3:36 PM Saturday24 - January 2026
ಬ್ರೇಕಿಂಗ್ ನ್ಯೂಸ್
ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು

ಇತ್ತೀಚಿನ ಸುದ್ದಿ

ಮಂಗಳೂರು: ಸೆಪ್ಟೆಂಬರ್ 6ರಿಂದ 3 ದಿನಗಳ ಕಾಲ ಅಂತಾರಾಷ್ಟ್ರೀಯ ಕರಾಟೆ ಪಂದ್ಯಾಟ

26/07/2024, 22:13

ಮಂಗಳೂರು(reporterkarnataka.com): ಮಂಗಳೂರಿನಲ್ಲಿ ಅಂತಾರಾಷ್ಟ್ರೀಯ ಮಟ್ಟದ ಕರಾಟೆ ಪಂದ್ಯಾಟ ಸೆಪ್ಟೆಂಬರ್ 6ರಿಂದ 8ರವರೆಗೆ ಆಯೋಜಿಸಲಾಗಿದೆ.ಈ ಕುರಿತು ಪೂರ್ವಭಾವಿ ಸಭೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಡಾ. ಜಿ. ಸಂತೋಷ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ಕರಾಟೆ ಕ್ರೀಡಾಕೂಟದ ಸಂಘಟಕ ಡಾ. ರಾಹುಲ್ ಟಿ. ಜಿ. ಸಭೆಯಲ್ಲಿ ಮಾತನಾಡಿ “ಶೌರ್ಯ ಅಂತಾರಾಷ್ಟ್ರೀಯ ಕರಾಟೆ ಚಾಂಪಿಯನ್ ಶಿಪ್ -2024 ಪಂದ್ಯಾಟದಲ್ಲಿ ವಿವಿಧ ದೇಶಗಳ ಹಲವು ಖ್ಯಾತ ಕರಾಟೆ ಕ್ರೀಡಾಪಟುಗಳು ಭಾಗವಹಿಸಲಿದ್ದಾರೆ. ಮಂಗಳೂರಿನ ಕೋರ್ಡಲ್ ಚರ್ಚ್ ಮೈದಾನದಲ್ಲಿ ಕ್ರೀಡಾಕೂಟ ನಡೆಯಲಿದೆ. ಸುಮಾರು 2 ಸಾವಿರಕ್ಕೂ ಅಧಿಕ ಮಂದಿ ವಿವಿಧ ದೇಶಗಳಿಂದ ಈ ಪಂದ್ಯಾಟಕ್ಕೆ ಆಗಮಿಸಲಿದ್ದಾರೆ ಎಂದು ಹೇಳಿದರು.
ವಿಶ್ವ ಕರಾಟೆ ಒಕ್ಕೂಟದ ನಿಯಮಾವಳಿಗಳಂತೆ ಪಂದ್ಯಾಟ ನಡೆಯಲಿದೆ ಅಂತಾರಾಷ್ಟ್ರೀಯ ರೆಫ್ರಿಗಳು ಸ್ಪರ್ಧೆಯನ್ನು ನಿರ್ವಹಿಸುವರು ಎಂದು ನುಡಿದರು.
ಅಂತಾರಾಷ್ಟ್ರೀಯ ಕರಾಟೆ ಕ್ರೀಡಾಕೂಟದ ಹಿನ್ನೆಲೆಯಲ್ಲಿ ವಸತಿ, ಸಂಚಾರ, ಪಾರ್ಕಿಂಗ್ ವ್ಯವಸ್ಥೆ ಸೇರಿದಂತೆ ವಿವಿಧ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಬೇಕಾಗಿದೆ ಎಂದು ಹೇಳಿದರು.
ಅಪರ ಜಿಲ್ಲಾಧಿಕಾರಿ ಡಾ. ಜಿ. ಸಂತೋಷ್ ಕುಮಾರ್ ಮಾತನಾಡಿ, ಈ ಕ್ರೀಡಾಕೂಟಕ್ಕೆ ಜಿಲ್ಲಾಡಳಿತ ವತಿಯಿಂದ ಅಗತ್ಯ ನೆರವು ನೀಡಲಾಗುವುದು. ಈ ನಿಟ್ಟಿನಲ್ಲಿ ಜಿಲ್ಲಾಡಳಿತ ಮತ್ತು ಕ್ರೀಡಾಕೂಟ ಸಂಘಟಕರು ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಕರಾಟೆ ಕ್ರೀಡಾಕೂಟದ ಮಾಹಿತಿ ಪುಸ್ತಕವನ್ನು ಬಿಡುಗಡೆಗೊಳಿಸಲಾಯಿತು.
ಸಭೆಯಲ್ಲಿ ಯುವಜನ ಸೇನೆ ಮತ್ತು ಕ್ರೀಡಾ ಉಪ ನಿರ್ದೇಶಕ ಪ್ರವೀಣ್ ಡಿಸೋಜಾ, ಸಹಾಯಕ ಪೊಲೀಸ್ ಆಯುಕ್ತ ನಜ್ಮಾ ಫಾರೂಕಿ, ಕರಾಟೆ ಸಂಘಟನೆಗಳ ಪದಾಧಿಕಾರಿಗಳಾದ ಸುರೇಂದ್ರ, ಸೂರಜ್ ಶೆಟ್ಟಿ, ರಾಜ್‌ಗೋಪಾಲ್ ರೈ, ಮತ್ತಿತರರು ಇದ್ದರು

ಇತ್ತೀಚಿನ ಸುದ್ದಿ

ಜಾಹೀರಾತು