10:26 AM Monday22 - December 2025
ಬ್ರೇಕಿಂಗ್ ನ್ಯೂಸ್
ಗಾಂಧಿ ಭಾರತವನ್ನು ಗೋಡ್ಸೆ ಭಾರತವಾಗಿ ಮಾಡಲು ಬಿಡುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಟಿಪ್ಪರ್ -ಬೊಲೆರೋ ಜೀಪ್ ಡಿಕ್ಕಿ: ಕರ್ತವ್ಯದಲ್ಲಿ ತೆರಳುತ್ತಿದ್ದ ಬಿಎಸ್ಸೆನ್ನೆಲ್ ಸಿಬ್ಬಂದಿಗಳಿಗೆ ಗಾಯ ಹೌದು…ವೈದ್ಯೋ ನಾರಾಯಣೋ ಹರಿ; ಆದರೆ, ದಾದಿಯರು ಎಲೆ ಮರೆಯ ಕಾಯಿ! ಪೌರ ಕಾರ್ಮಿಕರು ಸೇರಿ ಎಲ್ಲ ಕಾರ್ಮಿಕರಿಗೆ ಪಾಲಿಕೆಯಿಂದಲೇ ನೇರ ವೇತನ ಪಾವತಿಗೆ ಕ್ರಮ:… ಕ್ರೆಡಲ್‌ನಿಂದ ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನಾಚರಣೆ: ಚಿತ್ರ ಬಿಡಿಸಿದ ಪ್ರೌಢಶಾಲೆ ಮಕ್ಕಳು ಮಡಿಕೇರಿ ಹನಿಟ್ರ್ಯಾಪ್ ಪ್ರಕರಣ: ನಾಪತ್ತೆಯಾಗಿದ್ದ ಮತ್ತಿಬ್ಬರು ಆರೋಪಗಳ ಬಂಧನ Belagavi | ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ವಲಸಿಗರಿಂದ ಅಕ್ರಮ ಚಟುವಟಿಕೆ: ಗಡಿಪಾರಿಗೆ ಸದನದಲ್ಲಿ ಶಾಸಕ ಡಾ. ಮಂತರ್ ಗೌಡ ಆಗ್ರಹ ಉರುಳಿಗೆ ಸಿಲುಕಿ ಹುಲಿ ಸಾವಿನ ಪ್ರಕರಣ: ಆರೋಪಿಗಳ ಪತ್ತೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ…

ಇತ್ತೀಚಿನ ಸುದ್ದಿ

ಮಂಗಳೂರು ವಿವಿಯಲ್ಲಿ ಸ್ವತಂತ್ರ ತುಳು ಅಧ್ಯಯನ ವಿಭಾಗ: ಉನ್ನತ ಶಿಕ್ಷಣ ಸಚಿವರಿಗೆ ಸಿಂಡಿಕೇಟ್ ಸದಸ್ಯ ಸವಾದ್ ಸುಳ್ಯ ಮನವಿ

13/07/2024, 23:41

ಮಂಗಳೂರು(reporterkarnataka.com): ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಸ್ವತಂತ್ರ ತುಳು ಅಧ್ಯಯನ ವಿಭಾಗ ಆರಂಭಿಸಬೇಕೆಂದು ಸಿಂಡಿಕೇಟ್ ಸದಸ್ಯ ಸವಾದ್ ಸುಳ್ಯ ಅವರು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್ ಅವರಿಗೆ ಮನವಿ ಸಲ್ಲಿಸಿದ್ದಾರೆ.


ಬೆಂಗಳೂರಿನಲ್ಲಿ ಸಚಿವರನ್ನು ಭೇಟಿಯಾದ ಸವಾದ್ ಈ ಬೇಡಿಕೆ ಸಲ್ಲಿಸಿದ್ದಾರೆ.ಸ್ಪೀಕರ್ ಯು.ಟಿ.ಖಾದರ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಸಚಿವರು ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಸವಾದ್ ಸುಳ್ಯ ಮಾಧ್ಯಮಕ್ಕೆ ಮಾಹಿತಿ ನೀಡಿದ್ದಾರೆ.
ಸವಾದ್ ಈ ಹಿಂದೆ ಸಿದ್ದರಾಮಯ್ಯ ಸರಕಾರ ಇರುವಾಗಲೇ 2018-19ರ ಸಾಲಿನಲ್ಲಿ ತುಳು ಎಂಎ ವಿಭಾಗ ಮಂಗಳೂರು ವಿವಿಯಲ್ಲಿ ಆರಂಭಗೊಂಡಿರುವ ಬಗ್ಗೆಯೂ ಸಚಿವರ ಗಮನಕ್ಕೆ ತಂದಿದ್ದಾರೆ. ಆದರೆ, ಸದ್ಯ ತುಳು ಎಂಎ ವಿಭಾಗ ಕನ್ನಡ ಅಧ್ಯಯನ ವಿಭಾಗದಡಿಯಲ್ಲೇ ಇದ್ದು, ಹೀಗಾಗಿ ಸ್ವತಂತ್ರ ಅಸ್ತಿತ್ವ ಸಿಕ್ಕಿಲ್ಲ. ಸ್ವತಂತ್ರ ಅಧ್ಯಯನ ವಿಭಾಗ ರಚನೆ ಸಲುವಾಗಿ ಈಗಾಗಲೇ ಮಂಗಳೂರು ವಿವಿಯಿಂದ ಉನ್ನತ ಶಿಕ್ಷಣ ಇಲಾಖೆಗೆ ಪ್ರಸ್ತಾವನೆ ಹೋಗಿರುವುದನ್ನು ಸವಾದ್ ಅವರು ಸಚಿವರ ಗಮನಕ್ಕೆ ತಂದಿದ್ದಾರೆ.
ಸ್ಪೀಕರ್ ಯುಟಿ ಖಾದರ್ ಈ ಬಗ್ಗೆ ಸ್ಪಂದಿಸಿದ್ದು, ತುಳು ಅಧ್ಯಯನ ವಿಭಾಗ ರಚಿಸುವುದಕ್ಕೆ ಆದ್ಯತೆ ನೀಡುವಂತೆ ಸಚಿವರಿಗೆ ಸೂಚಿಸಿದ್ದಾರೆ. ಅಲ್ಲದೆ, ಆಂಧ್ರಪ್ರದೇಶದ ಕುಪ್ಪಂ ವಿವಿಯಲ್ಲಿ ತುಳು ಅಧ್ಯಯನ ವಿಭಾಗ ಇದೆ. ನಮ್ಮ ತುಳು ಭಾಷಿಕರು ಇರುವಂತಹ ಮಂಗಳೂರು ವಿವಿಯಲ್ಲಿ ತುಳು ಅಧ್ಯಯನ ವಿಭಾಗ ಇಲ್ಲದಿರುವುದು ದೊಡ್ಡ ಕೊರತೆಯಾಗಿದೆ ಎಂದು ಸಚಿವರಿಗೆ ಮನವರಿಕೆ ಮಾಡಿದ್ದಾರೆ.
ಸ್ಪೀಕರ್ ಖಾದರ್ ಮಾಡಿದ ಮನವಿಯನ್ನು ಗಂಭೀರವಾಗಿ ಪರಿಗಣಿಸಿದ ಸಚಿವರು ಕೂಡಲೇ ತನ್ನ ಕಾರ್ಯದರ್ಶಿ ಮೂಲಕ ಸರಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ರವಾನಿಸಿದ್ದಾರೆ. ಈ ಬಗ್ಗೆ ತುರ್ತು ಗಮನಹರಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆಂದು ಸಿಂಡಿಕೇಟ್ ಸದಸ್ಯ ಸವಾದ್ ಸುಳ್ಯ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು