8:00 PM Monday10 - August 2026
ಬ್ರೇಕಿಂಗ್ ನ್ಯೂಸ್
ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ…

ಇತ್ತೀಚಿನ ಸುದ್ದಿ

Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

07/02/2026, 19:26

ಮಂಗಳೂರು(reporterkarnataka.com): ಮೆಟ್ರೋ ದರ ಬಗ್ಗೆ ತೀರ್ಮಾನ ಮಾಡಲು ಪ್ರತ್ಯೇಕ ಸಮಿತಿ ಇದೆ. ಕೇಂದ್ರ ಸರ್ಕಾರದ ಕಾರ್ಯದರ್ಶಿ ಇದರ ಮುಖ್ಯಸ್ಥರು. ಮೆಟ್ರೋ ದರ ಏರಿಕೆ ವಿಚಾರವಾಗಿ ನಮ್ಮ ಅಭಿಪ್ರಾಯವನ್ನು ಕೇಳಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು.
ಮಂಗಳೂರಿನಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶನಿವಾರ ಪ್ರತಿಕ್ರಿಯೆ ನೀಡಿದರು.
ನಾನು ಬೆಂಗಳೂರಿಗೆ ಮರಳಿದ ಬಳಿಕ ಈ ಬಗ್ಗೆ ಚರ್ಚೆ ಮಾಡುವೆ. ಜನರಿಗೆ ತೊಂದರೆ ನೀಡಲು ನಮಗೆ ಇಷ್ಟವಿಲ್ಲ. ಆರ್ಥಿಕ ಸ್ಥಿತಿಗತಿ ಪರಿಶೀಲನೆ ಮಾಡುತ್ತೇನೆ ಎಂದರು.

*ಪಕ್ಷ ಏನು ಹೇಳುತ್ತದೆ ಅದನ್ನು ಕೇಳಬೇಕು:*
ನೀವು ಸಿಎಂ ಆಗಬೇಕು ಎಂಬ ಕನಸು ಜನರಿಗಿದೆ ಎಂದು ಕೇಳಿದಾಗ, “ಕನಸು ಜನರಿಗೂ ಇದೆ, ಶಾಸಕರಿಗೂ ಇದೆ, ನಿಮಗೂ (ಮಾಧ್ಯಮ) ಇದೆ. ಪಕ್ಷ ಏನು ಹೇಳುತ್ತದೆ ಅದನ್ನು ಕೇಳಬೇಕು” ಎಂದು ತಿಳಿಸಿದರು.
ದಲಿತ ಸಂಘಟನೆಗಳು ಪರಮೇಶ್ವರ್ ಅವರು ಸಿಎಂ ಆಗಬೇಕು ಎಂದು ಆಸೆ ಪಟ್ಟಿರುವ ಬಗ್ಗೆ ಕೇಳಿದಾಗ, “ಅವರವರ ಅಭಿಮಾನಿಗಳು ಆಸೆ ಪಡುತ್ತಾರೆ. ಅದನ್ನು ನಾನು ಬೇಡ ಎಂದು ಹೇಳಲು ಆಗುವುದಿಲ್ಲ” ಎಂದರು.

*ಸಮಯವೇ ಉತ್ತರ ನೀಡುತ್ತದೆ:*
ರಾಜ್ಯ ಬಜೆಟ್ ಬಳಿಕ ಅಧಿಕಾರ ಹಂಚಿಕೆ ಆಗುವುದೇ ಎಂದು ಕೇಳಿದಾಗ, “ಸಮಯವೇ ಉತ್ತರ ನೀಡಲಿದೆ” ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು