2:57 AM Saturday5 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಮಂಗಳೂರು : ರಾಷ್ಟ್ರಭಕ್ತ ವೇದಿಕೆ ವತಿಯಿಂದ ತಿರಂಗಾ ಯಾತ್ರೆ ; ರಾಜಾಜಿ ಪಾರ್ಕ್‌ನಿಂದ ಗೋವಿಂದ ಪೈ ಸರ್ಕಲ್‌‌ವರೆಗೆ ಸಾಗಿದ ಜಾಥಾ

12/08/2026, 20:13

ಮಂಗಳೂರು(reporterkarnataka.com): 12: ದೇಶದ 80ನೇ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ರಾಷ್ಟ್ರಭಕ್ತರ ವೇದಿಕೆ, ಮಂಗಳೂರು ದಕ್ಷಿಣ ವತಿಯಿಂದ ನಗರದ ಕುದ್ಮುಲ್ ರಂಗರಾವ್ ಪುರಭವನ ಬಳಿಯ ರಾಜಾಜಿ ಪಾರ್ಕ್‌ನಿಂದ ಗೋವಿಂದ ಪೈ ನವಭಾರತ್ ಸರ್ಕಲ್‌ವರೆಗೆ ಬುಧವಾರ ಬೃಹತ್ ತಿರಂಗಾ ಯಾತ್ರೆ ನಡೆಯಿತು.


ಯಾತ್ರೆಯಲ್ಲಿ ಸಾವಿರಾರು ಮಂದಿ ಬೃಹತ್ ರಾಷ್ಟ್ರಧ್ವಜವನ್ನು ಹಿಡಿದು ಸಾಗಿದರು. ದೇಶಭಕ್ತಿಯ ಘೋಷಣೆಗಳನ್ನು ಮೊಳಗಿಸುತ್ತಾ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಉತ್ಸಾಹದಿಂದ ಪಾಲ್ಗೊಂಡು ಸ್ವಾತಂತ್ರ್ಯೋತ್ಸವದ ಸಂಭ್ರಮವನ್ನು ಹಂಚಿಕೊಂಡರು.

ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರನ್ನು ಉದ್ದೇಶಿಸಿ ಶಾಸಕ ವೇದವ್ಯಾಸ ಕಾಮತ್ ಮಾತನಾಡಿ, ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಮತ್ತು ಬಲಿದಾನದ ಫಲವಾಗಿ ಇಂದು ನಾವೆಲ್ಲರೂ ಸ್ವಾತಂತ್ರ್ಯದ ಸಂಭ್ರಮವನ್ನು ಅನುಭವಿಸುತ್ತಿದ್ದೇವೆ ಎಂದರು. ತಿರಂಗಾ ನಮ್ಮೆಲ್ಲರ ಹೆಮ್ಮೆಯ ಸಂಕೇತವಾಗಿದ್ದು, ರಾಷ್ಟ್ರಧ್ವಜದ ಬಗ್ಗೆ ಸದಾ ಗೌರವವನ್ನು ಹೊಂದಿರಬೇಕು ಎಂದು ಹೇಳಿದರು.

ನಳಿನ್ ಕುಮಾರ್ ಕಟೀಲ್ ಮಾತನಾಡಿ, ಯುವ ಪೀಳಿಗೆ ತಿರಂಗಾ ಯಾತ್ರೆಯಲ್ಲಿ ಉತ್ಸಾಹದಿಂದ ಭಾಗವಹಿಸುತ್ತಿರುವುದು ರಾಷ್ಟ್ರದ ಉತ್ತಮ ಭವಿಷ್ಯಕ್ಕೆ ಹಿಡಿದ ಕೈಗನ್ನಡಿ ಎಂದರು.

ಕಾರ್ಯಕ್ರಮದಲ್ಲಿ ಸತೀಶ್ ಕುಂಪಲ, ರಮೇಶ್ ಕಂಡೆಟ್ಟು, ರಮೇಶ್ ಹೆಗ್ಡೆ, ಲಲೇಶ್ ಕುಮಾರ್, ಪೂರ್ಣಿಮಾ ಎಂ., ಸುಜಿತ್ ಪ್ರತಾಪ್, ಸಂಜಯ್ ಪ್ರಭು, ಸುಧೀರ್ ಶೆಟ್ಟಿ ಕಣ್ಣೂರು, ಮಂಜುಳಾ ರಾವ್, ವಿಕಾಸ್ ಪುತ್ತೂರು, ನಂದನ್ ಮಲ್ಯ, ಅಶ್ವಿತ್ ಕೊಟ್ಟಾರಿ, ಅರುಣ್ ಜಿ. ಶೇಟ್, ಮಹೇಶ್ ಜೋಗಿ, ಋತ್ವಿಕ್ ಕದ್ರಿ, ಸಚಿನ್ ರೈ, ರವಿಶಂಕರ್ ಮಿಜಾರ್, ನಿತಿನ್ ಕುಮಾರ್, ಮೋನಪ್ಪ ಭಂಡಾರಿ ಸೇರಿದಂತೆ ನಿಕಟಪೂರ್ವ ಪಾಲಿಕೆ ಸದಸ್ಯರು ಹಾಗೂ ಅನೇಕ ಪ್ರಮುಖರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು