2:22 AM Sunday20 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ಮಂಗಳೂರು : ಜೆಪ್ಪಿನಮೊಗರು ಸಂಗಮ್ ಫ್ರೆಂಡ್ಸ್ ಕ್ಲಬ್ ಅಧ್ಯಕ್ಷರಾಗಿ ಸುಧಾಕರ್ ಜೆ. ಪುನರಾಯ್ಕೆ

22/07/2026, 10:44

ಮಂಗಳೂರು:(reporterkarnataka.com):ಜೆಪ್ಪಿನಮೊಗುರು ಸಂಗಮ್ ಫ್ರೆಂಡ್ಸ್ ಕ್ಲಬ್‌ನ ವಾರ್ಷಿಕ ಮಹಾಸಭೆ ಇತ್ತೀಚೆಗೆ ನಡೆಯಿತು. ಸಭೆಯಲ್ಲಿ 2026-27ನೇ ಸಾಲಿನ ನೂತನ ಪದಾಧಿಕಾರಿಗಳನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

ನೂತನ ಅಧ್ಯಕ್ಷರಾಗಿ ಸುಧಾಕರ್ ಜೆ. ಪುನರಾಯ್ಕೆಯಾದರೆ, ಗೌರವಾಧ್ಯಕ್ಷರಾಗಿ ಪುಷ್ಪರಾಜ್ ಶೆಟ್ಟಿ, ಉಪಾಧ್ಯಕ್ಷರಾಗಿ ಸಂತೋಷ್ ಕೊಟ್ಟಾರಿ, ಪ್ರಧಾನ ಕಾರ್ಯದರ್ಶಿಯಾಗಿ ಕೀರ್ತಿರಾಜ್ ಅಮೀನ್, ಕೋಶಾಧಿಕಾರಿಯಾಗಿ ಸಂದೇಶ್ ಕುಮಾರ್ ಹಾಗೂ ಜತೆ ಕಾರ್ಯದರ್ಶಿಯಾಗಿ ಜಯರಾಮ್ ಕೊಟ್ಟಾರಿ ಆಯ್ಕೆಯಾದರು. ಇದೇ ವೇಳೆ 20 ಸದಸ್ಯರ ಕಾರ್ಯಕಾರಿ ಸಮಿತಿಯನ್ನೂ ರಚಿಸಲಾಯಿತು.

ಸಭೆಯಲ್ಲಿ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಪರೀಕ್ಷೆಗಳಲ್ಲಿ ಉತ್ತಮ ಅಂಕಗಳೊಂದಿಗೆ ಉತ್ತೀರ್ಣರಾದ ಸ್ಥಳೀಯ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ನೀಡುವ ಮಹತ್ವದ ತೀರ್ಮಾನ ಕೈಗೊಳ್ಳಲಾಯಿತು.

ಕಾರ್ಯಕ್ರಮದಲ್ಲಿ ಕೀರ್ತಿರಾಜ್ ಅಮೀನ್ ಸ್ವಾಗತಿಸಿದರು. ಸಂದೇಶ್ ಕುಮಾರ್ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು