂತ್ಯಾರ್, ಪ್ರಧಾನ ಕಾರ್ಯದರ್ಶಿ ವಿಲ್ಮಾ ಮೊಂತೇರೊ ದೇರೆಬೈಲ್, ಸಹ ಕಾರ್ಯದರ್ಶಿ ಆಲ್ವಿನ್ ರೊಡ್ರಿಗಸ್ ಮೂಡಬಿದಿರೆ ಅಲಂಗಾರ್, ಖಜಾಂಚಿ ಫ್ರಾನ್ಸಿಸ್ ಮೊಂತೇರೊ ಮರಿಯಾಶ್ರಮ್ ತಲಪಾಡಿ, ಸಹ ಖಜಾಂಚಿ ಲವೀನಾ ಗ್ರೆಟ್ಟಾ ಡಿಸೋಜ ರಾಣಿಪುರ ಇವರೆಲ್ಲರೂ ಅವಿರೋಧವಾಗಿ ಆಯ್ಕೆಯಾದರು.
ಮಾಜಿ ಅಧ್ಯಕ್ಷ ಲ್ಯಾನ್ಸಿ ಡಿಕುನ್ಹಾ ಚುನಾವಣಾಧಿಕಾರಿಯಾಗಿ ಮತ್ತು ಜೆರಿ ಪೀಟರ್ ರೊಡ್ರಿಗಸ್ ಚುನಾವಣಾ ವೀಕ್ಷಣಾಧಿಕಾರಿಯಾಗಿ ಚುನಾವಣೆಯನ್ನು ನಡೆಸಿಕೊಟ್ಟರು. ಆಯ್ಕೆಯಾದ ಎಲ್ಲಾ ಪದಾಧಿಕಾರಿಗಳಿಗೆ ಕೇಂದ್ರೀಯ ಆಧ್ಯಾತ್ಮಿಕ ನಿರ್ದೇಶಕರಾದ ವಂದನೀಯ ಡಾ. ಜೆ.ಬಿ. ಸಲ್ಡಾನ್ಹಾ, ನಿಕಟ ಪೂರ್ವ ಅಧ್ಯಕ್ಷ ಆಲ್ವಿನ್ ಡಿಸೋಜ ಪಾನೀರ್, ಮಾಜಿ ಕೇಂದ್ರೀಯ ಅಧ್ಯಕ್ಷರುಗಳಾದ ವಾಲ್ಟರ್ ಡಿಸೋಜ, ಮಾರಿಟೊ ಸಿಕ್ವೇರಾ, ಎಲ್.ಜೆ. ಫೆರ್ನಾಂಡಿಸ್, ಜೆರಾಲ್ಡ್ ಡಿಕೋಸ್ತ, ಜೆರಿ ಪೀಟರ್ ರೊಡ್ರಿಗಸ್, ಆಂಡ್ರು ನೊರೊನ್ಹಾ, ಲ್ಯಾನ್ಸಿ ಡಿಕುನ್ಹಾ, ನೈಜಿಲ್ ಪಿರೇರಾ, ಅನಿಲ್ ಲೋಬೊ, ಪ್ಲೇವಿ ಡಿಸೋಜ, ಪಾವ್ಲ್ ರೋಲ್ಫಿ ಡಿಕೋಸ್ತ, ಸ್ಟ್ಯಾನಿ ಲೋಬೊ, ವಲಯ ಅಧ್ಯಕ್ಷರುಗಳಾದ ರೋಷನ್ ಬೊನಿಫಾಸ್ ಮಾರ್ಟಿಸ್, ಲಿಯೋ ಸಿಕ್ವೇರಾ, ಸ್ಟ್ಯಾನಿ ಮಿರಾಂದ, ಆಲ್ಬರ್ಟ್ ಸುನಿಲ್ ಮೊನಿಸ್, ಜೋನ್ ಲಸ್ರಾದೊ, ಐಡಾ ಫುಡ್ತಾದೊ, ಡೋಲ್ಫಿ ಡಿಸೋಜ, ಜೆರಾಲ್ಡ್ ಮಸ್ಕರೇನ್ಹಸ್ ಹಾಗೂ ಕಾರ್ಯಕಾರಿ ಸಮಿತಿಯ ಎಲ್ಲಾ ಸದಸ್ಯರು ನೂತನ ಪದಾಧಿಕಾರಿಗಳಿಗೆ ಅಭಿನಂದನೆಗಳನ್ನು ಸಲ್ಲಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು