ಇತ್ತೀಚಿನ ಸುದ್ದಿ
ಮಂಗಳೂರು ಶಿಕ್ಷಣ ಇಲಾಖೆಯ ಸೂಪರಿಂಟೆಂಡೆಂಟ್ ಮಡಿಕೇರಿಯಲ್ಲಿ ಆತ್ಮಹತ್ಯೆ
08/09/2022, 17:26
ಮಡಿಕೇರಿ(reporterkarnataka.com): ಮಂಗಳೂರು ಶಿಕ್ಷಣ ಇಲಾಖೆಯ ಅಧಿಕಾರಿಯೊಬ್ಬರು ಮಡಿಕೇರಿ ವಸತಿಗೃಹದಲ್ಲಿ ಆತ್ಮಹತ್ಯೆಗೈದಿರುವ ಘಟನೆ ನಡೆದಿದೆ.
ಶಿವಾನಂದ್ (45) ಆತ್ಮಹತ್ಯೆ ಮಾಡಿಕೊಂಡ ಅಧಿಕಾರಿ. ಬಜಪೆ ನಿವಾಸಿಯಾಗಿರುವ ಶಿವಾನಂದ್ ಮಂಗಳೂರು ದಕ್ಷಿಣ ವಿಭಾಗದ ಬಿಇಓ ಕಚೇರಿಯಲ್ಲಿ ಸೂಪರಿಂಟೆಂಡೆಂಟ್ ಆಗಿ ಸೇವೆ ಸಲ್ಲಿಸುತ್ತಿದ್ದರು.
ಮಡಿಕೇರಿಯ ಹಳೆಯ ಬಸ್ ನಿಲ್ದಾಣದ ಬಳಿಯಿರುವ ವಸತಿಗೃಹದಲ್ಲಿ ಆತ್ಮಹತ್ಯೆ ಮಾಡಿಕೊಂಡ ಮಾಹಿತಿ ತಿಳಿದ ತಕ್ಷಣ ಸ್ಥಳಕ್ಕೆ ಆಗಮಿಸಿದ ಮಡಿಕೇರಿ ನಗರ ಠಾಣೆಯ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.














