7:58 AM Tuesday18 - November 2025
ಬ್ರೇಕಿಂಗ್ ನ್ಯೂಸ್
Kodagu | ಪಿರಿಯಾಪಟ್ಟಣ: ಅತ್ತೆ ಮನೆಗೆ ಬಂದು ಈಜಲು ಹೋದ ಬಾಲಕ ನೀರಿನಲ್ಲಿ… Madikeri | ಕಾಡಾನೆ ದಾಳಿಗೆ ಸಿಲುಕಿದ್ದ ಟೀ ಅಂಗಡಿಯಲ್ಲಿ ಆಕಸ್ಮಿಕ ಬೆಂಕಿ ಅನಾಹುತ:… ಪೊಲೀಸರ ಕಟ್ಟುನಿಟ್ಟಿನ ಕ್ರಮಕ್ಕೆ ಸವಾಲು: ಚಾರ್ಮಾಡಿ ಅಡ್ಡದಾರಿಯಲ್ಲಿ ಅಳವಡಿಸಿದ್ದ 12 ಅಡಿ ಗೇಟ್‌… ಡಿಕ್ಕಿ ಹೊಡೆದ ಕಾರಿನ ಮೇಲೆಯೇ ಬಿದ್ದ ಕಾಡಾನೆ: ಕಾರಿನ ಮುಂಭಾಗ ಸಂಪೂರ್ಣ ಜಖಂ;… ಬೆಂಗಳೂರು: ಮತ ಕಳ್ಳತನ ವಿರುದ್ಧ ಯುವ ಕಾಂಗ್ರೆಸ್ ಬೃಹತ್ ಪ್ರತಿಭಟನೆ ಬೆಳಗಾವಿ ಮೃಗಾಲಯದಲ್ಲಿ 19 ಜಿಂಕೆಗಳ ಸಾವು: ತನಿಖೆಗೆ ಅರಣ್ಯ ಸಚಿವ ಈಶ್ವರ ಖಂಡ್ರೆ… ಮೂಡಿಗೆರೆಯಲ್ಲಿ 80 ಮೂಟೆ ಕಾಳುಮೆಣಸು ಕಳ್ಳತನ ಪ್ರಕರಣ: ಮಹಿಳಾ ಆರೋಪಿ ಬಂಧನ, ಮೂವರು… ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ ವಿರುದ್ಧ ಅವಾಚ್ಯ ಪದ ಬಳಕೆ: ಆರೋಪಿ ವಿರುದ್ಧ… Kodagu | ಮಡಿಕೇರಿ ಸಮೀಪದ ಚೆಂಬು ಗ್ರಾಮದಲ್ಲಿ ಮನೆಗಳ್ಳತನ ಪ್ರಕರಣ: ಇಬ್ಬರ ಬಂಧನ ವೈಚಾರಿಕ-ವೈಜ್ಞಾನಿಕ ಮನೋಭಾವದ ಮಕ್ಕಳ ಮೇಲೆ ದೇಶದ ಭವಿಷ್ಯ ನಿಂತಿದೆ: ಸಿಎಂ ಸಿದ್ದರಾಮಯ್ಯ

ಇತ್ತೀಚಿನ ಸುದ್ದಿ

ಮಂಗಳೂರು: ವಿಪತ್ತು ನಿರ್ವಹಣೆ ಯೋಜನೆ; ಅಮೆರಿಕ ತಂಡದಿಂದ ಭೇಟಿ

25/11/2024, 19:23

ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಯೋಜನೆಯ ಬಗ್ಗೆ ಮಾಹಿತಿ ಪಡೆಯಲು ಯು. ಎಸ್. ಕಾನ್ಸುಲೇಟ್ ಜನರಲ್ ಚೆನ್ನೈ ಇದರ ಅಮೆರಿಕನ್ ಸಿಟಿಜನ್ ಸರ್ವಿಸಸ್ ಅಧಿಕಾರಿಗಳು ಸೋಮವಾರ ಜಿಲ್ಲಾಧಿಕಾರಿ ಕಚೇರಿಗೆ ಭೇಟಿ ನೀಡಿದರು.
ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಅಮೆರಿಕನ್ ಸಿಟಿಜನ್ ಸರ್ವಿಸ್ ಕಾನ್ಸೂಲ್ ಕಾರ್ಲಟನ್ ಬೆನ್‍ಸನ್ ಅವರಿಗೆ ಜಿಲ್ಲಾ ವಿಪತ್ತು ನಿರ್ವಹಣಾ ಯೋಜನೆಯ ಬಗ್ಗೆ ವಿವರ ನೀಡಿದರು.
ವಿಪತ್ತು ಹಾಗೂ ಇತರ ಸಮಸ್ಯೆಗಳ ನಿರ್ವಹಣೆ ಬಗ್ಗೆ ಯೋಜನೆ ರೂಪಿಸಿ ನಾಗರಿಕರನ್ನು ಅವುಗಳನ್ನು ಎದುರಿಸುವ ಬಗ್ಗೆ ಯೋಜನೆ ರೂಪಿಸುವುದು ಯು.ಎಸ್. ಕಾನ್ಸುಲರ್ ಜನರಲ್ ನ ಪ್ರಮುಖ ಜವಾಬ್ದಾರಿಯಾಗಿರುತ್ತದೆ. ಈ ನಿಟ್ಟಿನಲ್ಲಿ ವಿಪತ್ತು ನಿರ್ವಹಣೆ ಯೋಜನೆಗಳ ಬಗ್ಗೆ ಅಧ್ಯಯನ ಮಾಡುವುದು ಈ ಭೇಟಿಯ ಉದ್ದೇಶವಾಗಿದೆ.
ಈ ಸಂದರ್ಭದಲ್ಲಿ ಕಾನ್ಸುಲೇಟ್ ಜನರಲ್ ಸಹಾಯಕಿ ಚಂದ್ರಲೇಖಾ, ಜಿಲ್ಲಾ ವಿಪತ್ತು ನಿರ್ವಹಣೆ ಯೋಜನಾಧಿಕಾರಿ ವಿಜಯಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು