ಇತ್ತೀಚಿನ ಸುದ್ದಿ
ಮಂಗಳೂರು ಸ್ಮಾಟ್೯ ಸಿಟಿ ಕಾಮಗಾರಿ: ಉಸ್ತುವಾರಿ ಸಚಿವ ಸುನಿಲ್ ಕುಮಾರ್ ಪರಿಶೀಲನೆ
29/05/2022, 12:38
ಮಂಗಳೂರು(reporterkarnataka.com): ಇಂಧನ, ಕನ್ನಡ ಮತ್ತು ಸಂಸ್ಕೃತಿ ಹಾಗೂ
ಜಿಲ್ಲಾ ಉಸ್ತುವಾರಿ ಸಚಿವ ವಿ. ಸುನಿಲ್ ಕುಮಾರ್ ಅವರು ಭಾನುವಾರ ಬೆಳಗ್ಗೆ ಮಂಗಳೂರು ಸ್ಮಾಟ್೯ ಸಿಟಿ ವತಿಯಿಂದ ಕೈಗೊಳ್ಳಲಾದ ಕಾಮಗಾರಿಗಳ ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಶಾಸಕ ಡಿ. ವೇದವ್ಯಾಸ ಕಾಮತ್, ಮಂಗಳೂರು ಮೇಯರ್ ಪ್ರೇಮಾನಂದ ಶೆಟ್ಟಿ, ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ., ಸ್ಮಾರ್ಟ್ ಸಿಟಿ ಎಂಡಿ ಮಹೇಂದ್ರ ಮಿಶ್ರ, ಮಹಾನಗರ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್, ಸ್ಮಾರ್ಟ್ ಸಿಟಿ ಅಧಿಕಾರಿಗಳು ಹಾಗೂ ಸಂಬಂಧಿಸಿದ ಅಧಿಕಾರಿಗಳಿದ್ದರು.