5:07 PM Monday14 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಮಂಗಳೂರಿನ ವಿದ್ವತ್ ಪಿಯು ಕಾಲೇಜಿನಲ್ಲಿ ಸ್ವಾತಂತ್ರ್ಯೋತ್ಸವ; ವಿನೂತನ ಕಾರ್ಯಾಗಾರ

15/08/2024, 20:16

ಮಂಗಳೂರು(reporterkarnataka.com):ನಗರದ ವಿದ್ವತ್ ಪಿಯು ಕಾಲೇಜಿನಲ್ಲಿ ಇಂದು ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ಧೂರಿಯಾಗಿ ಆಚರಿಸಲಾಯಿತು.
ಸಂಸ್ಥೆಯ ಅಧ್ಯಕ್ಷ ಸುಭಾಶ್ಚಂದ್ರ ಶೆಟ್ಟಿ ಅವರು ಧ್ವಜಾರೋಹಣ ನೆರವೇರಿಸಿ ಮಕ್ಕಳನ್ನುದ್ದೇಶಿಸಿ ಮಾತನಾಡಿದರು. ಆಡಳಿತಾಧಿಕಾರಿಗಳಾದ ಚಂದ್ರಶೇಖರ ಗೌಡ ಅವರು ಸ್ವಾತಂತ್ರ್ಯ ಸಂಗ್ರಾಮದ ತ್ಯಾಗ ಬಲಿದಾನದ ಇತಿಹಾಸವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟರು.
ನಂತರ ವಿದ್ವತ್ ಪಿಯು ಕಾಲೇಜಿನ ತನ್ನ ಪ್ರಪ್ರಥಮ
ಸ್ವಾತಂತ್ರ್ಯ ದಿನಾಚರಣೆಯನ್ನ ಸ್ಮರಣೀಯ ಮಾಡಲು “ವಿಜ್ಞಾನ-ವಿಸ್ಮಯ ಮತ್ತು ಕುತೂಹಲ” ಎಂಬ ಶೀರ್ಷಿಕೆಯಡಿಯಲ್ಲಿ ಬೆಳಗ್ಗೆ 11.30ಕ್ಕೆ ಕಾಲೇಜಿನ ಸಭಾಂಗಣದಲ್ಲಿ ವಿನೂತನ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿತ್ತು.
ಜಗತ್ತಿನ ವಿಸ್ಮಯಕ್ಕೆ ಒಳಗಣ್ಣು ತೆರೆದಿಟ್ಟು, ಅನುಭವಿಸಿ, ಅರ್ಥೈಸಿ, ವಿವೇಚನೆಗೊಳಪಡಿಸುವ ವಿಶೇಷ ಸಂವಾದ ಇದಾಗಿತ್ತು, ಯುವ ಮನಸ್ಸುಗಳ ಮೇಲೆ ವೈಜ್ಞಾನಿಕ ವಿಶ್ಲೇಷಣೆಯ ಪ್ರಭಾವ ಬೀರಿ ಊಹೆಗೆ ನಿಲುಕದ ಪ್ರಕೃತಿಯ ವಿಸ್ಮಯವನ್ನು ಅರ್ಥೈಸಿಕೊಳ್ಳುವ ಒಂದು ವಿಶೇಷ ಪ್ರಯತ್ನ ಇದಾಗಿತ್ತು. ಸಾಂಪ್ರದಾಯಿಕ ಪಾಠ-ಪ್ರವಚನ ಮತ್ತು ಪರೀಕ್ಷಾ ಪದ್ಧತಿಗಿಂತ ವಿಭಿನ್ನವಾಗಿ ಆಲೋಚಿಸುವ ಪ್ರಯತ್ನ ಇದಾಗಿತ್ತು. ಈ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ವಿದ್ವತ್ ಪಿಯು ಕಾಲೇಜಿನ ಶೈಕ್ಷಣಿಕ ನಿರ್ದೇಶಕರಾದ ಗಂಗಾಧರ ಈ. ಮಂಡಗಳಲೆ, ಭೌತಶಾಸ್ತ್ರ ವಿಭಾಗದ ಮುಖ್ಯಸ್ಥರಾದ ರಾಮಚಂದ್ರ ಎಮ್.ಎಸ್. ಹಾಗೂ ರಸಾಯನ ಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಪ್ರತಾಪ್ ದೊಡ್ಡಮನೆ ಅವರು ತಮ್ಮ ಸುದೀರ್ಘ ಶೈಕ್ಷಣಿಕ ಅನುಭವದ ಆಧಾರದ ಮೇಲೆ ವಿಜ್ಞಾನದ ವಿಸ್ಮಯವನ್ನು ವ್ಯಾಖ್ಯಾನಿಸಿದರು. ಈ ಅಪರೂಪದ ಕಾರ್ಯಾಗಾರಕ್ಕೆ 7 ಪ್ರೌಢಶಾಲಾ ಹಾಗೂ ಪಿಯು ಕಾಲೇಜಿನ 52 ವಿದ್ಯಾರ್ಥಿಗಳು ಭಾಗವಹಿಸಿದ್ದರು. ಈ ಸಂವಾದ ಕಾರ್ಯಗಾರದಲ್ಲಿ ಉತ್ತಮ ಪ್ರಶ್ನೆ ಕೇಳಿದ ವಿದ್ಯಾರ್ಥಿಗಳಿಗೆ ನಗದು ಬಹುಮಾನವನ್ನು ನೀಡಲಾಯಿತು. ಈ ಅರ್ಥಪೂರ್ಣ ಕಾರ್ಯಗಾರದಲ್ಲಿ ಭಾಗವಹಿಸಿದ ಎಲ್ಲ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರವನ್ನು ನೀಡಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು