ಇತ್ತೀಚಿನ ಸುದ್ದಿ
ಮಂಗಳೂರು ವಿವಿ ಮಂಗಳ ಆಡಿಟೋರಿಯಂನಲ್ಲಿ ಗಣೇಶೋತ್ಸವ ಸಂಭ್ರಮ
19/09/2023, 19:31

ಮಂಗಳೂರು(reporterkarnataka.com): ಮಂಗಳೂರು ವಿಶ್ವವಿದ್ಯಾನಿಲಯ ಮಂಗಳ ಆಡಿಟೋರಿಯಂನಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಗಣೇಶೋತ್ಸವವನ್ನು ಬಹಳ ವಿಜ್ರಂಭಣೆಯಿಂದ ಆಚರಿಸಲಾಯಿತು.
ರಾಷ್ಟ್ರೀಯ ಸ್ವಯಂಸೇವಕ ಸಂಘದ ದಕ್ಷಿಣ ಮಧ್ಯ ಕ್ಷೇತ್ರಿಯ ಪ್ರಮುಖರು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರು ಡಾ.|ಪ್ರಭಾಕರ್ ಭಟ್ ಕಲ್ಲಡ್ಕರವರ ಜೊತೆ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ. ವೈ. ಭರತ್ ಶೆಟ್ಟಿ ಅವರು ದೇವರ ಪುಣ್ಯ ಕಾರ್ಯದಲ್ಲಿ ಭಾಗವಹಿಸಿ ಪ್ರಸಾದ ಸ್ವೀಕರಿಸಿದರು.ಈ ಸಂದರ್ಭ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನ ಪ್ರಮುಖರು, ಕಾಲೇಜು ವಿದ್ಯಾರ್ಥಿಗಳು, ಪೋಷಕರು ಹಾಗೂ ಸ್ಥಳೀಯರು ಭಾಗವಹಿಸಿದ್ದರು.