8:42 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಮಂಗಳೂರು ವಿಶ್ವವಿದ್ಯಾಲಯದ ಬಾಕಿ ಉಳಿದ ಪರೀಕ್ಷೆಗಳನ್ನು ಮುಂದುವರಿಸುವಂತೆ ಜಿಲ್ಲಾಧಿಕಾರಿ ಸೂಚನೆ : ಆ.11 ರಿಂದ ಪರೀಕ್ಷೆ ಆರಂಭ

05/08/2021, 18:32

ಮಂಗಳೂರು(Reporterkarnataka.com)
ಮಂಗಳೂರು ವಿಶ್ವವಿದ್ಯಾನಿಲಯದ ವ್ಯಾಪ್ತಿಯಲ್ಲಿ ಬಾಕಿ ಉಳಿದಿರುವ ಸ್ನಾತಕ ಹಾಗೂ ಸ್ನಾತಕೋತ್ತರ ಪದವಿ ಪರೀಕ್ಷೆಗಳನ್ನು ಆಗಸ್ಟ್ 11 ರಿಂದ ಮುಂದುವರಿಸುವಂತೆ ವಿಶ್ವವಿದ್ಯಾಲಯದ ಕುಲಸಚಿವರಿಗೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಅವರು ಸೂಚಿಸಿದರು.

ಅವರು ಆ.5ರ ಗುರುವಾರ ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ 2021ರ ಸ್ನಾತಕ ಹಾಗೂ ಸ್ನಾತಕೋತ್ತರ ಪದವಿ ಪರೀಕ್ಷೆಗಳ ಮುಂದುವರಿಕೆ ಸಂಬಂಧ ಹಮ್ಮಿಕೊಳ್ಳಲಾಗಿದ್ದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ನೆರೆಯ ಕೇರಳ ರಾಜ್ಯದಲ್ಲಿ ಕೋವಿಡ್-19 ಸೋಂಕಿನ ಪ್ರಕರಣಗಳು ತೀವ್ರಗೊಂಡ ಕಾರಣ ಕಾಸರಗೋಡಿಗೆ ಸರಕಾರಿ ಹಾಗೂ ಖಾಸಗಿ ಬಸ್‍ಗಳ ಸಂಚಾರ ಸ್ಥಗಿತಗೊಳಿಸಲಾಗಿದೆ, ಗಡಿಗಳ ಚೆಕ್ ಪೋಸ್ಟ್‍ಗಳಲ್ಲಿ ತಪಾಸಣೆ ತೀವ್ರಗೊಳಿಸಿದ್ದು, ಅನಗತ್ಯ ಸಂಚಾರವನ್ನು ರದ್ದು ಪಡಿಸಲಾಗಿದೆ, ಆದ ಕಾರಣ ಕೇರಳ ರಾಜ್ಯದ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲು ಕಷ್ಟ ಸಾಧ್ಯವಾದ ಕಾರಣ, ಆಗಸ್ಟ್ 4 ರಂದು ನಡೆಯಬೇಕಿದ್ದ ಪದವಿ ಪರೀಕ್ಷೆಗಳನ್ನು ಆಗಸ್ಟ್ 11 ರಂದು ನಡೆಸಲು ತೀರ್ಮಾನಿಸಲಾಗಿದೆ. ವಿದ್ಯಾರ್ಥಿಗಳಿಗೆ ಅನುಕೂಲವಿದ್ದಲ್ಲೀ ಮಾತ್ರ ಪರೀಕ್ಷೆಗೆ ಹಾಜರಾಗಬಹುದು. ಇಲ್ಲದಿದ್ದಲ್ಲಿ ಅಂತಹ ವಿದ್ಯಾರ್ಥಿಗಳಿಗಾಗಿ ಪ್ರತ್ಯೇಕವಾಗಿ ಪರೀಕ್ಷೆಗಳನ್ನು ನಡೆಸಬೇಕು ಎಂದು ನಿರ್ದೇಶನ ನೀಡಿದರು.

.

ಇತ್ತೀಚಿನ ಸುದ್ದಿ

ಜಾಹೀರಾತು