2:01 AM Saturday5 - July 2025
ಬ್ರೇಕಿಂಗ್ ನ್ಯೂಸ್
Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ ಭೂ ಸ್ವಾಧೀನ; ಕಾನೂನು ತೊಡಕು ನಿವಾರಿಸಿ ರೈತರ ಸಭೆ: ಮುಖ್ಯಮಂತ್ರಿ ಸಿದ್ದರಾಮಯ್ಯ Virajpete | ಎರಡು ಮಕ್ಕಳ ತಾಯಿಯೊಂದಿಗೆ ಲಿವಿಂಗ್ ರಿಲೇಶನ್ ಶಿಪ್: ಯುವಕ ಆತ್ಮಹತ್ಯೆಗೆ…

ಇತ್ತೀಚಿನ ಸುದ್ದಿ

ಮಂಗಳೂರು ಶ್ರೀ ವೆಂಕಟರಮಣ ದೇವಳದಲ್ಲಿ  ಶ್ರೀರಾಮ ಪಟ್ಟಾಭಿಷೇಕ: ಸುಂದರಕಾಂಡ ಹವನ 

17/08/2022, 21:08

ಚಿತ್ರ : ಮಂಜು ನೀರೇಶ್ವಾಲ್ಯ

ಮಂಗಳೂರು (reporterkarnataka.com): ಶ್ರೀ ಕಾಶೀಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರ ಶುಭ ಕೃತ ನಾಮ ಸಂವತ್ಸರದ ಚಾತುರ್ಮಾಸ ವ್ರತ 
ನಡೆಯುತ್ತಿದ್ದು,ಶ್ರೀ ವೆಂಕಟರಮಣ ದೇವಸ್ಥಾನ ದಲ್ಲಿ ಸುಂದರಕಾಂಡ ಹವನ ನಡೆಯಿತು. ಇದರ ಪ್ರಯುಕ್ತ ” ಶ್ರೀ ರಾಮ ಪಟ್ಟಾಭಿಷೇಕ ” ಜರುಗಿತು. ಈ ಸಂದರ್ಭದಲ್ಲಿ ವಿಶೇಷ ಅಭಿಷೇಕಗಳು , ಅಷ್ಟಾವಧಾನ ಸೇವೆ, ಕೋಲಾಟ , ಭರತನಾಟ್ಯ ಸೇವೆಗಳು ನಡೆದವು, ಕಾಶೀ ಮಠಾಧೀಶರಾದ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರ ಅಮೃತ ಹಸ್ತಗಳಿಂದ ಶ್ರೀ ದೇವರ ಪಟ್ಟಾಭಿಷೇಕ ನೆರವೇರಿತು.


ಈ ಸಂದರ್ಭದಲ್ಲಿ ದೇವಳದ ಆಡಳಿತ ಮೊಕ್ತೇಸರರಾದ ಅಡಿಗೆ ಬಾಲಕೃಷ್ಣ ಶೆಣೈ , ಸಾಹುಕಾರ್ ಕಿರಣ್ ಪೈ , ಸತೀಶ್ ಪ್ರಭು , ಕೆ ಗಣೇಶ್ ಕಾಮತ್ , ಜಗನ್ನಾಥ್ ಕಾಮತ್ ದೇವಳದ ತಂತ್ರಿಗಳಾದ ಪಂಡಿತ್ ನರಸಿಂಹ ಆಚಾರ್ಯ ಚಾತುರ್ಮಾಸ  ಸಮಿತಿಯ ಗೌರವ ಅಧ್ಯಕ್ಷ ಮುಂಡ್ಕುರ್ ರಾಮದಾಸ್ ಕಾಮತ್ , ಬಿ . ಆರ್ . ಭಟ್ , ನಾಮದೇವ್ ಮಲ್ಯ , ಗಣಪತಿ ಪೈ , ಸುರೇಶ್ ಕಾಮತ್ ಉಪಸ್ಥಿತರಿದ್ದರು. 

ಇತ್ತೀಚಿನ ಸುದ್ದಿ

ಜಾಹೀರಾತು