ಇತ್ತೀಚಿನ ಸುದ್ದಿ
ಮಂಗಳೂರು ಸ್ಮಾರ್ಟ್ ಸಿಟಿ ಎಕ್ಸಿಕ್ಯೂಟಿವ್ ಇಂಜಿನಿಯರ್ ಲಿಂಗೇಗೌಡ ಮನೆ ಸೇರಿದಂತೆ ರಾಜ್ಯದ 15 ಕಡೆ ಎಸಿಬಿ ದಾಳಿ
24/11/2021, 10:37
ಬೆಂಗಳೂರು(reporterkarnataka.com); ರಾಜ್ಯದ ವಿವಿಧೆಡೆ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ದಾಳಿ ನಡೆಸಿದೆ. ರಾಜ್ಯದ ವಿವಿಧ ಜಿಲ್ಲೆಗಳ 15ಕ್ಕೂ ಹೆಚ್ಚು ಕಡೆಗಳಲ್ಲಿ ಎಸಿಬಿ ದಾಳಿ ನಡೆದಿದ್ದು, ಮಂಗಳೂರು ಸ್ಮಾರ್ಟ್ ಸಿಟಿಯ ಎಕ್ಸಿಕ್ಯೂಟಿವ್ ಎಂಜಿನಿಯರ್ ಲಿಂಗೇಗೌಡ ಅವರ ಮನೆಗೂ ದಾಳಿ ನಡೆದಿದೆ.
ಲಿಂಗೇಗೌಡ ಅವರು 30ಕ್ಕೂ ಹೆಚ್ಚು ವರ್ಷಗಳಿಂದ ಮಂಗಳೂರಿನಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಹೆಚ್ಚಿನ ಅವಧಿ ಅವರು ಮಂಗಳೂರು ಮಹಾನಗರಪಾಲಿಕೆ ನೀರು ಸರಬರಾಜು ವಿಭಾಗದಲ್ಲಿ ಎಕ್ಸಿಕ್ಯೂಟಿವ್ ಎಂಜಿನಿಯರ್ ಆಗಿ ಕಾರ್ಯನಿರ್ವಹಿಸಿದ್ದರು. ಇತ್ತೀಚೆಗಷ್ಟೇ ಅವರನ್ನು ಮಂಗಳೂರು ಸ್ಮಾರ್ಟ್ ಸಿಟಿಗೆ ಎಕ್ಸಿಕ್ಯೂಟಿವ್ ಎಂಜಿನಿಯರ್ ಆಗಿ ವರ್ಗಾಯಿಸಲಾಗಿತ್ತು. ಮಂಗಳೂರು ಮಹಾನಗರಪಾಲಿಕೆಯಲ್ಲಿ ಜೆಇ ಆಗಿ ಅವರು ಸೇವೆ ಆರಂಭಿಸಿದ್ದರು. 15 ವರ್ಷಗಳ ಹಿಂದೆ ಅವರ ಮೇಲೆ ಲೋಕಾಯುಕ್ತ ತನಿಖೆ ನಡೆದಿತ್ತು.