8:37 PM Thursday2 - October 2025
ಬ್ರೇಕಿಂಗ್ ನ್ಯೂಸ್
ಮುಂದಿನ ವರ್ಷವೂ ನಾನೇ ದಸರಾ ಪುಷ್ಪಾರ್ಚನೆ ಮಾಡುತ್ತೇನೆ: ಸಿಎಂ ಸಿದ್ದರಾಮಯ್ಯ ಭರವಸೆಯ ನುಡಿ ಮೈಸೂರು ದಸರಾ: ಅರಮನೆ ಆವರಣದಲ್ಲಿ ಯದುವೀರ್ ಒಡೆಯರ್ ರಿಂದ ಶಮಿ ಪೂಜೆ ವಿಶ್ವ ವಿಖ್ಯಾತ ಮೈಸೂರು ದಸರಾ: ಜಂಬೂ ಸವಾರಿಗೆ ಗಜಪಡೆ ಸಜ್ಜು ಮೈಸೂರು ಅರಮನೆಗೆ ಬೆಳ್ಳಿ ರಥದಲ್ಲಿ ಹೊರಟ ಚಾಮುಂಡಿ ದೇವಿ: ಬಿಗಿ ಬಂದೋಬಸ್ತ್ Bangaluru | ಇತಿಹಾಸಕಾರ, ಲೇಖಕ ಡಾ. ರಾಮಚಂದ್ರ ಗುಹಾಗೆ ಮಹಾತ್ಮ ಗಾಂಧಿ ಸೇವಾ… ಮೈಸೂರು ಅರಮನೆಯಲ್ಲಿ ಆಯುಧ ಪೂಜೆ ಸಂಭ್ರಮ: ಪಟ್ಟದ ಆನೆ, ಕುದುರೆ, ಒಂಟೆಗೂ ಪೂಜೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದಸರಾ ಸಂಭ್ರಮ: ದೇಶ – ವಿದೇಶಗಳ ಪ್ರಯಾಣಿಕರಿಗೆ… ಸಾಲ ಮರು ಪಾವತಿಸಲು ಬ್ಯಾಂಕ್ ಅಧಿಕಾರಿಗಳ ಕಿರುಕುಳ: ರೈತ ಮನನೊಂದು ಆತ್ಮಹತ್ಯೆ ಕಲ್ಯಾಣದ ನೆರೆ ಸಂತ್ರಸ್ತರಿಗೆ ಸ್ಪಂದಿಸದ ರಾಜ್ಯ ಸರಕಾರ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ… ಹಾರಂಗಿ ಜಲಾಶಯ ವೀಕ್ಷಣೆ ಮಾಡಿ ಹಿಂತಿರುಗುತ್ತಿದ್ದ ಪ್ರವಾಸಿ ಬಸ್ ಅಪಘಾತ: ಹಲವು ವಿದ್ಯಾರ್ಥಿಗಳಿಗೆ…

ಇತ್ತೀಚಿನ ಸುದ್ದಿ

Mangaluru | ತಾಪಮಾನ ಹೆಚ್ಚಳ, ಭೂ ಕುಸಿತಕ್ಕೆ ಪರಿಸರದ ಮೇಲೆ ನಡೆಸಿರುವ ಅತಿಕ್ರಮಣ ಕಾರಣ: ಆರ್.ಕೆ. ನಾಯರ್

14/07/2025, 22:07

ಮಂಗಳೂರು(reporterkarnataka.com): ಭವಿಷ್ಯದ ಜೀವ ಜಗತ್ತಿನ ಸಂರಕ್ಷಣೆಯ ದೃಷ್ಟಿಯಿಂದ ನಮ್ಮ ಸುತ್ತಮುತ್ತಲಿನ ಪರಿಸರದ ಸಂರಕ್ಷಣೆಯ ಬಗ್ಗೆ ಜಾಗೃತಿ ಮೂಡಿಸಬೇಕಾಗಿದೆ ಎಂದು ಗ್ರೀನ್ ಹೀರೋ ಆಫ್ ಇಂಡಿಯಾ ಖ್ಯಾತಿಯ ಆರ್.ಕೆ.ನಾಯರ್ ಹೇಳಿದ್ದಾರೆ.
ಅವರು ನಗರದ ರೋಶನಿ ನಿಲಯದ ಗ್ರಾಮೀಣಾಭಿವೃದ್ಧಿ ಅಧ್ಯಯನ ವಿಭಾಗದ ವತಿಯಿಂದ ಸೋಮವಾರ ಹಮ್ಮಿಕೊಂಡ ಪರಿಸರ ಜಾಗೃತಿ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡುತ್ತಿದ್ದರು.
ದೇಶದಲ್ಲಿ ಜೈವಿಕ ಕಾಡುಗಳ ನಾಶ,ಮರ ಗಿಡಗಳ ನಾಶವಾಗುತ್ತಿರುವ ಹಿನ್ನೆಲೆಯಲ್ಲಿ ಪರಿಸರದ ಮೇಲೆ ಸಾಕಷ್ಟು ದುಷ್ಪರಿಣಾಮಗಳು ಉಂಟಾಗುತ್ತಿವೆ. ಇತ್ತೀಚಿನ ಕೊರೋನಾದಂತಹ ಸಾಂಕ್ರಾಮಿಕ ರೋಗ ಪ್ರಸರಣಕ್ಕೂ ಪರಿಸರದ ಮೇಲಾಗಿರುವ ಹಾನಿಯೂ ಒಂದು ಕಾರಣ. ಜಾಗತಿಕ ತಾಪಮಾನದ ಹೆಚ್ಚಳ ಅಲ್ಲಲ್ಲಿ ಉಂಟಾಗಿರುವ ಭೂ ಕುಸಿತ ಪರಿಸರದ ಮೇಲೆ ಮನುಷ್ಯ ನಡೆಸಿರುವ ಅತಿಕ್ರಮಣದ ಪರಿಣಾಮವಾಗಿದೆ. ಈ ಪರಿಸರ ಕೇವಲ ಮನುಷ್ಯರಿಗೆ ಮಾತ್ರ ಸೇರಿದ್ದಲ್ಲ ಆದುದರಿಂದ ಇಲ್ಲಿರುವ ಎಲ್ಲಾ ಜೀವ ರಾಶಿಗಳ ಸಂರಕ್ಷಣೆಗೆ ಪರಿಸರ ಸ್ನೇಹಿಯಾದ ನಮ್ಮ ಬದುಕು ನಾಳಿನ ಭವಿಷ್ಯಕ್ಕಾಗಿ
ಅಗತ್ಯವಿದೆ ಎಂದು ಆರ್.ಕೆ.ನಾಯರ್ ತಿಳಿಸಿದ್ದಾರೆ.
ಸಮಾರಂಭದಲ್ಲಿ ರೋಶನಿ ನಿಲಯ ಸ್ವಾಯತ್ತ ಕಾಲೇಜಿನ ಪ್ರಾಂಶುಪಾಲರಾದ ಡಾ.ಸೋಪಿಯಾ ಎನ್. ಫೆರ್ನಾಂಡೀಸ್, ಕಾಲೇಜಿನ ಗ್ರಾಮೀಣಾಭಿವೃದ್ಧಿ ಅಧ್ಯಯನ ವಿಭಾಗದ ಮುಖ್ಯಸ್ಥ ಡಾ.ಪ್ರಶಾಂತ್, ಐಕ್ಯೂ ಎಸಿ ಸಂಯೋಜಕಿ ಡಾ.ಸರಿತಾ ಡಿ ಸೋಜ, ದಕ್ಷಿಣ ಕನ್ನಡ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಮೊದಲಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು