7:31 PM Saturday23 - November 2024
ಬ್ರೇಕಿಂಗ್ ನ್ಯೂಸ್
ಮೂಡಿಗೆರೆ: ಬೆಂಕಿ ಆಕಸ್ಮಿಕದಲ್ಲಿ ಗುಡಿಸಲು ಸಂಪೂರ್ಣ ಭಸ್ಮ; ಬೀದಿಗೆ ಬಿದ್ದ ಬಡ ಕುಟುಂಬ ರಾಜ್ಯ ವಿಧಾನಸಭೆಯ 3 ಕ್ಷೇತ್ರಗಳ ಉಪ ಚುನಾವಣೆ; ಕಾಂಗ್ರೆಸ್ ಭರ್ಜರಿ ಜಯ; ಕೇಸರಿ… ಸಂಡೂರಿನಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಅನ್ನಪೂರ್ಣಗೆ ಜಯ: ಬಿಜೆಪಿ ಮೈತ್ರಿಕೂಟಕ್ಕೆ ತೀವ್ರ ಮುಖಭಂಗ ​ ಮಹಾರಾಷ್ಟ್ರ: ಆಡಳಿತಾರೂಢ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟ ಮತ್ತೆ ಅಧಿಕಾರಕ್ಕೆ? ಆರೆಸ್ಸೆಸ್ ಮುಖ್ಯಸ್ಥ ಡಾ. ಭಾಗವತ್ ಡಿ. 7ರಂದು ಕಲ್ಲಡ್ಕಕ್ಕೆ: ಶ್ರೀರಾಮ ವಿದ್ಯಾಕೇಂದ್ರ ಕ್ರೀಡೋತ್ಸವದಲ್ಲಿ… ಬೆಂಗಳೂರು ಮತ್ತು ಚೆನ್ನೈಗೆ ಆಸ್ಟ್ರೇಲಿಯನ್ ಡಿಜಿಟೆಕ್ ಟ್ರೇಡ್ ಮಿಷನ್ ಭೇಟಿ ವೈಜ್ಞಾನಿಕತೆ, ವೈಚಾರಿಕತೆ ಇಲ್ಲದ ಶಿಕ್ಷಣದಿಂದ ಮಾನವೀಯ ಮೌಲ್ಯ ಬೆಳೆಸಿಕೊಳ್ಳಲು ಸಾಧ್ಯವಿಲ್ಲ: ಸಿಎಂ ಸಿದ್ದರಾಮಯ್ಯ ನೀರು ಹರಿಸುವ ನಿರ್ಣಯದಿಂದ ನಮ್ಮ ಭಾಗದ ರೈತರಿಗೆ ಅನ್ಯಾಯ: ಮಾಜಿ ಸಚಿವ ನರಸಿಂಹ… ಫೆಸ್ಟಿವಲ್ ಆಫ್ ಆಸ್ಟ್ರೇಲಿಯಾ: ಶಿಕ್ಷಣದ ಶ್ರೇಷ್ಠತೆ ಮತ್ತು ಪ್ರಿಮಿಯಂ ಎಫ್ & ಬಿ… ತೇಜಸ್ವಿ ಅವರು ನಡೆನುಡಿಯಲ್ಲಿ ಬಹುತೇಕ ಒಂದೇ ಎಂಬಂತೆ ಬದುಕಿದ ಅಪರೂಪದ ಲೇಖಕರು; ಡಾ.ಸಂಪತ್…

ಇತ್ತೀಚಿನ ಸುದ್ದಿ

ಮಂಗಳೂರಿನ ಟ್ರಾಫಿಕ್ ಸಮಸ್ಯೆ ನಿವಾರಣೆಗೆ ಸ್ಥಳೀಯಾಡಳಿತ ವಿಫಲ: ಮಾಜಿ ಮೇಯರ್ ಶಶಿಧರ ಹೆಗ್ಡೆ ವಿಷಾದ

23/11/2024, 19:22

ಮಂಗಳೂರು(reporterkarnataka.com): ಮಂಗಳೂರು ನಗರದಲ್ಲಿ ದಿನೇ ದಿನೇ ಹೆಚ್ಚುತ್ತಿರುವ ಟ್ರಾಫಿಕ್ ಸಮಸ್ಯೆ ನಿವಾರಣೆಗೆ ಎನ್‌ಐಟಿಕೆಯ ಟ್ರಾಫಿಕ್ ಮ್ಯಾನೇಜ್‌ಮೆಂಟ್ ಸಮಿತಿಯಿಂದ ವರದಿ ತರಿಸಿ ಕ್ರಮ ಕೈಗೊಳ್ಳಲು ಕಳೆದೆರಡು ವರ್ಷಗಳಿಂದ ಒತ್ತಾಯಿಸುತ್ತಿದ್ದರೂ ಏನೂ ಪ್ರಯೋಜನವಾಗಿಲ್ಲ ಎಂದು ಮಾಜಿ ಮೇಯರ್ ಶಶಿಧರ ಹೆಗ್ಡೆ ವಿಷಾದ ವ್ಯಕ್ತಪಡಿಸಿದರು.
ನಗರದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದ ಹಲವು ರಸ್ತೆಗಳಲ್ಲಿ ಅಗೆದು ಹಾಕಲಾಗಿದೆ. ಜನರು ಸಂಕಷ್ಟ ಅನುಭವಿಸುತ್ತಿದ್ದಾರೆ.
ಡಿಸೆಂಬರ್ ಒಳಗೆ ರಸ್ತೆಗುಂಡಿಗಳಿಗೆ ಪ್ಯಾಚ್‌ವರ್ಕ್ ಕೆಲಸ ಮುಗಿಸಬೇಕು. ಟ್ರಾಫಿಕ್ ಸಮಸ್ಯೆ ಬಗೆಹರಿಸಲು ಜಿಲ್ಲಾಧಿಕಾರಿ ನೇತೃತ್ವದ ಸಮಿತಿ ಸಭೆ ಕರೆಯಬೇಕು ಎಂದು ಅವರು ಆಗ್ರಹಿಸಿದರು.
ಮನಪಾದಲ್ಲಿ ಬಿಜೆಪಿ ಆಡಳಿತದಲ್ಲಿ ಜಲಸಿರಿ ಕಾಮಗಾರಿ, ಗೇಲ್‌ಗ್ಯಾಸ, ಸ್ಮಾರ್ಟ್ ಸಿಟಿ, ಪ್ರೀಮಿಯಂ ಎಫೇರ್‌ನ ಅವ್ಯವಸ್ಥಿತ ಕಾಮಗಾರಿಗಳಿಂದ ಜನರು ತೊಂದರೆ ಅನುಭವಿಸುವಂತಾಗಿದೆ ಎಂದು ಅವರು ನುಡಿದರು.
ಕಾಂಗ್ರೆಸ್ ಮುಖಂಡರಾದ ಶಬ್ಬೀರ್, ಹೇಮಂತ್ ಗರೋಡಿ, ಸಲೀಂ, ದುರ್ಗಾ ಪ್ರಸಾದ್, ಇಮ್ರಾನ್, ಹಬೀಬ್ ಕಣ್ಣೂರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು