6:05 PM Sunday11 - January 2026
ಬ್ರೇಕಿಂಗ್ ನ್ಯೂಸ್
ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ… ಅಕ್ರಮ ಗಾಂಜಾ ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳ ಬಂಧನ ನಮ್ಮ ಮೆಟ್ರೋದಲ್ಲಿ ವಿದ್ಯಾರ್ಥಿಗಳಿಗೆ ರಿಯಾಯಿತಿ ಪಾಸ್: ಎಎಪಿ ಯುವ ಘಟಕದಿಂದ ಸಹಿ ಸಂಗ್ರಹಣ…

ಇತ್ತೀಚಿನ ಸುದ್ದಿ

Mangaluru | ಕಡಲನಗರಿಯಲ್ಲಿ ಸ್ವರಾನುಬಂಧ ಸಂಗೀತ ಉತ್ಸವ; ಉಸ್ತಾದ್ ರಫೀಕ್ ಖಾನ್, ಪಂಡಿತ್ ರಾಜೇಂದ್ರ ನಾಕೋಡ್, ಪಂಡಿತ್ ಸಮೀರ್ ರಾವ್ ಗೆ ಸನ್ಮಾನ

11/01/2026, 18:05

ಮಂಗಳೂರು(reporterkarnataka.com): ಮಂಗಳೂರಿನ ಕಲಾ ಸಾಧನಾ ಸಂಸ್ಥೆ ವತಿಯಿಂದ ಸ್ವರಾನುಬಂಧ ಸಂಗೀತ ಉತ್ಸವ ಉದ್ಘಾಟನೆ ನಗರದಲ್ಲಿ ನಡೆಯಿತು.
ಕಾರ್ಯಕ್ರಮವನ್ನು ಉದ್ಘಾಟಿಸಿದ ಎಕ್ಸ್ಪರ್ಟ್ ಕಾಲೇಜು ಉಪಾಧ್ಯಕ್ಷೆ ಉಷಾಪ್ರಭಾ ನಾಯಕ್ ಮಾತನಾಡಿ, ಸಂಗೀತ ಕಲೆ ಯನ್ನು ಬೆಳೆಸಲು ಪ್ರತಿಯೊಬ್ಬರ ಸಹಕಾರ ಅಗತ್ಯವಿದೆ. ಸಂಗೀತಕ್ಕೂ ಸ್ವರಕ್ಕೂ ಅವಿನಾವಭಾವ ಸಂಬಂಧವಿದೆ ಎಂದು ಹೇಳಿದರು.
ಕಲಾವಿದರಿಗೆ ಸನ್ಮಾನ ನೆರವೇರಿಸಿ ಮಾತನಾಡಿದ ಅದಾನಿ ಸಮೂಹ ಸಂಸ್ಥೆಗಳ ಅಧ್ಯಕ್ಷ ಕಿಶೋರ್ ಆಳ್ವ ಮಾತನಾಡಿ, ಸಂಗೀತ ಆಲಿಸುವುದರ ಮೂಲಕ ಮಾನಸಿಕ ನೆಮ್ಮದಿ ಪಡೆಯಲು ಸಾಧ್ಯ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಎಂ ಆರ್ ಪಿ ಎಲ್ ಕಂಪನಿ ಗ್ರೂಪ್ ಜನರಲ್ ಮ್ಯಾನೇಜರ್ ಕೃಷ್ಣ ಹೆಗ್ಡೆ, ಕಾರ್ಡೋಲೈಟ್ ಸ್ಪೆಷಲಿಟಿ ಕೆಮಿಕಲ್ಸ್ ಪ್ರೈವೇಟ್ ಲಿಮಿಟೆಡ್ ಜನರಲ್ ಮ್ಯಾನೇಜರ್ ದಿವಾಕರ್ ಕೆ., ಮಂಗಳೂರು ಸ್ಮಾರ್ಟ್ ಸಿಟಿ ಜನರಲ್ ಮ್ಯಾನೇಜರ್ ಅರುಣಾ ಪ್ರಭಾ, ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ. ಬಿ. ಹರೀಶ್ ರೈ, ಕಲಾ ಸಾಧನಾ ಸಂಸ್ಥೆ ನಿರ್ದೇಶಕಿ ವಿಭಾ ಶ್ರೀನಿವಾಸ್ ನಾಯಕ್, ಸಂಸ್ಥೆ ಗೌರವ ಸಲಹೆಗಾರ ಶ್ರೀನಿವಾಸ್ ನಾಯಕ್ ಇಂದಾಜೆ ಉಪಸ್ಥಿತರಿದ್ದರು. ಭಾಸ್ಕರ್ ರೈ ಕಟ್ಟಾ ಸ್ವಾಗತಿಸಿದರು. ಪುಷ್ಪರಾಜ್ ಬಿ. ಎನ್. ವಂದಿಸಿದರು. ಆಕಾಂಕ್ಷ ಶ್ರೀಶ ನಾಯಕ್ ವಂದಿಸಿದರು.
ಅಂತಾರಾಷ್ಟ್ರೀಯ ಖ್ಯಾತಿಯ ಕಲಾವಿದರಾದ ಉಸ್ತಾದ್ ರಫೀಕ್ ಖಾನ್, ಪಂಡಿತ್ ರಾಜೇಂದ್ರ ನಾಕೋಡ್ ಹಾಗೂ ಪಂಡಿತ್ ಸಮೀರ್ ರಾವ್ ಅವರನ್ನು ಸನ್ಮಾನಿಸಲಾಯಿತು. ಬಳಿಕ ನಡೆದ ಜುಗಲ್ ಬಂಧಿ ಕಾರ್ಯಕ್ರಮ ಜನಮನ ಸೂರೆಗೊಳಿಸಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು