8:32 AM Tuesday22 - April 2025
ಬ್ರೇಕಿಂಗ್ ನ್ಯೂಸ್
Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ…

ಇತ್ತೀಚಿನ ಸುದ್ದಿ

ಮಂಗಳೂರು: ವಿಎಚ್ ಪಿ, ಭಜರಂಗದಳದಿಂದ ಸಂಭ್ರಮದ ಗೋ ಪೂಜೆ

07/11/2021, 10:07

ಮಂಗಳೂರು(reporterkarnataka.com): ವಿಶ್ವ ಹಿಂದೂ ಪರಿಷತ್, ಬಜರಂಗದಳ, ದುರ್ಗಾವಾಹಿನಿ ಚಕ್ರಪಾಣಿ ಶಾಖೆ ಅತ್ತಾವರ ಹಾಗೂ ಮಾರುತಿ ಸೇವಾ ಸಮಿತಿ ನೇತೃತ್ವದಲ್ಲಿ ಗೋ ಪೂಜೆ ನಡೆಯಿತು. ಶಾಸಕ ವೇದವ್ಯಾಸ್ ಕಾಮತ್ ಅವರು ಭಾಗವಹಿಸಿ ಪೂಜೆ ಸಲ್ಲಿಸಿದರು. 

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಕಾಮತ್, ಭಾರತದಲ್ಲಿ ಗೋವಿಗೆ ಮಹತ್ತರವಾದ ಸ್ಥಾನವಿದೆ. ಸಕಲ ಜೀವಿಗಳಲ್ಲೂ ಭಗವಂತನನ್ನು ಕಾಣುವ ಹಿಂದೂ ಧರ್ಮದಲ್ಲಿ ಗೋವಿಗೆ ಮಾತೆಯ ಸ್ಥಾನ ನೀಡಿದ್ದೇವೆ. ಅದರ ರಕ್ಷಣೆ ಪ್ರತಿಯೊಬ್ಬರ ಹೊಣೆಯಾಗಿದೆ ಎಂದು ಹೇಳಿದರು. 

ಈ ಸಂದರ್ಭದಲ್ಲಿ ರಾಜ್ಯ ಮೀನುಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ನಿತಿನ್ ಕುಮಾರ್, ಪಾಲಿಕೆ ಸದಸ್ಯರಾದ ಶೈಲೇಶ್ ಶೆಟ್ಟಿ ಅತ್ತಾವರ, ಭರತ್ ಕುಮಾರ್,ರಂಗನಾಥ್ ಕಿಣಿ ನಿಕಟಪೂರ್ವ ಸದಸ್ಯರು ಮಹಾನಗರ ಪಾಲಿಕೆ, ವಿಶ್ವ ಹಿಂದೂ ಪರಿಷದ್ ಜಿಲ್ಲಾ ಕಾರ್ಯದರ್ಶಿ ಶಿವಾನಂದ ಮೆಂಡನ್, ಬಜರಂಗದಳ ಜಿಲ್ಲಾ ಸಂಚಾಲಕರಾದ ಪುನೀತ್ ಅತ್ತಾವರ, ಜಿಲ್ಲಾ ಸೇವಾ ಪ್ರಮುಖರಾದ ಪ್ರವೀಣ್ ಕುತ್ತಾರ್,ಮನೋಜ್ ಕುಮಾರ್ (ಸಂಗಮ್ ಎಂಟರ್ಪ್ರೈಸಸ್), ಆಶಾ ಬೋಪಣ್ಣ, (ಅಧ್ಯಕ್ಷರು ಹಾಗೂ ಕಾರ್ಯಕರ್ತರು ವಿಶ್ವ ಹಿಂದೂ ಪರಿಷತ್ ಬಜರಂಗದಳ ದುರ್ಗವಾಹಿನಿ ಮಾರುತಿ ಸೇವಾ ಸಮಿತಿ ಚಕ್ರಪಾಣಿ ಶಾಖೆ) ಹಾಗೂ ಇತರರು ಉಪಸ್ಥಿತರಿದ್ದರು

ಇತ್ತೀಚಿನ ಸುದ್ದಿ

ಜಾಹೀರಾತು