7:10 PM Monday12 - October 2026
ಬ್ರೇಕಿಂಗ್ ನ್ಯೂಸ್
ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು

ಇತ್ತೀಚಿನ ಸುದ್ದಿ

ಮಂಗಳೂರು | ಯುವಕನ ಆತ್ಮಹತ್ಯೆ ಕೇಸ್​​ಗೆ ಟ್ವಿಸ್ಟ್​​: ಪ್ರೀತಿಸಿದ ಯುವತಿಯ ಕಿರುಕುಳದಿಂದ ನೊಂದು ಆತ್ಮಹತ್ಯೆ?; ಕೇಸು ದಾಖಲು

15/04/2026, 18:10

ಮಂಗಳೂರು(reporterkarnataka.com): ಮೂಡುಶೆಡ್ಡೆಯ ಎದುರುಪದವು ನಿವಾಸಿ ಮಹಮ್ಮದ್ ಆಶಿಕ್(22) ಆತ್ಮಹತ್ಯೆ ಪ್ರಕರಣಕ್ಕೆ ಹೊಸ ಟ್ವಿಸ್​ಟ್​ ಸಿಕ್ಕಿದೆ. ಪ್ರೀತಿಸಿದ ಯುವತಿಯ ಕಿರುಕುಳವೇ ಸಾವಿಗೆ ಕಾರಣ ಎನ್ನಲಾಗಿದ್ದು, ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಡಿ ಯುವತಿ ಮತ್ತು ಆಕೆಯ ತಾಯಿ ಸೇರಿದಂತೆ ಮೂವರ ವಿರುದ್ಧ ಮಂಗಳೂರಿನ ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಾರ್ಚ್ 21ರಂದು ಈದ್ ಹಬ್ಬದ ದಿನವೇ ಆಶಿಕ್​​ ಆತ್ಮಹತ್ಯೆ ಮಾಡಿಕೊಂಡಿದ್ದರು. ಆರಂಭದಲ್ಲಿ ಯಾವುದೋ ಕಾರಣಕ್ಕೆ ಮನನೊಂದು ಆಶಿಕ್​​ ಈ ನಿರ್ಧಾರ ಕೈಗೊಂಡಿರಬಹುದು ಎಂದು ಭಾವಿಸಲಾಗಿತ್ತಾದರೂ, ಮೊಬೈಲ್​​ ಪರಿಶೀಲನೆ ವೇಳೆ ಪ್ರೇಮ‌ ಪ್ರಕರಣ ಬೆಳಕಿಗೆ ಬಂದಿದೆ. ಕಾಲೇಜು ಸಹಪಾಠಿಯಾಗಿದ್ದ ಉಳ್ಳಾಲ ಮೂಲದ ಯುವತಿಯನ್ನು ಆಶಿಕ್ ಪ್ರೀತಿಸುತ್ತಿದ್ದರು. ಸಾಲದ್ದಕ್ಕೆ ಇವರಿಬ್ಬರು ಕ್ಲೋಸ್​​ ಆಗಿರುವ ವಿಚಾರ ಬಗ್ಗೆ ಎರಡೂ ಕುಟುಂಬಕ್ಕೆ ಗೊತ್ತಿತ್ತು. ಈ ನಡುವೆ ಕೆಲ‌ ಸಮಯದಿಂದ ಆಶಿಕ್​​ನಿಂದ ಯುವತಿ ದೂರವಾಗತೊಡಗಿದ್ದಳು. ಹೀಗಾಗಿ ಸಾವಿಗೂ ಮುನ್ನ ನೀನು ನನಗೆ ಮೋಸ ಮಾಡುತ್ತಿದ್ದೀಯಾ ಎಂಬ ಬಗ್ಗೆ ಆಶಿಕ್​​ ಆಕೆಯನ್ನು ಕೇಳಿದ್ದು, ಈ ವೇಳೆ ನೀನು ಎಲ್ಲಿಯಾದರೂ ಸತ್ತು ಹೋಗು ಎಂದು ಯುವತಿ ಹೇಳಿದ್ದಳು ಎಂಬ ಆರೋಪವೀಗ ಕೇಳಿಬಂದಿದೆ. ಈ ಬಗ್ಗೆ ಸಾವಿಗೂ ಮುನ್ನ ನಡೆದಿರುವ ಮಾತುಕತೆಗಳು ವಾಟ್ಸ್ಯಾಪ್​​ ಚಾಟ್​​ನನಲ್ಲಿ ಬಹಿರಂಗವಾಗಿದೆ ಎನ್ನಲಾಗಿದ್ದು, ಸಾವಿಗೂ ಮುನ್ನ ವಿಡಿಯೋ ಕಾಲ್​​ನಲ್ಲಿ ಇಬ್ಬರು ಮಾತನಾಡಿದ್ದರು ಎಂಬುದೂ ಗೊತ್ತಾಗಿದೆ. ಆಶಿಕ್​​ ಜೊತೆ ಮಾತನಾಡುವ ವೇಳೆ ಅವಾಚ್ಯ ಶಬ್ದಗಳಿಂದ ಯುವತಿ ನಿಂದಿಸಿದ್ದು, ಇದರಿಂದ ಆಶಿಕ್​​ ಮಾನಸಿಕವಾಗಿ ನೊಂದು ಅದೇ ದಿನ ರಾತ್ರಿ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಯುವತಿ ಪ್ರೀತಿಯ ನಾಟಕವಾಡಿ ಹಲವಾರು ಉಡುಗೊರೆ ಪಡೆದು ಖರ್ಚು ವೆಚ್ಚ ಮಾಡಿಸಿದ್ದಲ್ಲದೆ, ಮಾನಸಿಕವಾಗಿಯೂ ಆಶಿಕ್​​ಗೆ ಹಿಂಸೆ ನೀಡಿದ ಆರೋಪವೀಗ ಕೇಳಿಬಂದಿದೆ. ಹೀಗಾಗಿ ಯುವತಿ ಹಾಗೂ ಆತ್ಮಹತ್ಯೆಗೆ ಪ್ರಚೋದನೆ ನೀಡಿದವರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕೆಂದು ಯುವಕನ ತಂದೆ ನೀಡಿದ್ದ ದೂರಿನ ಅನ್ವಯ ಕಾವೂರು ಠಾಣೆ ಪೊಲೀಸರು BNS 108, 352,351(3),3(5) ಸೆಕ್ಷನ್ ಅಡಿ ಪ್ರಕರಣ ದಾಖಲು ಮಾಡಿಕೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು