9:05 PM Friday14 - August 2026
ಬ್ರೇಕಿಂಗ್ ನ್ಯೂಸ್
ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ

ಇತ್ತೀಚಿನ ಸುದ್ದಿ

Mangaluru | ಪಾದುವಾ ಪದವಿಪೂರ್ವ ಕಾಲೇಜಿನಲ್ಲಿ ವನಮಹೋತ್ಸವ ಆಚರಣೆ

18/07/2026, 23:01

ಮಂಗಳೂರು(reporterkarantaka.com): ನಗರದ ಪಾದುವಾ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಮತ್ತು ಇಕೋ ಕ್ಲಬ್ ಗಳ ಸಂಯುಕ್ತ ಆಶ್ರಯದಲ್ಲಿ ಪರಿಸರ ಸಂರಕ್ಷಣೆ ಹಾಗೂ ಮರಗಳ ಮಹತ್ವದ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ವನಮಹೋತ್ಸವ ಕಾರ್ಯಕ್ರಮ ಕಾಲೇಜಿನ ಆವರಣದಲ್ಲಿ ಜರುಗಿತು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿ ಪರಿಸರವಾದಿ, ವೃಕ್ಷಪ್ರೇಮಿ ಹಾಗೂ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕತ ಪಿ. ಕೃಷ್ಣಪ್ಪ ಸಸಿ ನೆಡುವ ಮೂಲಕ ವನ ಮಹೋತ್ಸವಕ್ಕೆ ಚಾಲನೆ ನೀಡಿದರು. ಅವರು ಮಾತನಾಡಿ ಪರಿಸರ ಸಂರಕ್ಷಣೆ ಮತ್ತು ಮರಗಳ ರಕ್ಷಣೆಯ ತುರ್ತು ಅಗತ್ಯವನ್ನು ಒತ್ತಿ ಹೇಳಿದರು.
ಮರಗಳು ಜೀವಜಗತ್ತಿಗೆ ಅತ್ಯಂತ ಅವಶ್ಯಕವಾಗಿದ್ದು, ಪ್ರತಿಯೊಬ್ಬರೂ ಪರಿಸರ ಸಂರಕ್ಷಣೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.
“ಮರ ಉಳಿಸಿ, ಜೀವ ಉಳಿಸಿ” ಎಂಬ ಸಂದೇಶವನ್ನು ನೀಡಿದ ಅವರು, ಪ್ರತಿಯೊಬ್ಬರೂ ಸಸಿಗಳನ್ನು ನೆಟ್ಟು ಅವುಗಳನ್ನು ಪೋಷಿಸುವಂತೆ ಪ್ರೇರೇಪಿಸಿದರು. ಅಲ್ಲದೆ, “ನಿಮ್ಮ ಹುಟ್ಟುಹಬ್ಬದಂದು ಒಂದು ಸಸಿ ನೆಡಿ” ಎಂಬ ಸಂದೇಶದ ಮೂಲಕ ಪರಿಸರದ ಮೇಲಿನ ಜವಾಬ್ದಾರಿಯನ್ನು ಪ್ರತಿಯೊಬ್ಬರೂ ಅರಿತುಕೊಳ್ಳಬೇಕು ಎಂದು ತಿಳಿಸಿದರು.
ಪರಿಸರ ಸಂರಕ್ಷಣೆಯ ಸಂದೇಶದ ಜೊತೆ ವಿದ್ಯಾರ್ಥಿಗಳು ಪರಿಸರ ಸಂರಕ್ಷಣೆಯ ಕುರಿತು ವಿವಿಧ ಘೋಷಣೆಗಳನ್ನು ಉತ್ಸಾಹದಿಂದ ಕೂಗಿದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲ ಪ್ರೊ. ರೋಶನ್ ವಿನ್ಸಿ ಸಂತು ಮಾಯರ್ ಅವರು ಪಾದುವಾ ಪದವಿಪೂರ್ವ ಕಾಲೇಜಿನ ಪ್ರತಿಯೊಬ್ಬರೂ ಭಾನುವಾರ ದಂದು ಬೆಳಿಗ್ಗೆ 11:00 ಗಂಟೆಗೆ ಒಂದು ಸಸಿಯನ್ನು ನೆಡುವಂತೆ ಕರೆ ನೀಡಿದರು.

ನಾವು ನೆಡುವ ಪ್ರತಿಯೊಂದು ಸಸಿಯೂ ಹಸಿರು, ಆರೋಗ್ಯಕರ ಮತ್ತು ಸುಸ್ಥಿರ ಭವಿಷ್ಯದತ್ತ ಇಡುವ ಮಹತ್ವದ ಹೆಜ್ಜೆಯಾಗಿದೆ. ಸ್ವಚ್ಛ ಹಾಗೂ ಹಸಿರು ಪರಿಸರ ನಿರ್ಮಾಣದಲ್ಲಿ ಪ್ರತಿಯೊಬ್ಬರಿಗೂ ಜವಾಬ್ದಾರಿ ಇದೆ ಎಂದು ಅವರು ತಿಳಿಸಿದರು.
ಕಾರ್ಯಕ್ರಮದಲ್ಲಿ ಎನ್.ಎಸ್ ಎಸ್ ಯೋಜನಾಧಿಕಾರಿ ಯತಿರಾಜ್, ಸಹ ಯೋಜನಾಧಿಕಾರಿ ಅನಿಲ್ ಡಿ’ಮೆಲ್ಲೋ, ಉಪನ್ಯಾಸಕರು ಗಳಾದ ಡಾ.ರಾಮ್ ಪ್ರಸಾದ್, ರಾಜ್ ಕಿಶನ್ ಉಪಸ್ಥಿತರಿದ್ದರು.
ವಿದ್ಯಾರ್ಥಿನಿಯರಾದ ಬಸಮ್ಮ ಸ್ವಾಗತಿಸಿದರು. ಆಶಾ ವಂದನಾರ್ಪಣೆ ಸಲ್ಲಿಸಿದರು. ವಿದ್ಯಾರ್ಥಿ ಶ್ಯಾರನ್ ಕಾರ್ಯಕ್ರಮವನ್ನು ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು