1:34 AM Tuesday7 - April 2026
ಬ್ರೇಕಿಂಗ್ ನ್ಯೂಸ್
ಕೊಡಗಿನ ಅಳಿಯನಿಗೆ ಭರ್ಜರಿ ಪಾರ್ಟಿ: ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ತವರಿನಲ್ಲಿ ಅದ್ದೂರಿ… ಎನ್.ಆರ್.ಪುರ: ಶಿವಮೊಗ್ಗದ ನರ್ಸ್ ಆತ್ಮಹತ್ಯೆ; ಹೊಳೆಗೆ ಹಾರಿ ಜೀವತ್ಯಾಗ Kodagu | ನಟಿ ರಶ್ಮಿಕಾ ಮಂದಣ್ಣಗೆ ತಂದೆಯಿಂದ ವಿರಾಜಪೇಟೆಯ “ಸೆರಿನಿಟಿ ಕಾಟೇಜ್” ಗಿಫ್ಟ್ ಮಧ್ಯಪ್ರಾಚ್ಯ ಯುದ್ಧ: ಕೊಡಗಿನಲ್ಲಿ ಸಿಲುಕಿದ ಇರಾನಿ ದಂಪತಿ; ಪಾಸ್‌ಪೋರ್ಟ್ ಆತಂಕ ಬಾಗಲಕೋಟೆ ಉಪ ಚುನಾವಣೆ | ಬಿಜೆಪಿ ಅಭ್ಯರ್ಥಿ ವಿರುದ್ಧ ಕರಪತ್ರ ಹಂಚಿಕೆ: ಇಬ್ಬರು… ಮುಖ್ಯಮಂತ್ರಿ ಸಿದ್ದರಾಮಯ್ಯ ನಿದ್ದೆಗೆಡಿಸಿದ ಉಪ ಚುನಾವಣೆ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ Bangalore | ಅಡುಗೆ ಅನಿಲ ದಾಸ್ತಾನು ಕೊರತೆ ಇಲ್ಲ: ವದಂತಿಗಳಿಗೆ ಕಿವಿಗೊಡಬೇಡಿ: ಡಿಸಿ… ಮಂಜೇಶ್ವರ ದಲ್ಲಿ ಸಿದ್ದರಾಮಯ್ಯ ಅಬ್ಬರದ ಪ್ರಚಾರ | ಪ್ರಧಾನಿ ಮೋದಿ ಅವರಿಂದ ಆಹಾರ… ಕೇರಳ ಚುನಾವಣೆಗೆ ಕರ್ನಾಟಕದ ಹಣ?: ತಿರುವನಂತಪುರದಲ್ಲಿ ಕಂತೆ ಕಂತೆ ನೋಟು ಸಮೇತ ಸಿಕ್ಕಿಬಿದ್ದ… ಚಾರಣಕ್ಕೆ ತೆರಳಿ 4 ದಿನಗಳಿಂದ ನಾಪತ್ತೆಯಾಗಿದ್ದ ಕೇರಳದ ಟೆಕ್ಕಿ ಶರಣ್ಯ ಪತ್ತೆ

ಇತ್ತೀಚಿನ ಸುದ್ದಿ

ಮಂಗಳೂರು ವಿವಿ ಭೌತಿಕ ಅಂಕಪಟ್ಟಿ ಸಮಸ್ಯೆಗೆ ತೆರೆ ಎಳೆದ ಸ್ಪೀಕರ್ ಖಾದರ್: ಸಾವಿರಾರು ವಿದ್ಯಾರ್ಥಿಗಳು ನಿರಾಳ

23/08/2024, 12:41

ಮಂಗಳೂರು(reporterkarnataka.com): ಮಂಗಳೂರು ವಿಶ್ವವಿದ್ಯಾನಿಲಯ ಭೌತಿಕ ಅಂಕಪಟ್ಟಿ ಸಮಸ್ಯೆಗೆ ಸ್ಪೀಕರ್ ಯು.ಟಿ. ಖಾದರ್ ತೆರೆ ಎಳೆದಿದ್ದಾರೆ. ಇದರೊಂದಿಗೆ ಸಾವಿರಾರು ವಿದ್ಯಾರ್ಥಿಗಳು ನಿರಾಳರಾಗಿದ್ದಾರೆ.
ವಿಶ್ವವಿದ್ಯಾನಿಲಯಲ್ಲಿ ವ್ಯಾಸಂಗ ಮಾಡಿದ ಮತ್ತು ಮಾಡುತ್ತಿರುವ ಮಂಗಳೂರು ವಿಶ್ವ ವಿದ್ಯಾನಿಲಯದ 2022-23ನೇ ಸಾಲಿನ ನಂತರದ ವಿದ್ಯಾರ್ಥಿಗಳಿಗೆ ವಿಶ್ವ ವಿದ್ಯಾನಿಲಯದ ಕಡೆಯಿಂದ ದೊರಕಬೇಕಾದ ಭೌತಿಕ ಅಂಕಗಳನ್ನು ಹೊಂದಿದ ಅಂಕಪಟ್ಟಿ ದೊರೆಯುತ್ತಿರಲಿಲ್ಲ.ಪ್ರಸ್ತುತ ಅಂಕಪಟ್ಟಿ ಗಳನ್ನು ಸರಕಾರದ ಹಲವಾರು ದಾಖಲೆಗಳನ್ನು ಹೊಂದಿರುವ/ಪಡೆದುಕೊಳ್ಳಲು ಬಳಸುವ ಡಿಜಿಲಾಕರ್ ತಂತ್ರಜ್ಞಾನದ ಮೂಲಕ ಪಡೆದುಕೊಳ್ಳಲು ವಿಶ್ವವಿದ್ಯಾನಿಲಯ ಸೂಚಿಸುತ್ತಿತ್ತು. ಆದರೆ ಈ ತಂತ್ರಜ್ಞಾನವು ಹಲವಾರು ಸಮಸ್ಯೆಗಳನ್ನು ಒಳಗೊಂಡಿದ್ದು, ವಿದ್ಯಾರ್ಥಿಗಳ ಸಂಕ್ಷಿಪ್ತ
ಅಂಕಗಳು, ಭಾವಚಿತ್ರ ಸಂಬಂದಪಟ್ಟ ಅಧಿಕಾರಿಗಳ ಹಸ್ತಾಕ್ಷರ, ಪಠ್ಯ ವಿಷಯಗಳು ಮತ್ತು ಪ್ರೊಜೆಕ್ಟ್ ವಿಷಯಗಳು, ಮತ್ತು ಉತ್ತೀರ್ಣ-ಅನುತ್ತೀರ್ಣತೆಯ ಮಾನದಂಡಗಳನ್ನು ಹೊಂದಿಲ್ಲದೇ, ಡಿಜಿಟಲ್ ಅಂಕಪಟ್ಟಿಗಳು ಕೇವಲ ಆನ್ನೈನ್ ವ್ಯವಹಾರಗಳಿಗೆ ಸೀಮಿತವಾಗಿದೆ ಎಂಬ ಸೂಚನೆಯನ್ನೂ ಹೊಂದಿದೆ.ಇಂತಹ ಹತ್ತು ಹಲವು ದೋಷಗಳನ್ನು ಒಳಗೊಂಡ ಡಿಜಿಟಲ್ಅಂಕಪಟ್ಟಿಗಳನ್ನು ಯಾವುದೇ ಕಂಪನಿಗಳು ಉದ್ಯೋಗಕ್ಕೆ ಸಂಬಂಧಿಸಿದ ಪರಿಶೀಲನೆ ವೇಳೆ ಮಾನ್ಯ ಮಾಡುತ್ತಿಲ್ಲ, ವಿಶೇಷವಾಗಿ ಹೊರದೇಶಗಳಲ್ಲಿ ಕೆಲಸಕ್ಕೆ
ಅರ್ಜಿ ಸಲ್ಲಿಸಲು ಭೌತಿಕ ಅಂಕಪಟ್ಟಿ ಹಾಜರುಪಡಿಸುವುದು ಕಡ್ಡಾಯವಾಗಿದ್ದು ಈ ವೇಳೆ ವಿದ್ಯಾರ್ಥಿಗಳಿಗೆ ಬಹಳಷ್ಟು ತೊಂದರೆಯಾಗುತ್ತಿತ್ತು.
ಈ ಬಗ್ಗೆ ಎನ್ ಎಸ್ ಯು ಐ ಮುಖಂಡರಾದ ಸಾಹಿಲ್ ಮಂಚಿಲ ಮುಂತಾದವರು ಸಭಾಧ್ಯಕ್ಷ ಯು ಟಿ ಖಾದರ್ ರವರ ಬಳಿ ತಮ್ಮ ಸಮಸ್ಯೆಯನ್ನು ತಿಳಿಸಿದಾಗ ತಕ್ಷಣ ಸ್ಪಂದಿಸಿದ ಸಭಾಧ್ಯಕ್ಷರು ಉನ್ನತ ಶಿಕ್ಷಣ ಸಚಿವರ ಜೊತೆಯಲ್ಲಿ ಮಾತುಕತೆ ನಡೆಸಿ ಇಲಾಖೆಯ ಉನ್ನತ ಮಟ್ಟದ ಅಧಿಕಾರಿಗಳ ಸಭೆಯನ್ನು ವಿಧಾನ ಸೌಧದ ತಮ್ಮ ಕಚೇರಿಯಲ್ಲಿ ಕರೆದು ಚರ್ಚೆ ನಡೆಸಿ ಪರಿಹಾರ ಕಂಡುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
ಉನ್ನತ ಶಿಕ್ಷಣ ಇಲಾಖೆಯ ಮುಖ್ಯ ಕಾರ್ಯದರ್ಶಿ ಶ್ರೀಕರ್,
ಉನ್ನತ ಶಿಕ್ಷಣ ಇಲಾಖೆಯ ರಾಜ್ಯ ನೋಡಲ್ ಅಧಿಕಾರಿ ಡಾ.ಭಾಗ್ಯವನ ಮುದಿಗೌಡ್ರ,ಮಂಗಳೂರು ವಿಶ್ವವಿದ್ಯಾನಿಲಯದ ರಿಜಿಸ್ಟ್ರಾರ್ ಇವಾಲ್ಯುವೇಷನ್ ಅಧಿಕಾರಿ ದೇವೇಂದ್ರಪ್ಪ ಹಾಗೂ ಎನ್ ಎಸ್ ಯು ಐ ನ ಮುಖಂಡರು ಸಭೆಯಲ್ಲಿ ಭಾಗವಹಿಸಿದ್ದು,ಒಂದು ವಾರದ ಒಳಗಾಗಿ ಸಮಸ್ಯೆ ಬಗೆ ಹರಿಸುವುದಾಗಿ ಭರವಸೆ ನೀಡಿದ್ದು ಸಮಸ್ಯೆಯಲ್ಲಿ ಸಿಲುಕಿರುವ ಸಾವಿರಾರು ವಿದ್ಯಾರ್ಥಿಗಳು ನಿರಾಳರಾಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು