1:27 AM Sunday20 - April 2025
ಬ್ರೇಕಿಂಗ್ ನ್ಯೂಸ್
DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ…

ಇತ್ತೀಚಿನ ಸುದ್ದಿ

ಮಂಗಳೂರು ಉತ್ತರವನ್ನು ಮಾದರಿ ಕ್ಷೇತ್ರವನ್ನಾಗಿ ಮಾಡಲಾಗುವುದು: ಕಾಂಗ್ರೆಸ್ ಅಭ್ಯರ್ಥಿ ಇನಾಯತ್ ಅಲಿ

26/04/2023, 20:24

ಸುರತ್ಕಲ್(reporterkarnataka.com): ಮಂಗಳೂರು ಉತ್ತರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಇನಾಯತ್ ಅಲಿ ಅವರು ಬುಧವಾರ ಬೆಳಗ್ಗೆ ಕಾಟಿಪಳ್ಳ, ಇಡ್ಯಾ, ಹೊಸಬೆಟ್ಟು, ಕುಳಾಯಿ, ಬೈಕಂಪಾಡಿ, ಪಣಂಬೂರು ಪರಿಸರದಲ್ಲಿ ಬಿಡುವಿಲ್ಲದೆ ಚುನಾವಣಾ ಪ್ರಚಾರ ನಡೆಸಿದರು.
ಈ ವೇಳೆ ಮಾಧ್ಯಮಗಳ ಜೊತೆ ಮಾತಾಡಿದ ಅವರು, “ಮಂಗಳೂರು ಉತ್ತರ ಕ್ಷೇತ್ರವನ್ನು ಭವಿಷ್ಯದಲ್ಲಿ ಮಾದರಿ ಕ್ಷೇತ್ರವನ್ನಾಗಿ ಮಾಡುವ ಗುರಿಯನ್ನು ಹೊಂದಿದ್ದು ಮತದಾರರನ್ನು ಭೇಟಿಯಾಗಿ ಮತ ಯಾಚನೆ ಮಾಡುತ್ತಿದ್ದೇನೆ. ಕ್ಷೇತ್ರದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಮಧ್ಯೆ ನೇರ ಸ್ಪರ್ಧೆ ಇದೆ. ಹೀಗಾಗಿ ಪ್ರತೀ ಮನೆಗಳನ್ನು ಕಾಂಗ್ರೆಸ್ ಗ್ಯಾರಂಟಿ ಅಭಿಯಾನದ ಮೂಲಕ ಜೋಡಿಸಲು ನಮ್ಮ ಕಾರ್ಯಕರ್ತರು ಶ್ರಮವಹಿಸಿ ದುಡಿಯುತ್ತಿದ್ದಾರೆ. ಜನರು ಬಿಜೆಪಿ ಸರಕಾರದ ಬೆಲೆ ಏರಿಕೆ, ನಿರುದ್ಯೋಗ ಮತ್ತಿತರ ಹೊರೆಗಳಿಂದ ಕಂಗಾಲಾಗಿದ್ದಾರೆ. ಮತ್ತೊಮ್ಮೆ ಅದೇ ಸರಕಾರ ಅಧಿಕಾರಕ್ಕೆ ಬಂದರೆ ಪರಿಸ್ಥಿತಿ ಏನಾಗಬಹುದು ಎಂಬ ಸ್ಪಷ್ಟ ಅಂದಾಜು ಜನರಲ್ಲಿದೆ. ಹೀಗಾಗಿ ಜನವಿರೋಧಿ ಬಿಜೆಪಿ ಸರಕಾರಕ್ಕೆ ಜನರೇ ವಿರುದ್ಧವಾಗಿದ್ದಾರೆ” ಎಂದರು.


“ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದರೆ ಎಲ್ಲಾ ಜಾತಿ, ಸಮುದಾಯವನ್ನು ಪ್ರೀತಿಸುವ, ಯುವಜನರಿಗೆ, ವಿದ್ಯಾರ್ಥಿಗಳಿಗೆ ಮತ್ತು ಗೃಹಿಣಿಯರಿಗೆ ನೆರವಾಗುವ ಸುಭದ್ರ ಸರಕಾರ ಜನರಿಗೆ ದೊರೆಯಲಿದೆ. ಜನಸಾಮಾನ್ಯರು ಜೀವನ ಸಾಗಿಸಲು ಯಾವುದೇ ರೀತಿಯಲ್ಲಿ ಭಯ ಪಡಬೇಕಾದ ಅಗತ್ಯವಿಲ್ಲ” ಎಂದರು.
ಕಾಟಿಪಳ್ಳ ಜನತಾ ಕಾಲನಿಯ ಸಿರಿಗಳ ಬೀಡು, ಆಶ್ರಯ ಕಾಲನಿಯ ಕೊರಗಜ್ಜ ಕ್ಷೇತ್ರಕ್ಕೆ ಇನಾಯತ್ ಅಲಿ ಭೇಟಿ ಕೊಟ್ಟು ವಿಶೇಷ ಪ್ರಾರ್ಥನೆ ಸಲ್ಲಿಸಿ ಪ್ರಸಾದ ಸ್ವೀಕರಿಸಿದರು.
ಕೆಪಿಸಿಸಿ ವಕ್ತಾರೆ ಪ್ರತಿಭಾ ಕುಳಾಯಿ, ಜಲೀಲ್ ಬದ್ರಿಯಾ, ಸುರತ್ಕಲ್ ಬ್ಲಾಕ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಮುಹಮ್ಮದ್ ಸಮೀರ್ ಕಾಟಿಪಳ್ಳ, ರಾಘವೇಂದ್ರ ರಾವ್ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು