8:28 PM Thursday20 - November 2025
ಬ್ರೇಕಿಂಗ್ ನ್ಯೂಸ್
ಕಲಾ ಗ್ರಾಮದಲ್ಲಿ ಸಾಲುಮರದ ತಿಮ್ಮಕ್ಕ ಜತೆಗೆ ಸಾಹಿತಿ ಯು.ಆರ್. ಅನಂತಮೂರ್ತಿ, ಕವಿ ಡಾ.… ಬಿಜೆಪಿಯಿಂದ ಭೀಮ ಸ್ಮರಣೆ ಕಾರ್ಯಕ್ರಮ; ಕಾಂಗ್ರೆಸ್‌ ಮಾಡಿದ ಅನ್ಯಾಯದ ಕುರಿತು ಜಾಗೃತಿ: ಪ್ರತಿಪಕ್ಷ… ಭಾರತದ ಅತ್ಯಂತ ವಿಶ್ವಾಸಾರ್ಹ ಹೂಡಿಕೆಯ ತಾಣ ಕರ್ನಾಟಕ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಜನ್ಮದಿನಾಚರಣೆ ಚಾಲಕನ ಅಜಾಗರೂಕತೆ: ವಿದ್ಯಾರ್ಥಿಗಳಿಂದ ತುಂಬಿದ್ದ ಕೇರಳ ಮೂಲದ ಪ್ರವಾಸಿ ಬಸ್ ಪಲ್ಟಿ ಕೊಡಗಿನ ಪ್ರಮುಖ ಹಬ್ಬ ಪುತ್ತರಿಗೆ ದಿನಾಂಕ ನಿಗದಿ: ಪಾಡಿ ಶ್ರೀ ಇಗ್ಗುತ್ತಪ್ಪ ಸನ್ನಿಧಿಯಲ್ಲಿ… ಕೊಡಗಿನಲ್ಲಿ ಹೆಚ್ಚಾಗುತ್ತಿರುವ ಬೀದಿ ನಾಯಿ ಹಾವಳಿ ತಡೆಗೆ ಜಿಲ್ಲಾಡಳಿತ ಕ್ರಮ: ಶ್ವಾನಗಳ ಸ್ಥಳಾಂತರಕ್ಕಾಗಿ… Mandya | ಶಿವನಸಮುದ್ರ: 4 ದಿನಗಳಿಂದ ನಾಲೆಯಲ್ಲಿ ಸಿಲುಕಿದ್ದ ಮರಿಯಾನೆಯ ರಕ್ಷಣೆ Kodagu | ಪಿರಿಯಾಪಟ್ಟಣ: ಅತ್ತೆ ಮನೆಗೆ ಬಂದು ಈಜಲು ಹೋದ ಬಾಲಕ ನೀರಿನಲ್ಲಿ… Madikeri | ಕಾಡಾನೆ ದಾಳಿಗೆ ಸಿಲುಕಿದ್ದ ಟೀ ಅಂಗಡಿಯಲ್ಲಿ ಆಕಸ್ಮಿಕ ಬೆಂಕಿ ಅನಾಹುತ:…

ಇತ್ತೀಚಿನ ಸುದ್ದಿ

Mangaluru | ಬೀದಿ ನಾಯಿಗಳ ಹಾವಳಿ: ಪಾಲಿಕೆಗೆ ವರದಿ ನೀಡಲು ಸೂಚನೆ

20/11/2025, 18:55

ಮಂಗಳೂರು(reporterkarnataka.com): ನಗರ ಸ್ಥಳೀಯ ಸಂಸ್ಥೆಯ ವ್ಯಾಪ್ತಿಯಲ್ಲಿನ ಖಾಸಗಿ ಹಾಗೂ ಸರ್ಕಾರಿ ಶಿಕ್ಷಣ ಸಂಸ್ಥೆಗಳು ಖಾಸಗಿ ಹಾಗೂ ಸರ್ಕಾರಿ ಆಸ್ಪತ್ರೆಗಳು, ಕ್ರೀಡಾ ಸಂಕೀರ್ಣಗಳು, ಬಸ್ ನಿಲ್ದಾಣಗಳು, ರೈಲ್ವೆ ನಿಲ್ದಾಣಗಳ ಮುಖ್ಯಸ್ಥರು ತಮ್ಮ ಸಂಸ್ಥೆಯ ಆವರಣದಲ್ಲಿ ಯಾವುದೇ ಬೀದಿ ನಾಯಿಗಳು ವಾಸವಿದ್ದಲ್ಲಿ ಅದನ್ನು ಪರಿಶೀಲಿಸಿ ಮುಂದಿನ 5 ದಿನಗಳೊಳಗಾಗಿ ಅದರ ಸಂಖ್ಯೆಯನ್ನು ಲೆಕ್ಕ ಮಾಡಿ ತಿಳಿಸಬೇಕು.
ತಮ್ಮ ಸಂಸ್ಥೆಯ ಆವರಣದಲ್ಲಿ ಬೀದಿ ನಾಯಿಗಳ ಉಪಟಳ ತಡೆಯಲು ಹಾಗೂ ಅವುಗಳ ಪ್ರದೇಶ ನಿಯಂತ್ರಿಸಲು ಕ್ರಮ ವಹಿಸಬೇಕು. ನಗರ ಸ್ಥಳೀಯ ಸಂಸ್ಥೆಯಿಂದ ಬೀದಿ ನಾಯಿಗಳನ್ನು ಸ್ಥಳಾಂತರಿಸಲು ಸಹಕರಿಸಲು ಹಾಗೂ ಅವುಗಳ ಪ್ರವೇಶ ನಿರ್ಬಂಧಿಸುವುದನ್ನು ಮೇಲ್ವಿಚಾರಣೆ ಮಾಡಲು ಸಂಸ್ಥೆ ವತಿಯಿಂದ ಒಬ್ಬ ಜವಾಬ್ದಾರಿಯುತ ನೌಕರರನ್ನು ನೋಡಲ್ ಅಧಿಕಾರಿಯಾಗಿ ನೇಮಕ ಮಾಡಬೇಕು. ಸರ್ವೋಚ್ಛ ನ್ಯಾಯಾಲಯದ ನಿರ್ದೇಶನದಂತೆ ಪುನ: ನಾಯಿಗಳು ವಾಸ ಮಾಡಲು ಅವಕಾಶ ಕೊಟ್ಟಲ್ಲಿ ಅವನ್ನು ಸ್ಥಳಾಂತರಿಸುವ ವೆಚ್ಚವನ್ನು ತಮ್ಮ ಸಂಸ್ಥೆಯಿಂದಲೇ ವಸೂಲಿ ಮಾಡಲಾಗುತ್ತದೆ. ಸರ್ವೋಚ್ಚ ನ್ಯಾಯಾಲಯದ ಆದೇಶ ಉಲ್ಲಂಘನೆ ಮಾಡಿದ್ದಲ್ಲಿ ನ್ಯಾಯಾಲಯದ ಆದೇಶದಂತೆ ತಮ್ಮ ವಿರುದ್ದ ಕಾನೂನು ಕ್ರಮ ವಹಿಸಲಾಗುತ್ತದೆ ಎಂದು ಮಹಾನಗರಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು