10:53 AM Wednesday22 - April 2026
ಬ್ರೇಕಿಂಗ್ ನ್ಯೂಸ್
ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ…

ಇತ್ತೀಚಿನ ಸುದ್ದಿ

Mangaluru | ಕ್ರೈಸ್ತರಿಂದ ಚರ್ಚ್ ಮತ್ತು ಸಿಮೆಟರಿ ಗಳಲ್ಲಿ ವಿಶೇಷ ಪ್ರಾರ್ಥನೆ

02/11/2025, 20:05

ಮಂಗಳೂರು(reporterkarnataka.com): ಕ್ರೈಸ್ತರು ನವೆಂಬರ್ 2ರಂದು ತಮ್ಮ ಕುಟುಂಬಗಳ ಮೃತ ಸದಸ್ಯರನ್ನು ಸ್ಮರಿಸಿ ಅವರ ಆತ್ಮಗಳಿಗೆ ಸದ್ಗತಿ ಲಭಿಸಲು ದೇವರ ಕರುಣೆ ಮತ್ತು ಅನುಗ್ರಹ ಕೋರಿ ಚರ್ಚ್ ಹಾಗೂ ಸಿಮೆಟರಿಗಳಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.
ಮಂಗಳೂರಿನ ಕುಲಶೇಖರ, ಪಾಲ್ದನೆ ಮತ್ತು ಶಕ್ತಿನಗರ ಚರ್ಚ್ ಗಳಿಗೆ ಕುಲಶೇಖರ ಚರ್ಚ್ ಸಿಮೆಟರಿಯೇ ಅಧಿಕೃತ ಸಿಮೆಟರಿ ಆಗಿದ್ದು,ಇಂದು ಈ ಮೂರು ಚರ್ಚ್ ಗಳ ಕ್ರೈಸ್ತರು ಕುಲಶೇಖರ ಚರ್ಚ್ ಗೆ ತೆರಳಿ ಅಲ್ಲಿನ ಸಿಮೆಟರಿಯಲ್ಲಿ ವಿಶೇಷ ಪ್ರಾರ್ಥನೆ ನಡೆಸಿದರು.

ಕುಲಶೇಖರ ಚರ್ಚ್ ನ ಪ್ರಧಾನ ಧರ್ಮಗುರು ವಂದನೀಯ ಫಾ. ಕ್ಲಿಫರ್ಡ್ ಫೆರ್ನಾಂಡಿಸ್ ಮತ್ತು ಪಾಲ್ದನೆ ಸಂತ ತೆರೆಸಾ ಚರ್ಚ್ ನ ಪ್ರಧಾನ ಧರ್ಮಗುರು ವಂದನೀಯ ಫಾ. ರಿಚಾರ್ಡ್ ಅಲೋಶಿಯಸ್ ಕುವೆಲ್ಲೊ ಅವರ ನೇತೃತ್ವದಲ್ಲಿ ಪ್ರಾರ್ಥನೆ ನೆರವೇರಿತು. ಪವಿತ್ರ ಜಲ ಸಿಂಪರಣೆ ಮಾಡಿ ಸಮಾಧಿಗಳನ್ನು ಆಶೀರ್ವದಿಸಿದರು. ಸಮಾಧಿ ಸ್ಥಳವನ್ನು ಸ್ವಚ್ಛಗೊಳಿಸಿ ಮೇಣದ ಬತ್ತಿಗಳನ್ನು ಉರಿಸಿ ಪ್ರಾರ್ಥನೆಗೆ ಅಣಿಗೊಳಿಸಲಾಗಿತ್ತು.
ಇದೇ ಸಂದರ್ಭದಲ್ಲಿ ಕುಲಶೇಖರ ಚರ್ಚ್ ನ ಸಿಮೆಟರಿಯಲ್ಲಿ ನೂತನವಾಗಿ ಸ್ಥಾಪಿಸಿದ ಪವಿತ್ರ ಶಿಲುಬೆಯ ಆಶೀರ್ವಾದ ಕೂಡಾ ನೆರವೇರಿತು. ಮೂರೂ ಚರ್ಚ್ ಗಳ ಕ್ರೈಸ್ತರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು