ಇತ್ತೀಚಿನ ಸುದ್ದಿ
Mangaluru | ದುಷ್ಕರ್ಮಿಗಳ ಪತ್ತೆ ಹಚ್ಚಿ ಶಾಂತಿ ಸುವ್ಯವಸ್ಥೆ ಕಾಪಾಡಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ: ಪೊಲೀಸ್ ಇಲಾಖೆಗೆ ಸ್ಪೀಕರ್ ಖಾದರ್ ಸೂಚನೆ
02/05/2025, 10:31

ಮಂಗಳೂರು(reporterkarnataka.com):ಮಂಗಳೂರಿನ ಬಜ್ಪೆ ಕಿನ್ನಿಪದವು ಪ್ರದೇಶದಲ್ಲಿ ಸುಹಾಸ್ ಎಂಬವರ ಕೊಲೆ ನಡೆದಿದ್ದು ,ದುಷ್ಕರ್ಮಿಗಳನ್ನು ಶೀಘ್ರ ಪತ್ತೆ ಹಚ್ಚಿ,ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಾಡಲು ಅಗತ್ಯ ಕ್ರಮ ಕೈಗೊಳ್ಳಲು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಸೂಚನೆ ನೀಡಿದ್ದಾರೆ.
ಈ ಬಗ್ಗೆ ಮುಖ್ಯಮಂತ್ರಿ ಹಾಗೂ ಗೃಹ ಇಲಾಖೆಯೊಂದಿಗೂ ಚರ್ಚೆ ನಡೆಸಿದ ಯು.ಟಿ. ಖಾದರ್, ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಹದಗೆಡದಂತೆ ನೋಡಿಕೊಳ್ಳಲು ಬೇಕಾದ ಸೂಕ್ತ ಕ್ರಮ ಕೈಗೊಳ್ಳಲು ಸರಕಾರಕ್ಕೆ ಸೂಚನೆ ನೀಡಿದ್ದಾರೆ.