5:34 PM Saturday11 - April 2026
ಬ್ರೇಕಿಂಗ್ ನ್ಯೂಸ್
3 ದಿನಗಳಿಂದ ನಾಪತ್ತೆಯಾಗಿದ್ದ ಬಾಲಕಿಯ ಮೃತದೇಹ ಪತ್ತೆ: ಚಂದ್ರದ್ರೋಣ ಪರ್ವತದ 2 ಸಾವಿರ… ಪ್ರಧಾನಿ‌ ಮೋದಿಗೆ ಸಂಬಂಧಿಸಿದ ಗೌಪ್ಯ ಮಾಹಿತಿ ರವಾನೆ: ವಿದೇಶಿ ಏಜೆನ್ಸಿಗಳ ಜತೆ ಸಂಪರ್ಕ;… ಉತ್ತರ ಪ್ರದೇಶದಲ್ಲಿ ಭೀಕರ ದೋಣಿ ದುರಂತ: ಪ್ರವಾಸಿಗರಿದ್ದ ಸ್ಟೀಮರ್ ಪಲ್ಟಿಯಾಗಿ 10 ಮಂದಿ… ಚಾಮರಾಜನಗರ; ಮಹಿಳೆಯರ ಒಳ ಉಡುಪು ಕದಿಯುತ್ತಿದ್ದ ‘ಸೈಕೋ’ ಕಳ್ಳನ ಬಂಧನ ಫೇಲಾದವರಿಗೆ ಇನ್ನೊಂದು ಚಾನ್ಸ್: ದ್ವಿತೀಯ ಪಿಯುಸಿ ಪರೀಕ್ಷೆ-2 ದಿನಾಂಕ ಪ್ರಕಟ Suratkal | ಅಮಾನತುಗೊಂಡಿದ್ದ ಎನ್‌ಐಟಿಕೆ ಕುಲಸಚಿವ ರವೀಂದ್ರನಾಥ್ ಸೇವೆಯಿಂದ ವಜಾ ಪತಿಯ ಶವದ ಜತೆ 10 ದಿನ ಕಳೆದ ಪತ್ನಿ: ಮಲೆನಾಡು ಚಿಕ್ಕಮಗಳೂರಿನಲ್ಲಿ ವಿಚಿತ್ರ… ಕಾಂಗ್ರೆಸ್‌ನಿಂದ ಕೋಟ್ಯಂತರ ರೂಪಾಯಿ ಹಣ ಹಂಚಿಕೆ: ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಆರೋಪ ಅಮ್ಮನ ಸಾವಿನ ದುಃಖದಲ್ಲೂ ಛಲ ಬಿಡದೆ ಪರೀಕ್ಷೆ ಬರೆದ ದಿಶಾ ಸ್ಟೇಟ್ ಗೆ… ದಾವಣಗೆರೆ ದಕ್ಷಿಣ: ಮತಗಟ್ಟೆ ಬಳಿ ಟೇಬಲ್ ವಿಚಾರವಾಗಿ ಕಾಂಗ್ರೆಸ್-ಎಸ್ ಡಿಪಿಐ ಕಾರ್ಯಕರ್ತರ ಜಟಾಪಟಿ

ಇತ್ತೀಚಿನ ಸುದ್ದಿ

ಮಂಗಳೂರು ಉತ್ತರ: ಕೈ ಟಿಕೆಟ್ ಗಾಗಿ ಕಾಂಗ್ರೆಸ್ ನಲ್ಲೇ ಬಿಗ್ ಫೈಟ್!; ಹಳೆ ಮುಖವೋ? ಹೊಸ ಮುಖವೋ?

21/12/2022, 08:29

ಅಶೋಕ್ ಕಲ್ಲಡ್ಕ ಮಂಗಳೂರು
ಅನುಷ್ ಪಂಡಿತ್ ಮಂಗಳೂರು

info.reporterkarnataka@gmail.com

ರಾಜ್ಯದಲ್ಲಿ ಮುಂಬರುವ ವಿಧಾನಸಭೆ ಚುನಾವಣೆಯ ಕಾವು ನಿಧಾನವಾಗಿ ಏರಲಾರಂಭಿಸಿದೆ. ಇದರ ಪ್ರಭಾವ ಕರಾವಳಿ ಜಿಲ್ಲೆಯ ಮೇಲೂ ಬೀಳಲಾರಂಭಿದೆ. ಟಿಕೆಟ್ ಗಾಗಿ ಗುದ್ದಾಟ, ಪರದಾಟ ಆರಂಭವಾಗಿದೆ. ರಾಜ್ಯದ ಪ್ರಮುಖ ಪ್ರತಿಪಕ್ಷವಾದ ಕಾಂಗ್ರೆಸ್ ನಲ್ಲಿ ಟಿಕೆಟ್ ವಾರ್ ಜೋರಾಗಿಯೇ ನಡೆಯುತ್ತಿದೆ. ಮಂಗಳೂರು ಉತ್ತರ ಕ್ಷೇತ್ರವೂ ಇದಕ್ಕೆ ಹೊರತಾಗಿಲ್ಲ.

ಮಂಗಳೂರು ಉತ್ತರದಲ್ಲಿ ಮಾಜಿ ಶಾಸಕ ಮೊಯ್ದೀನ್ ಬಾವಾ ಹಾಗೂ ಉದ್ಯಮಿ ಇನಾಯತ್ ಆಲಿ ನಡುವೆ ಟಿಕೆಟ್ ಗಾಗಿ ಭಾರಿ ಸ್ಪರ್ಧೆ ಏರ್ಪಟ್ಟಿದೆ. ಇಬ್ಬರೂ ಕೂಡ ಒಂದು ರೀತಿಯಲ್ಲಿ ಚುನಾವಣಾ ಪ್ರಚಾರ ಆರಂಭಿಸಿಯೇ ಬಿಟ್ಟಿದ್ದಾರೆ. ಇನಾಯತ್ ಆಲಿ ಅವರು ಒಂದು ವರ್ಷದ ಮುಂಚೆಯೇ ಚುನಾವಣೆಗೆ ಮಾನಸಿಕವಾಗಿ ಸಿದ್ದರಾಗಿದ್ದರು.

ಕಾಂಗ್ರೆಸ್ ನಲ್ಲಿ ಟಿಕೆಟ್ ಗಾಗಿ 2 ಲಕ್ಷ ಡೆಪೊಸಿಟ್ ಇಟ್ಟು ಅರ್ಜಿ ಹಾಕುವ ಸಂಸ್ಕೃತಿಯನ್ನು ಪರಿಚಯಿಸಿರುವುದರಿಂದ ಮೊಯ್ದೀನ್ ಬಾವಾ ಹಾಗೂ ಇನಾಯತ್ ಆಲಿ ಇಬ್ಬರೂ ಅರ್ಜಿ ಹಾಕಿ ಟಿಕೆಟ್ ಗಾಗಿ ಚಾತಕಪಕ್ಷಿ ತರಹ ಕಾಯುತ್ತಿದ್ದಾರೆ. ಟಿಕೆಟ್ ಯಾರಿಗೂ ಸಿಕ್ಕಿದರೂ ಇನ್ನೊಂದು ಕಡೆಯವರು ಬಂಡಾಯ ಏಳುವಂತಹ ಸ್ಥಿತಿ ಇದೆ ಎಂದರೂ ತಪ್ಪಾಗಲಾರದು.

ಮಾಜಿ ಶಾಸಕ ಮೊಯ್ದೀನ್ ಬಾವಾ ಅವರಿಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬೆಂಬಲ ಇದೆ ಎನ್ನಲಾಗಿದೆ. ಅದೇ ರೀತಿ ಇನಾಯತ್ ಆಲಿ ಅವರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆಶೀರ್ವಾದ ಇದೆ ಎನ್ನಲಾಗಿದೆ. ಮೊಯ್ದೀನ್ ಬಾವಾ ಅವರಿಗೆ ಮತ್ತೊಂದು ಚಾನ್ಸ್ ನೀಡಿ ಮಂಗಳೂರು ಉತ್ತರದಲ್ಲಿ ಮುಸ್ಲಿಂ ನಾಯಕತ್ವವನ್ನು ಮತ್ತಷ್ಟು ಗಟ್ಟಿಗೊಳಿಸುವುದು ಸಿದ್ದರಾಮಯ್ಯ ಅವರ ಉದ್ದೇಶ ಎಂದು ಸಿದ್ದು ನಿಕಟವರ್ತಿಗಳು ಹೇಳುತ್ತಾರೆ‌. ಹಾಗೆ ಓಷನ್ ಕನ್ ಸ್ಟ್ರಕ್ಷನ್ ಸಂಸ್ಥೆಯ ಆಡಳಿತ ನಿರ್ದೇಶಕ ಇನಾಯತ್ ಅಲಿ ಅವರಿಗೆ ಅವಕಾಶ ನೀಡಿ ಮಂಗಳೂರು ಉತ್ತರದಲ್ಲಿ ಕಾಂಗ್ರೆಸ್ ಗೆಲ್ಲಿಸುವುದು ಡಿ.ಕೆ. ಶಿವಕುಮಾರ್ ಅವರ ಬಯಕೆ ಎನ್ನಲಾಗಿದೆ. ಯಾವುದಕ್ಕೂ ಸ್ವಲ್ಪ ಸಮಯ ಕಾದು ನೋಡಬೇಕು.

ಇತ್ತೀಚಿನ ಸುದ್ದಿ

ಜಾಹೀರಾತು