ಇತ್ತೀಚಿನ ಸುದ್ದಿ
ಮಂಗಳೂರು ವಿವಿ ವಿರುದ್ಧ ಎನ್‌ಎಸ್‌ಯುಐ ಪ್ರತಿಭಟನೆ ; ಪ್ರತಿಭಟನಾ ನಿರತರನ್ನು ವಶಕ್ಕೆ ಪಡೆದ ಪೊಲೀಸ್
17/12/2022, 18:24

ಚಿತ್ರ :ಅನುಷ್ ಪಂಡಿತ್
ಮಂಗಳೂರು(Reporterkarnataka.com):ವಿವಿಯಿಂದ ಫಲಿತಾಂಶ ಪ್ರಕಟ ವಿಳಂಬ, ವಿದ್ಯಾರ್ಥಿ ವೇತನ ಸ್ಥಗಿತ ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಎನ್‌ಎಸ್‌ಯುಐ ವತಿಯಿಂದ ಶನಿವಾರ ಧರಣಿ ನಡೆಯಿತು.
ನಗರದ ಮಿನಿ ವಿಧಾನ ಸೌಧದ ಎದುರು ಸೇರಿದ್ದ ಎನ್ಎಸ್‌ಯುಐ ಪದಾಧಿಕಾರಿಗಳು ತಮ್ಮ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಸ್ತೆ ತಡೆ ನಡೆಸಲು ಮುಂದಾಗುತ್ತಿದ್ದಂತೆಯೇ ಅಲ್ಲಿದ್ದ ಪೊಲೀಸರು ಅವರನ್ನು ವಶಕ್ಕೆ ಪಡೆದರು.
ಧರಣಿನಿರತರು ಬಿಜೆಪಿ ವಿರುದ್ಧ ಘೋಷಣೆಗಳನ್ನು ಕೂಗಿದರು.
ಎನ್ಎಸ್‌ಯುಐ ದ.ಕ. ಜಿಲ್ಲಾಧ್ಯಕ್ಷ ಸವಾದ್ ಸುಳ್ಯ, ರಾಜ್ಯ ಉಪಾಧ್ಯಕ್ಷ ಸುಹಾನ್ ಆಳ್ವ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಹ್ವಾನ್, ಮುಖಂಡರಾದ ಸೋಹನ್ ಸಿರಿ, ಓಂಶ್ರೀ, ಸಿರಾಜ್, ಅಝೀಮ್, ನಿಖಿಲ್, ಸಾಹಿಲ್ ಮೊದಲಾದವರು ಇದ್ದರು.