6:31 PM Monday23 - February 2026
ಬ್ರೇಕಿಂಗ್ ನ್ಯೂಸ್
ಇಬ್ಬರು ಅಂತರ್ ರಾಜ್ಯ ಗಾಂಜಾ ಮಾರಾಟಗಾರರ ಸಹಿತ 4 ಮಂದಿ ಬಂಧನ: 12… ಯುವ ಕಾಂಗ್ರೆಸ್ಸಿಗರು ಬೇಷರತ್ ಕ್ಷಮೆ ಕೇಳಲಿ: ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಧೀರಜ್… ಸಿದ್ದಾಪುರ: ವಾಹನಗಳ ಮೇಲೆ ಮುಂದುವರೆದ ಕಾಡಾನೆ ದಾಳಿ; ಕೂದಲು ಎಳೆ ಅಂತರದಲ್ಲಿ ಕಾರ್ಮಿಕರು… ಪಿರಿಯಾಪಟ್ಟಣದ ರಾಷ್ಟ್ರೀಯ ಹೆದ್ದಾರಿ 275 ನಲ್ಲಿ ಅರಣ್ಯ ಬೆಂಕಿಗೆ ಅಹುತಿ:ಅಪಾರ ಪ್ರಮಾಣದ ಬಿದಿರು… ಸಿದ್ದಾಪುರ ಸಮೀಪದ ಕರಡಿಗೋಡು ಗ್ರಾಮದಲ್ಲಿ ವಾಹನ ಡಿಕ್ಕಿ: ಕಾಡುಕೋಣ ಕಾಲು ಮುರಿತ ಐರ್ಲೆಂಡ್‌ನಲ್ಲಿ ಕಡಬ ಕುಟ್ರುಪಾಡಿಯ ಯುವಕ ನಿಗೂಢವಾಗಿ ಸಾವು: ನೇಣು ಬಿಗಿದ ಸ್ಥಿತಿಯಲ್ಲಿ ಶವ… Kodagu | ಸಿದ್ದಾಪುರ: ಟ್ರ್ಯಾಕ್ಟರ್ ಮಗುಚಿ ಬಾದಾಮಿಯ ಕಾರ್ಮಿಕ ದುರ್ಮರಣ Kodagu | ಸಿದ್ದಾಪುರ ಬಳಿ ಕಾರು ಮೇಲೆ ಕಾಡಾನೆ ದಾಳಿ: ಜಖಂ ಕುಖ್ಯಾತ ರೌಡಿ ಶೀಟರ್ ಸಫ್ವಾನ್ ಬಂಧನ: ಮಂಗಳೂರು ಸಿಸಿಬಿ ಪೊಲೀಸರಿಂದ 26 ಪ್ರಕರಣಗಳ… ಆಗುಂಬೆ ಬಸ್ ನಿಲ್ದಾಣ ಬಳಿ ಎರಡು ಪ್ರತ್ಯೇಕ ಅಪಘಾತ: ಇಬ್ಬರಿಗೆ ಗಾಯ

ಇತ್ತೀಚಿನ ಸುದ್ದಿ

ಮಂಗಳೂರು: ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣದ ಮರು ತನಿಖೆಗೆ ಆಗ್ರಹಿಸಿ 20ರಂದು ಪಾದಯಾತ್ರೆ,‌ ಬೃಹತ್ ಪ್ರತಿಭಟನೆ

18/08/2023, 23:17

ಮಂಗಳೂರು(reporterkarnataka.com): ಧರ್ಮಸ್ಥಳದ ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಮರು ತನಿಖೆಗೆ ಆಗ್ರಹಿಸಿ, ಸೌಜನ್ಯ ಕುಟುಂಬಕ್ಕೆ ನ್ಯಾಯ ಒದಗಿಸಲು ಒತ್ತಾಯಿಸಿ ಸೌಜನ್ಯ ಹೋರಾಟ ಸಮಿತಿಯ ನೇತೃತ್ವದಲ್ಲಿ
ಇದೇ 20 ರಂದು ಪ್ರತಿಭಟನಾ ಸಭೆ ಹಮ್ಮಿಕೊಳ್ಳಲಾಗಿದೆ ಎಂದು ಸೌಜನ್ಯ ಹೋರಾಟ ಸಮಿತಿ ಸಂಚಾಲಕಿ ಪ್ರಸನ್ನ ರವಿ ಹೇಳಿದರು.
ಅವರು ಶುಕ್ರವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಮಧ್ಯಾಹ್ನ 3.30ಕ್ಕೆ ನಗರದ ಕದ್ರಿ ಮಂಜುನಾಥ ದೇವಸ್ಥಾನದಿಂದ ಕದ್ರಿ ಬಯಲು ರಂಗ ಮಂದಿರದವರಿಗೆ ಪಾದಯಾತ್ರೆ ನಡೆಯಲಿದೆ. ಸಂಜೆ 4 ಗಂಟೆಗೆ ಕದ್ರಿ ಮೈದಾನದಲ್ಲಿ ಪ್ರತಿಭಟನಾ ಸಭೆ ನಡೆಯಲಿದೆ. ಸೌಜನ್ಯ ಕುಟುಂಬದ ಪರವಾಗಿ ಹೋರಾಟ ನಡೆಸುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿ, ಸೌಜನ್ಯ ಅವರ ತಾಯಿ ಕುಸುಮಾವತಿ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.
ಸೌಜನ್ಯಳ ಕೊಲೆ ನಡೆದು 11 ವರ್ಷಗಳು ಆಗಿವೆ. ಆದರೆ ಇದರ ಹಿಂದಿರುವ ನೈಜ ಆರೋಪಿಗಳನ್ನು ಪತ್ತೆ ಹಚ್ಚಲು ನಮ್ಮ ಕಾನೂನು ವ್ಯವಸ್ಥೆಗೆ ಸಾಧ್ಯವಾಗಿಲ್ಲ. ಸಂತೋಷ್ ರಾವ್ ಆರೋಪಿಯಲ್ಲ ಎಂದು ನ್ಯಾಯಾಲಯ ಹೇಳಿರುವುದರಿಂದ ನೈಜ ಅಪರಾಗಳಿಗೆ ಶಿಕ್ಷೆ ಸಿಗಬೇಕು. ಸೌಜನ್ಯ ಅವರ ಕುಟುಂಬಕ್ಕೆ ನ್ಯಾಯ ದೊರಕಿಸಿಕೊಡಲು ಮಂಗಳೂರಿನ ಜನತೆ ಕೈಜೋಡಿಸಬೇಕು. ಪ್ರತಿಭಟನೆಯಲ್ಲಿ ಸ್ವಯಂಪ್ರೇರಿತರಾಗಿ ಭಾಗವಹಿಸಬೇಕು ಎಂದು ಮನವಿ ಮಾಡಿದರು. ಹೋರಾಟ ಸಮಿತಿ ಸದಸ್ಯರಾದ ವಿಖ್ಯಾತ್ ಉಳ್ಳಾಲ್, ಶಶಿಕಲಾ ಶೆಟ್ಟಿ, ಸಾಜನ್ ಶೆಟ್ಟಿ ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು