12:31 AM Friday14 - August 2026
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ

ಇತ್ತೀಚಿನ ಸುದ್ದಿ

ಮಂಗಳೂರು ವಿವಿ ಘಟಿಕೋತ್ಸವ ರಾಜ್ಯಪಾಲರಿಂದ ಹೈಜಾಕ್?: ಪಿಎಚ್ ಡಿ ವಿದ್ಯಾರ್ಥಿಗಳ ಫೋಟೋ ಕ್ಲಿಕ್ಕಿಸುವ ಕನಸಿಗೆ ಕಲ್ಲು ಚಪ್ಪಡಿ ಎಳೆದ ಗೆಹ್ಲೋಟ್!

15/06/2024, 23:54

ಮಂಗಳೂರು(reporterkarnataka.com): ಮಂಗಳೂರು ವಿಶ್ವವಿದ್ಯಾನಿಲಯದ ಇತಿಹಾಸದಲ್ಲೇ ಮೊದಲ ಬಾರಿಗೆ ವಿವಿ ಘಟಿಕೋತ್ಸವ ಕಾರ್ಯಕ್ರಮವನ್ನು ರಾಜ್ಯಪಾಲರು ಹೈಜಾಕ್ ಮಾಡಿದ ಘಟನೆ ನಡೆದಿದೆ. ರಾಜ್ಯಪಾಲರ ಮೊಂಡುತನದಿಂದ ಪಿಎಚ್ ಡಿ ಪಡೆದ ವಿದ್ಯಾರ್ಥಿಗಳು ಅವರ(ರಾಜ್ಯಪಾಲರ) ಕೈಯಿಂದ ಸರ್ಟಿಫಿಕೇಟ್ ಪಡೆಯುವ ಅವಕಾಶದಿಂದ ವಂಚಿತರಾಗಿದ್ದಾರೆ.
ಮಂಗಳ ಗಂಗೋತ್ರಿಯ ಮಂಗಳ ಸಭಾಂಗಣದ ಈ ಎಲ್ಲ ವಿದ್ಯಮಾನಗಳಿಗೆ ಸಾಕ್ಷಿಯಾಯಿತು. ವಿಶ್ವವಿದ್ಯಾನಿಲಯದ 42ನೇ ಘಟಿಕೋತ್ಸವದ ಅಧ್ಯಕ್ಷತೆ ವಹಿಸಿದ್ದ ಕುಲಾಧಿಪತಿಯೂ ಆಗಿರುವ ಘನವೆತ್ತ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಇಡೀ ಕಾರ್ಯಕ್ರಮವನ್ನು ತನಗೆ ಬೇಕಾದಂತೆ ಬದಲಾಯಿಸಿ ದರ್ಬಾರು ನಡೆಸಿದರು.
ಪ್ರತಿ ವರ್ಷದಂತೆ ಶಿಷ್ಠಾಚಾರ ಪ್ರಕಾರ ಸಮಾರಂಭ ನಡೆಸಲು ಮಂಗಳೂರು ವಿವಿ ಎಲ್ಲಾ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಿದ್ಧತೆ ನಡೆಸಿದ್ದರು. ಆದರೆ ರಾಜ್ಯಪಾಲ ಗೆಹ್ಲೋಟ್ ಅದನ್ನೆಲ್ಲ ತಲೆಕೆಳಗೆ ಮಾಡಿಬಿಟ್ಟರು. ಅಧ್ಯಕ್ಷತೆ ವಹಿಸಿದ್ದ ರಾಜ್ಯಪಾಲರು
ಕುಳಿತಲ್ಲಿಂದಲೇ ಏರುಧ್ವನಿಯಲ್ಲೇ ತಮಗೆ ಬೇಕಾದ ರೀತಿಯಲ್ಲಿ ಕಾರ್ಯಕ್ರಮ ನಡೆಸಲು ನಿರ್ದೇಶಿಸುತ್ತಿದ್ದರು. ರಾಜ್ಯಪಾಲರ ಅಂಗರಕ್ಷಕ್ಕೆ ಸಹಾಯಕ್ಕೆ ನಿಂತಿದ್ದರು.
ರಾಜ್ಯಪಾಲರು ಘಟಿಕೋತ್ಸವದ ಕೊನೆಯಲ್ಲಿ ಹಾಡಬೇಕಿದ್ದ ರಾಷ್ಟ್ರಗೀತೆಯನ್ನು ಆರಂಭದಲ್ಲೇ ಹಾಡಲು ಸೂಚಿಸಿದರು. ಹಾಗೆ ಡಾಕ್ಟರೇಟ್ ಪಡೆದ ವಿದ್ಯಾರ್ಥಿಗಳು ಈ ಬಾರಿ ರಾಜ್ಯಪಾಲರಿಂದ ಪಿಎಚ್ ಡಿ ಸರ್ಟಿಫಿಕೇಟ್ ಪಡೆದು ಫೋಟೋ ಕ್ಲಿಕ್ಕಿಸಿಕೊಳ್ಳುವ ಅವಕಾಶದಿಂದ ವಂಚಿತರಾಗಬೇಕಾಯಿತು. ಸಾಮಾನ್ಯವಾಗಿ ಘಟಿಕೋತ್ಸವದಲ್ಲಿ ಪಿಎಚ್.ಡಿ ಪದವಿಯನ್ನು ರಾಜ್ಯಪಾಲರು ತಮ್ನ ಕೈಯಿಂದಲೇ ನೀಡುವುದು ವಾಡಿಕೆ. ಸಾಧನೆ ಮಾಡಿ ಪಿಎಚ್ ಡಿ ಪಡೆದ ವಿದ್ಯಾರ್ಥಿಗಳು ರಾಜ್ಯಪಾಲರಿಂದ ಸರ್ಟಿಫಿಕೇಟ್ ಪಡೆಯುವ ಸಂತಸ ಹಾಗೂ ಹೆಮ್ಮೆಯ ಕ್ಷಣವನ್ನು ಅವಿಸ್ಮರಣೀಯಗೊಳಿಸಲು ಫೋಟೋ ಕ್ಲಿಕ್ಕಿಸಿಕೊಳ್ಳುತ್ತಾರೆ. ಆದರೆ ಈ ಬಾರಿ ಇಂತಹ ಅವಕಾಶಕ್ಕೆ ರಾಜ್ಯಪಾಲರು ಕಲ್ಲು ಚಪ್ಪಡಿ ಎಳೆದಿದ್ದಾರೆ. ಸಂಶೋಧನಾರ್ಥಿಗಳಿಗೆ ಪಿಎಚ್.ಡಿ. ಸರ್ಟಿಫಿಕೇಟ್‌ನ್ನು ಕಾರ್ಯಕ್ರಮದ ಮೊದಲೇ ಹಂಚಿ ನಂತರ ಎಲ್ಲರನ್ನೂ ಒಟ್ಟಿಗೆ ವೇದಿಕೆಗೆ ಕರೆದು ರಾಜ್ಯಪಾಲರು ಗ್ರೂಪ್ ಪೊಟೋಗೆ ಫೋಸ್ ನೀಡಿ ಕೈತೊಳೆದುಕೊಂಡಿದ್ದಾರೆ. ಕೇಂದ್ರ ಸರಕಾರ ಈ ರಾಜ್ಯಪಾಲರನ್ನು ಹಿಂದಕ್ಕೆ ಕರೆಸಿಕೊಳ್ಳಲಿ ಎನ್ನುವುದು ಈಗ ಕೇಳಿ ಬರುತ್ತಿರುವ ಹಕ್ಕೊತ್ತಾಯ.

ಇತ್ತೀಚಿನ ಸುದ್ದಿ

ಜಾಹೀರಾತು