4:06 PM Sunday30 - August 2026
ಬ್ರೇಕಿಂಗ್ ನ್ಯೂಸ್
*ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ

ಇತ್ತೀಚಿನ ಸುದ್ದಿ

ಮಂಗಳೂರು : ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ಕ್ಕೆ ನೂತನ ಅಧ್ಯಕ್ಷರಾಗಿ ಸಂತೋಷ್ ಕುಮಾರ್ ಶೆಟ್ಟಿ ನೇಮಕ

29/08/2026, 23:07

ಮಂಗಳೂರು(reporterkarnataka.com):ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ಕ್ಕೆ ನೂತನ ಅಧ್ಯಕ್ಷರನ್ನು ನೇಮಕ ಮಾಡಿ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ. ಸದಾಶಿವ ಉಲ್ಲಾಳ್ ಅವರ ಬದಲಿಗೆ ಮಂಗಳೂರಿನ ಕೊಟ್ಟಾರ ನಿವಾಸಿ ಸಂತೋಷ್ ಕುಮಾರ್ ಶೆಟ್ಟಿ, ಬಿನ್ ಕೆ. ರಾಘವ ಶೆಟ್ಟಿ ಅವರನ್ನು ಮುಡಾ ಅಧ್ಯಕ್ಷರನ್ನಾಗಿ ನಾಮನಿರ್ದೇಶನ ಮಾಡಲಾಗಿದೆ.

ಕರ್ನಾಟಕ ನಗರಾಭಿವೃದ್ಧಿ ಪ್ರಾಧಿಕಾರಗಳ ಕಾಯ್ದೆ, 1987ರ ಕಲಂ 3ರ ಉಪ ಕಲಂ 3(ಎ) ಹಾಗೂ 3(4)ರ ಅಡಿಯಲ್ಲಿ ಸರ್ಕಾರಕ್ಕೆ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಈ ನೇಮಕ ಮಾಡಲಾಗಿದೆ.

ಆಗಸ್ಟ್ 29, 2026ರಿಂದಲೇ ನೇಮಕಾತಿ ಜಾರಿಗೆ ಬರಲಿದ್ದು, ಸರ್ಕಾರದ ಮುಂದಿನ ಆದೇಶದವರೆಗೆ ಸಂತೋಷ್ ಕುಮಾರ್ ಶೆಟ್ಟಿ ಅವರು ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಲಿದ್ದಾರೆ.

ಈ ಕುರಿತು ಕರ್ನಾಟಕ ಸರ್ಕಾರದ ನಗರಾಭಿವೃದ್ಧಿ ಇಲಾಖೆಯ ಅಧೀನ ಕಾರ್ಯದರ್ಶಿ ಲತಾ ಕೆ. ಅವರು ಅಧಿಸೂಚನೆ ಹೊರಡಿಸಿದ್ದಾರೆ. ಅಧಿಸೂಚನೆಯ ಪ್ರತಿಯನ್ನು ಸಂಬಂಧಪಟ್ಟ ಅಧಿಕಾರಿಗಳಿಗೆ ಕಳುಹಿಸುವುದರೊಂದಿಗೆ ಕರ್ನಾಟಕ ಇ-ರಾಜ್ಯಪತ್ರದಲ್ಲಿ ಪ್ರಕಟಿಸುವಂತೆ ಸೂಚಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು