12:23 PM Friday4 - July 2025
ಬ್ರೇಕಿಂಗ್ ನ್ಯೂಸ್
ಕಡೂರು: 6 ದಿನಗಳ ಹುಡುಕಾಟದ ನಂತರವೂ ಸಿಗದ ಫಾರೆಸ್ಟ್ ಗಾರ್ಡ್ ಶರತ್‌ ಸುಳಿವು ಸೋರುತ್ತಿದೆ ಸೂರು; ಕೊಠಡಿ ತುಂಬಾ ನೀರು: ರಾಷ್ಟ್ರಕವಿ ಕುವೆಂಪು ಓದಿದೆ ಶಾಲೆಯ ಕೇಳುವವರೇ… ಮಲೆನಾಡಲ್ಲಿ ಮುಂದುವರಿದ ಮಳೆ: ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನುಗ್ಗಿ ನೆರೆ ನೀರು;… ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ Accident | ಸುರತ್ಕಲ್ ಬಳಿ ಎರಡು ಖಾಸಗಿ ಬಸ್ಸುಗಳು ಮುಖಾಮುಖಿ ಡಿಕ್ಕಿ: 28… Chikkaballapura | ರಾಜ್ಯ ಸಚಿವ ಸಂಪುಟ ಸಭೆ: ಮುಖ್ಯಮಂತ್ರಿ ಘೋಷಿಸಿದ ಯೋಜನೆ, ತೀರ್ಮಾನಗಳೇನು? JDS Protest | ರಾಜ್ಯದಲ್ಲಿ ಆರ್ಥಿಕ ಅರಾಜಕತೆ: ಬೆಂಗಳೂರು ಪ್ರತಿಭಟನೆಯಲ್ಲಿ ಜೆಡಿಎಸ್ ಆರೋಪ Dharwad | ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ: ಕಾರ್ಮಿಕ… ಬೆಂಗಳೂರು ಕಾಲ್ತುಳಿತದ ಪ್ರಕರಣ; ಸಿಎಟಿ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ: ಮುಖ್ಯಮಂತ್ರಿ Karnataka CM | ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು: ಮುಖ್ಯಮಂತ್ರಿ…

ಇತ್ತೀಚಿನ ಸುದ್ದಿ

ಮಂಗಳೂರು: ವಾಹನ ಸಂಚಾರಕ್ಕೆ ನಿಷೇಧ; ಯಾವ ರಸ್ತೆ? ಕಾರಣ ಏನು? ಪರ್ಯಾಯ ಮಾರ್ಗ ವ್ಯವಸ್ಥೆ ಯಾವುದು?

14/09/2021, 09:04

ಮಂಗಳೂರು (reporterkarnataka.com.): ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ನವಭಾರತ ಜಂಕ್ಷನ್‍ನಿಂದ ನಾಗರಕಟ್ಟೆ ವರೆಗೆ (ಡೊಂಗರಕೇರಿ ವೆಂಕಟರಮಣ ದೇವಸ್ಥಾನ ರಸ್ತೆ) ರಸ್ತೆ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲಾಗುವುದರಿಂದ ಆ ರಸ್ತೆಯಲ್ಲಿ ವಾಹನ ಸಂಚಾರ ನಿಷೇಧಿಸಿ ಆದೇಶ ಹೊರಡಿಸಲಾಗಿದೆ.

ಈ ರಸ್ತೆಯಲ್ಲಿ ವಾಹನ ಸಂಚಾರ ನಿಷೇಧಿಸಿ ಆದೇಶ ಹೊರಡಿಸುವುದರೊಂದಿಗೆ ಸಾರ್ವಜನಿಕರ ಓಡಾಟಕ್ಕೆ ಮತ್ತು ವಾಹನಗಳ ಸುಗಮ ಸಂಚಾರಕ್ಕಾಗಿ ಬದಲಿ ಮಾರ್ಗದ ವ್ಯವಸ್ಥೆ ಮಾಡಬೇಕಾದ ಅವಶ್ಯಕತೆ ಇರುವುದನ್ನು ಮನಗಂಡು ಕಾಮಗಾರಿ ಮುಕ್ತಾಯವಾಗುವ ವರೆಗೆ ಮಂಗಳೂರಿನ ಪೊಲೀಸ್ ಆಯುಕ್ತ ಹಾಗೂ ಅಡಿಷನಲ್ ಡಿಸ್ಟ್ರಿಕ್ಟ್ ಮ್ಯಾಜಿಸ್ಟ್ರೇಟ್ ಶಶಿಕುಮಾರ್  ಅವರು ಮೋಟಾರು ವಾಹನ ಕಾಯ್ದೆ 1988 ರ ಕಲಂ 115 ಹಾಗೂ ಕರ್ನಾಟಕ ಮೋಟಾರು ವಾಹನ ನಿಯಮಾವಳಿಗಳು 1989 ರ ನಿಯಮ 221 ರ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ನವಭಾರತ ಜಂಕ್ಷನ್‍ನಿಂದ ನಾಗನಕಟ್ಟೆ ವರೆಗೆ (ಡೊಂಗರಕೇರಿ ವೆಂಕಟರಮಣ ದೇವಸ್ಥಾನ ರಸ್ತೆ) ರಸ್ತೆಯಲ್ಲಿ ಇದೇ ಸೆಪ್ಟೆಂಬರ್ 9 ರಿಂದ ನವೆಂಬರ್ 7 ರವರೆಗೆ 60 ದಿನಗಳ ಕಾಲ ವಾಹನಗಳ ಸಂಚಾರದಲ್ಲಿ ತಾತ್ಕಾಲಿಕವಾಗಿ ಬದಲಾವಣೆ ಮಾಡಿ ಆದೇಶ ಹೊರಡಿಸಿದ್ದಾರೆ. 

ನಾಗನಕಟ್ಟೆ ಕಡೆಯಿಂದ ಬರುವ ವಾಹನಗಳು ಗದ್ದಕೇರಿ ಜಂಕ್ಷನ್ ಮೂಲಕ ಮುಂದುವರೆದು ರಮಣ ಪೈ ಹಾಲ್ ಸಮೀಪದ ರಸ್ತೆಯಲ್ಲಿ ಬಂದು ನವಭಾರತ್ ಸರ್ಕಲ್ ಮುಖಾಂತರ ಸಂಚರಿಸುವುದು.
ನವಭಾರತ್ ಜಂಕ್ಷನ್‍ನಿಂದ ಡೊಂಗರಕೇರಿಗೆ ಹೋಗುವ ವಾಹನಗಳು ರಮಣ ಪೈ ಹಾಲ್ ಮೂಲಕ ಗದ್ದೆಕೇರಿ ಜಂಕನ್ ಕಡೆಗೆ ಸಂಚರಿಸುವುದು.
ಕಾಮಗಾರಿ ವೇಳೆ ನವಭಾರತ ಜಂಕ್ಷನ್ ನಿಂದ ನಾಗನಕಟ್ಟೆ ವರೆಗೆ (ಡೊಂಗರಗೇರಿ ವೆಂಕಟರಮಣ ದೇವಸ್ಥಾನ ರಸ್ತೆ) ರಸ್ತೆಯಲ್ಲಿ ಎಲ್ಲಾ ತರಹದ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ. 

ಈ ಆದೇಶದನ್ವಯ ಈ ರಸ್ತೆಯಲ್ಲಿ ಅವಶ್ಯವುಳ್ಳ ಸೂಚನಾ ಫಲಕಗಳನ್ನು ಮಂಗಳೂರು ಸ್ಮಾರ್ಟ್ ಸಿಟಿ ವತಿಯಿಂದ ಅಳವಡಿಸುವುದು ಹಾಗೂ ಸುಗಮ ಸಂಚಾರ ನಿಯಂತ್ರಣಕ್ಕೆ ಸಿಬ್ಬಂದಿಗಳನ್ನು ನಿಯೋಜಿಸಬೇಕು ಎಂದು ಮಂಗಳೂರು ಉಪ ವಿಭಾಗದ ಮಂಗಳೂರು ಸಂಚಾರ ಸಹಾಯಕ ಪೊಲೀಸ್ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.    

ಇತ್ತೀಚಿನ ಸುದ್ದಿ

ಜಾಹೀರಾತು