10:38 PM Wednesday30 - July 2025
ಬ್ರೇಕಿಂಗ್ ನ್ಯೂಸ್
3 ವರ್ಷ ಬಳಿಕ ಯಾವ ಪಕ್ಷದಿಂದ ಸ್ಪರ್ಧಿಸುತ್ತೇನೋ ಗೊತ್ತಿಲ್ಲ: ಶಾಸಕಿ ನಯನಾ ಮೋಟಮ್ಮ… ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ: ಏನಿಲ್ಲ ಏನಿಲ್ಲ ಎನ್ನುವುದರ ನಡುವೆ ಸಿಕ್ಕೇ ಬಿಡ್ತು… ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ: ಸ್ಪಾಟ್ ನಂಬರ್ 4ರ ಉತ್ಖನನ ಪ್ರಕ್ರಿಯೆ ಆರಂಭ ಬಾಲಮಂದಿರ, ಮಹಿಳಾ ನಿಲಯಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ದಿಢೀರ್ ಭೇಟಿ: ಚಿಣ್ಣರನ್ನು ಮುದ್ದಾಡಿದ… USA | ಡ್ರೈವರ್ ಇಲ್ಲದ ಕಾರಿನಲ್ಲಿ ಪ್ರಯಾಣಿಸಿದ ಸ್ಪೀಕರ್ ಯು.ಟಿ. ಖಾದರ್!: ಇದು… Bangaluru | ಪತ್ರಿಕಾ ಸಂಪಾದಕರ ಕೈಕಟ್ಟಿ ಹಾಕಲಾಗುತ್ತಿದೆ: ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ… Mandya | ಒಂದೇ ದಿನ 1146 ಕೋಟಿ ವೆಚ್ಚದ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ… ಬಾಳೆಬೈಲು – ಕುರುವಳ್ಳಿ ಬೈಪಾಸ್ ರಸ್ತೆಯಲ್ಲಿ ಕುಸಿಯುತ್ತಿರುವ ಗುಡ್ಡ: ಬ್ಯಾರಿಕೆಡ್ ಹಾಕಿರುವ ಪೊಲೀಸರು Shivamogga | ತೀರ್ಥಹಳ್ಳಿ: ಬೆಜ್ಜವಳ್ಳಿ ಸಮೀಪ ಸ್ಕೂಟಿಗೆ ಹಿಂಭಾಗದಿಂದ ಬಸ್ ಡಿಕ್ಕಿ; ಸವಾರ… ಮಡಿಕೇರಿ -ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ತಡರಾತ್ರಿ ಒಂಟಿ ಸಲಗ ಪ್ರತ್ಯಕ್ಷ: ಪ್ರಯಾಣಿಕರಲ್ಲಿ ಭೀತಿ

ಇತ್ತೀಚಿನ ಸುದ್ದಿ

Mangaluru | ಕೋಮು ಹಿಂಸಾಚಾರ ಹತ್ತಿಕ್ಕಲು ವಿಶೇಷ ಕಾರ್ಯಪಡೆ ರೆಡಿ: 4 ತುಕಡಿಗಳ ರಚನೆ

13/06/2025, 18:14

ಮಂಗಳೂರು(reporterkarnata.com):ಕೋಮು ದಳ್ಳುರಿಗೆ ಬೆಂದು ಹೋಗಿರುವ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಮಲೆನಾಡು ಪ್ರದೇಶಗಳಿಗೆ ಸಾಂತ್ವಾನ ಹೇಳುವ ನಿಟ್ಟಿನಲ್ಲಿ ಅಸ್ತಿತ್ವಕ್ಕೆ ಬಂದ ವಿಶೇಷ ಕಾರ್ಯಪಡೆಗೆ ಶುಕ್ರವಾರ ಅಧಿಕೃತ ಚಾಲನೆ ನೀಡಲಾಯಿತು.


ಕರಾವಳಿ ಹಾಗೂ ಮಲೆನಾಡಿನ ಶಿವಮೊಗ್ಗ ಜಿಲ್ಲೆಗಳಲ್ಲಿ ಪದೇ ಪದೇ ತಲೆ ಎತ್ತುತ್ತಿರುವ ಕೋಮು ಸಂಘರ್ಷ, ಕೋಮು ಆಧಾರಿತ ಹತ್ಯೆಗಳನ್ನು ತಡೆಯುವ ನಿಟ್ಟಿನಲ್ಲಿ ರಾಜ್ಯ ಸರಕಾರ ವಿಶೇಷ ಕಾರ್ಯಪಡೆಯನ್ನು ರಚಿಸಿದೆ. ಈ ಕಾರ್ಯಪಡೆಗೆ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಮಂಗಳೂರಿನಲ್ಲಿ ಚಾಲನೆ ನೀಡಿದ್ದಾರೆ. ಕೋಮು ನಿಗ್ರಹ ಕಾರ್ಯಪಡೆಯು ದಕ್ಷಿಣ ಕನ್ನಡ, ಉಡುಪಿ ಮತ್ತು ಶಿವಮೊಗ್ಗ ಜಿಲ್ಲೆಯ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸಲಿದೆ.
ಈ ವಿಶೇಷ ಕಾರ್ಯಪಡೆಯ ಕೇಂದ್ರ ಕಚೇರಿ ಮಂಗಳೂರಿನಲ್ಲಿ ಇರಲಿದೆ.

*ಪಡೆಯಲ್ಲಿ ಯಾರಿದ್ದಾರೆ?:*
ಸ್ಪೆಷಲ್ ಆಕ್ಷನ್ ಫೋರ್ಸ್ (ಎಸ್‌ಎಎಫ್)ಗೆ ನಕ್ಸಲ್ ನಿಗ್ರಹ ಪಡೆ (ಎಎನ್‌ಎಫ್) ಯಲ್ಲಿದ್ದ ಸಿಬಂದಿಯನ್ನೇ ನಿಯೋಜಿಸಲಾಗಿದೆ. ಡಿಐಜಿ ದರ್ಜೆಯ ಅಧಿಕಾರಿಯೊಬ್ಬರು ಇದರ ಮುಖ್ಯಸ್ಥರು. ಸದ್ಯಕ್ಕೆ ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಅವರೇ ಹೆಚ್ಚುವರಿಯಾಗಿ ನೇತೃತ್ವ ವಹಿಸಲಿದ್ದಾರೆ. ಎಎನ್‌ಎಫ್ ಪಡೆಯಿಂದ ಎರವಲು ಪಡೆದ 248 ಸಿಬ್ಬಂದಿಯನ್ನು ಹೊಸ ಕಾರ್ಯಪಡೆಗೆ ನಿಯೋಜನೆ ಮಾಡಲಾಗಿದ್ದು, ಇವನ್ನು ಮೂರು ತುಕಡಿಗಳಾಗಿ ವಿಭಜಿಸಲಾಗಿದೆ. ಪ್ರತಿ ತುಕಡಿಯಲ್ಲಿ ತಲಾ 78 ಸಿಬ್ಬಂದಿ ಇರಲಿದ್ದಾರೆ.

*ಎಲ್ಲೆಲ್ಲ ಕಾರ್ಯನಿರ್ವಹಿಸಲಿ?:*
ಕೋಮು ಸೂಕ್ಷ್ಮ ಪ್ರದೇಶಗಳಲ್ಲಿ ಈ ಕಾರ್ಯಪಡೆಯು ವಿಶೇಷ ನಿಗಾ ವಹಿಸಲಿದ್ದು, ಯಾವುದೇ ಅಹಿತಕರ ಘಟನೆಗಳಾದರೂ ಈ ಪಡೆಯ ಸದಸ್ಯರು ತುರ್ತಾಗಿ ಹಾಜರಾಗಲಿದ್ದಾರೆ. ಕೋಮು ಸೂಕ್ಷ್ಮ ಪ್ರದೇಶದಲ್ಲಿ ತಮ್ಮದೇ ಆದ ಗುಪ್ತಚರ ದಳವನ್ನೂ ಈ ಕಾರ್ಯಪಡೆ ಹೊಂದಿರುತ್ತದೆ. ಆಮೂಲಕ ಸಂಭಾವ್ಯ ಕೋಮು ಹಿಂಸಾಚಾರ, ಗಲಭೆಯಂತಹ ಸಂಚುಗಳನ್ನು ಕಾರ್ಯಪಡೆ ವಿಫಲಗೊಳಿಸಲಿದೆ.
ಕೋಮು ದ್ವೇಷದ ವಿಚಾರದ ಮೇಲೆ ನಿಗಾ ವಹಿಸುವುದು, ಮೂಲಭೂತವಾದಿ ಚಟುವಟಿಕೆ ಬಗ್ಗೆ ನಿಗಾ ಇಡುವುದು, ಜಾಲತಾಣಗಳ ಮೇಲೆ ಸೂಕ್ಷ್ಮ ನಿಗಾ ಇಡುವ ಕೆಲಸವನ್ನೂ ಗುಪ್ತಚರರು ಮಾಡಲಿದ್ದಾರೆ.

*ಡಿಐಜಿ ದರ್ಜೆ:* ಡಿಐಜಿ ದರ್ಜೆಯ ಮುಖ್ಯಸ್ಥರ ಕೈಕೆಳಗೆ ಡಿವೈಎಸ್ಪಿ ಇರುತ್ತಾರೆ. ಸದ್ಯಕ್ಕೆ ಮಂಗಳೂರಿನಲ್ಲಿ ಈ ಹಿಂದೆ ಸುದೀರ್ಘ ಕಾಲ ಕೆಲಸ ಮಾಡಿ ಅನುಭವ ಹೊಂದಿರುವ ಕೆ.ಯು ಬೆಳ್ಳಿಯಪ್ಪ ಅವರನ್ನು ಕಾರ್ಯಪಡೆಯ ಡಿವೈಎಸ್ಪಿ ಹುದ್ದೆಗೆ ನಿಯೋಜನೆ ಮಾಡಲಾಗಿದೆ. ಅವರ ಕೈಕೆಳಗೆ ನಾಲ್ವರು ಇನ್ಸ್ ಪೆಕ್ಟರ್, 16 ಪಿಎಸ್‌ಐಗಳು ಇರುತ್ತಾರೆ. ಒಟ್ಟು 248 ಸಿಬ್ಬಂದಿಗಳು ಇರುತ್ತಾರೆ.
ನಕ್ಸಲ್ ನಿಗ್ರಹ ಪಡೆಯಲ್ಲಿದ್ದ ಇನ್ಸ್ ಪೆಕ್ಟರ್ ಸಹಿತ 248 ಸಿಬ್ಬಂದಿಯನ್ನು ಸ್ಪೆಷಲ್ ಆ್ಯಕ್ಷನ್ ಫೋರ್ಸ್ ಆಗಿ ಹೊಸತಾಗಿ ಕಾರ್ಯಪಡೆ ರಚಿಸಲಾಗಿದೆ. ಮೂರು ಜಿಲ್ಲೆಗಳ ವ್ಯಾಪ್ತಿಯಲ್ಲಿ ಯಾವುದೇ ಠಾಣೆ ವ್ಯಾಪ್ತಿಯಲ್ಲಿ ಕೋಮು ಆಧಾರಿತ ಗಲಾಟೆ, ಇನ್ನಿತರ ಬೆಳವಣಿಗೆಯಾದರೆ ಈ ಕಾರ್ಯಪಡೆ ನಿಯಂತ್ರಿಸಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು