3:52 PM Sunday29 - November 2026
ಬ್ರೇಕಿಂಗ್ ನ್ಯೂಸ್
ನಶಾಮುಕ್ತ ಯುವಜನತೆಯು ವಿಕಸಿತ ಭಾರತದ ಭದ್ರ ಬುನಾದಿ: ರಾಜ್ಯಪಾಲರಾದ ಡಾ. ಸುಧಾ ಯಾದವ್ ಪಶ್ಚಿಮ ಬಂಗಾಳಕ್ಕೆ ಇನ್ನು ಮುಂದೆ ಹೊಸ ಹೆಸರು!: ಮರು ನಾಮಕರಣಕ್ಕೆ ಅದೊಂದೇ ಕಾರಣ! ಮೇಕೆದಾಟು ಯೋಜನೆ : ಪರಿಸರ ಪರಿಣಾಮಗಳ ಅಧ್ಯಯನಕ್ಕೆ ಕೇಂದ್ರ ವನ್ಯಜೀವಿ ಮಂಡಳಿ ಒಪ್ಪಿಗೆ ಮೂಡಿಗೆರೆ | ಮುತ್ತಿಗೆಪುರ ಗ್ರಾಮದ ವಿಂಧನ್ ಮನೆ ಮೇಲೆ ಗುಂಡಿನ ದಾಳಿ: ಕೂದಲೆಳೆಯ… ಆಫ್ರಿಕಾದ ಕಾಂಗೋದಲ್ಲಿ 95 ಕನ್ನಡಿಗರ ಬಂಧನ: ಶಿವಮೊಗ್ಗ, ದಾವಣಗೆರೆಯ ಹಕ್ಕಿಪಿಕ್ಕಿ ಸಮುದಾಯ ಏಜೆಂಟರ… ಚಿಕ್ಕಮಗಳೂರು | ಬಸವ ಮಂಟಪ ಪುಸ್ತಕದ ವಿವಾದ: ಬಾಳೆಹೊನ್ನೂರಿನ ರಂಭಾಪುರಿ ಪೀಠ ಖಂಡನೆ ಕರ್ನಾಟಕದಲ್ಲಿ ಬೈಕ್‌ ಟ್ಯಾಕ್ಸಿ ಸೇವೆಗೆ ಗ್ರೀನ್ ಸಿಗ್ನಲ್: ರಾಜ್ಯ ಸರ್ಕಾರದ ಮೇಲ್ಮನವಿ‌ ವಜಾಗೊಳಿಸಿದ… ಕಾವೇರಿ ನದಿ ನೀರು ಹಂಚಿಕೆ | ಕರ್ನಾಟಕಕ್ಕೆ ಬಿಗ್ ರಿಲೀಫ್: ತಮಿಳನಾಡು 2… ತಲಕಾವೇರಿ ಅನ್ನದಾನ ಮಹಾಯಜ್ಞ ಸಂಪನ್ನ: ಕೊಡಗು ಏಕೀಕರಣ ರಂಗದ ವತಿಯಿಂದ ಒಂದು ತಿಂಗಳ… ಸಿನಿಮಾ ನಟರನ್ನು ನೋಡಿ ಸಿಗರೇಟ್ ಸೇದಬೇಡಿ, ಐಸಿಯು ಸೇರುವ ಪರಿಸ್ಥಿತಿ ಬರಬಹುದು: ಆರೋಗ್ಯ…

ಇತ್ತೀಚಿನ ಸುದ್ದಿ

Mangaluru | ಬಿಜೆಪಿ ಮಂಗಳೂರು ದಕ್ಷಿಣ ಮಂಡಲದ ಶಿಕ್ಷಣ ಪ್ರಕೋಷ್ಠದ ಪದಗ್ರಹಣ

29/11/2026, 15:42

ಮಂಗಳೂರು(reporterkarnataka.com):ಭಾರತೀಯ ಜನತಾ ಪಾರ್ಟಿ ಮಂಗಳೂರು ದಕ್ಷಿಣ ಮಂಡಲದ ಶಿಕ್ಷಣ ಪ್ರಕೋಷ್ಢದ ಘೋಷಣೆ ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ಕಚೇರಿಯಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ ಕುಂಪಲ ಅವರ ಅಧ್ಯಕ್ಷತೆಯಲ್ಲಿ ನಗರದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆಯಿತು.
ಎ.ಕೆ. ಬಾಬು ಸಂಚಾಲಕರಾಗಿ,ಸಂಧ್ಯಾ ಸಹ ಸಂಚಾಲಕರಾಗಿ, ಗೋಪಾಲಕೃಷ್ಣ ಭಟ್, ರಾಜೀವ ಮಾಸ್ಟರ್, ಮೋಹನ್ ಕೆ. ಬೋಳಾರ್, ಅನಿಲ್ ಕುಮಾರ್, ವಿನೋದ ಟೀಚರ್ ಇವರನ್ನು ಶಿಕ್ಷಣ ಪ್ರಕೋಷ್ಟದ ಸದಸ್ಯರನ್ನಾಗಿ ಘೋಷಣೆ ಮಾಡಲಾಯಿತು.
ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ ದೇಶದ ಬೆಳವಣಿಗೆಯಲ್ಲಿ ಮತ್ತು ಸುಸಂಸ್ಕೃತ ಸಮಾಜ ಕಟ್ಟುವಲ್ಲಿ ಶಿಕ್ಷಕರ ಪಾತ್ರ ಬಹು ಮುಖ್ಯ ಎಂದು ಹೇಳಿದರು.
ಈ ಸಂದರ್ಭದಲ್ಲಿ ಮಂಡಲ ಪ್ರಧಾನ ಕಾರ್ಯದರ್ಶಿ ರಮೇಶ್ ಹೆಗ್ಡೆ ಮತ್ತು ಇನ್ನೋರ್ವ ಪ್ರಧಾನ ಕಾರ್ಯದರ್ಶಿಗಳಾದ ಲಲ್ಲೇಶಕುಮಾರ್ ಭಾಗವಹಿಸಿದ್ದರು.
ಜಿಲ್ಲಾ ಪ್ರಕೋಷ್ಟಗಳ ಸಂಯೋಜಕರಾದ ಸುಧೀರ್ ಶೆಟ್ಟಿ ಕಣ್ಣೂರ್ ಮತ್ತು ರಾಜ್ಯ ಶಿಕ್ಷಣ ಪ್ರಕೋಷ್ಟದ ಸದಸ್ಯರಾದ
ಮುರಳಿ ಹೊಸ ಮಜಲು ಶಿಕ್ಷಣ ಪ್ರಕೋಷ್ಠದ ಚುಟುವಟಿಕೆಗಳ ಮಾಹಿತಿ ನೀಡಿದರು.
ಜಿಲ್ಲಾ ಶಿಕ್ಷಣ ಪ್ರಕೋಷ್ಠದ ಸಂಚಾಲಕರಾದ ವಸಂತ ಕೋಡಿ ಮಂಜನಾಡಿ ಸ್ವಾಗತಿಸಿದರು. ಸಹ ಸಂಚಾಲಕರಾದ ನಾರಾಯಣ ಗೌಡ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು