7:07 PM Friday14 - November 2025
ಬ್ರೇಕಿಂಗ್ ನ್ಯೂಸ್
ವೈಚಾರಿಕ-ವೈಜ್ಞಾನಿಕ ಮನೋಭಾವದ ಮಕ್ಕಳ ಮೇಲೆ ದೇಶದ ಭವಿಷ್ಯ ನಿಂತಿದೆ: ಸಿಎಂ ಸಿದ್ದರಾಮಯ್ಯ ಬಿಹಾರ ಚುನಾವಣೆ ಫಲಿತಾಂಶದಿಂದ ಪ್ರಧಾನಿ ಮೋದಿಯವರ ಜನಪ್ರೀಯತೆ ಮತ್ತೆ ದೃಢಪಟ್ಟಿದೆ: ಮಾಜಿ ಸಿಎಂ… ಚಾಕುವಿನಿಂದ ಇರಿದು ಕಾರ್ಮಿಕನ ಕೊಲೆ: ಅಸ್ಸಾಂ ಮೂಲದ ಆರೋಪಿ ಅಂದರ್; ತಪ್ಪುಮಾಹಿತಿ ನೀಡಿದಾತ… ಮೇಕೆದಾಟು ವಿರುದ್ಧದ ತಮಿಳುನಾಡು ಅರ್ಜಿ ಸುಪ್ರೀಂ ಕೋರ್ಟ್ ನಿಂದ ವಜಾ: ರಾಜ್ಯಕ್ಕೆ ಮಹಾಜಯ Shivamogga | ತೀರ್ಥಹಳ್ಳಿ ಸಮೀಪದ ತಳುವೆ ಬಳಿ ಅಪಘಾತ: ವ್ಯಕ್ತಿಯೋರ್ವನ ಕಾಲು ಕಟ್ ಎಲ್ಲಾ ಶೋಷಿತ ಸಮುದಾಯಗಳ ಧ್ವನಿಯಾಗಿ ಕಾಗಿನೆಲೆ ಪೀಠ ಸ್ಥಾಪಿಸಿದ್ದು ನಾನೇ: ಸಿಎಂ ಸಿದ್ದರಾಮಯ್ಯ Bangalore | ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದಾವಣಗೆರೆ ನಡುವೆ ನೇರ ಫ್ಲೈಬಸ್… Kodagu | ವಿರಾಜಪೇಟೆ: ಆತ್ಮಹತ್ಯೆಗೆ ಯತ್ನಿಸಿದ್ದ ಗೃಹಿಣಿ 3 ದಿನಗಳ ಬಳಿಕ ಚಿಕಿತ್ಸೆ… ಕೆಂಪು ಕೋಟೆ ಬಾಂಬ್ ಬ್ಲಾಸ್ಟ್ ಪ್ರಕರಣ | ಇಡೀ ದೇಶವೇ ಖಂಡಿಸಬೇಕಿದೆ: ಮಾಜಿ… ಕುಶಾಲನಗರದಲ್ಲಿ 8.60 ಕೋಟಿ ವೆಚ್ಚದ ಪ್ರಜಾಸೌಧ ತಾಲೂಕು ಆಡಳಿತ ಭವನ ನಿರ್ಮಾಣಕ್ಕೆ ಭೂಮಿ…

ಇತ್ತೀಚಿನ ಸುದ್ದಿ

ಮಂಗಳೂರು ಉತ್ತರ, ದಕ್ಷಿಣ, ಪುತ್ತೂರು ಕ್ಷೇತ್ರ: ಇನಾಯತ್ ಆಲಿ, ಲೋಬೊ, ಶಕುಂತಳಾ ಶೆಟ್ಟಿಗೆ ಕಾಂಗ್ರೆಸ್ ಟಿಕೆಟ್

08/04/2023, 09:44

ಬೆಂಗಳೂರು(reporterkarnataka.com): ಕರಾವಳಿಯಲ್ಲಿ ತೀವ್ರ ಕುತೂಹಲ ಮೂಡಿಸಿದ ಮಂಗಳೂರು ಉತ್ತರ, ಮಂಗಳೂರು ದಕ್ಷಿಣ ಹಾಗೂ ಪುತ್ತೂರು ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಖನ್ನು ಅಂತಿಮಗೊಳಿಸಲಾಗಿದೆ. ಉತ್ತರದಿಂದ ಇನಾಯತ್ ಆಲಿ, ದಕ್ಷಿಣದಿಂದ ಜೆ. ಆರ್. ಲೋಬೋ ಹಾಗೂ ಪುತ್ತೂರಿನಿಂದ ಶಕುಂತಳಾ ಶೆಟ್ಟಿ ಹೆಸರು ಅಂತಿಮ ಗೊಳಿಸಲಾಗಿದೆ ಎಂದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ.
ಮಂಗಳೂರು ದಕ್ಷಿಣ ಹಾಗೂ ಪುತ್ತೂರಿಗೆ ಹಳೆ ಮುಖಗಳಾದ ಮಾಜಿ ಶಾಸಕರಾದ ಜೆ.ಆರ್. ಲೋಬೋ ಹಾಗೂ ಶಕುಂತಳಾ ಶೆಟ್ಟಿ ಅವರನ್ನು ಕಣಕ್ಕಿಳಿಸಲಾಗಿದೆ. ಆದರೆ ಮಂಗಳೂರು ಉತ್ತರಕ್ಕೆ ಹೊಸಮುಖಕ್ಜೆ ಮಣೆ ಹಾಕಲಾಗಿದೆ. ಇಲ್ಲಿ ಕೆಪಿಸಿಸಿ ಕಾರ್ಯದರ್ಶಿ ಇನಾಯತ್ ಆಲಿ ಅವರಿಗೆ ಟಿಕೆಟ್ ನೀಡಲಾಗಿದೆ ಎಂದು ತಿಳಿದು ಬಂದಿದೆ.
ಮಂಗಳೂರು ಉತ್ತರ ಮತ್ತು ದಕ್ಷಿಣ ಕ್ಷೇತ್ರಕ್ಕೆ ಮಾಜಿ ಶಾಸಕರು, ಮಾಜಿ ಮೇಯರ್ ಗಳು, ಕಾರ್ಪೋರೇಟರ್ ಸೇರಿದಂತೆ ಡಜನಿಗೂ ಅಧಿಕ ಮಂದಿ ಆಕಾಂಕ್ಷಿಗಳಿದ್ದರು. ಮಂಗಳೂರಿನ ಯುವ ನ್ಯಾಯವಾದಿ, ಸಾಮಾಜಿಕ ಧುರೀಣ ಪದ್ಮರಾಜ್ ಅವರು ಕೂಡ ಮಂಗಳೂರು ದಕ್ಷಿಣ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ ಕಾಂಗ್ರೆಸ್ ಪಕ್ಷ ಸಾಮಾಜಿಕ ನ್ಯಾಯದ ವಿಷಯ ಎತ್ತಿಕೊಂಡು ಅಲ್ಪ ಸಂಖ್ಯಾತ ಕ್ರೈಸ್ತ ಸಮುದಾಯದ ಜೆ. ಆರ್. ಲೋಬೊ ಅವರಿಗೆ ಮತ್ತೆ ಟಿಕೆಟ್ ನೀಡಿದೆ. ಹಾಗೆ ಪುತ್ತೂರು ಕ್ಷೇತ್ರವನ್ನು ಮಹಿಳೆಯರಿಗೆ ಬಿಟ್ಟು ಕೊಟ್ಟಿದೆ. ಇಲ್ಲಿ ಶಕುಂತಳಾ ಶೆಟ್ಟಿ ಅವರಿಗೆ ಮತ್ತೆ ಅವಕಾಶ ನೀಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು