2:54 AM Monday21 - April 2025
ಬ್ರೇಕಿಂಗ್ ನ್ಯೂಸ್
Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ…

ಇತ್ತೀಚಿನ ಸುದ್ದಿ

ಮಂಗಳೂರು ವಿವಿ ಕೊಂಕಣಿ ಅಧ್ಯಯನ ಪೀಠ: 2021- 22ನೇ ಸಾಲಿನ ಕಾರ್ಯಯೋಜನೆ ಅನುಷ್ಠಾನ ಸಭೆ

07/11/2021, 19:58

ಚಿತ್ರ:ಅನುಷ್ ಪಂಡಿತ್ ಮಂಗಳೂರು
ಮಂಗಳೂರು(reporterkarnataka news):ಮಂಗಳೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಸುಬ್ರಹ್ಮಣ್ಯ ಯಡಪಡಿತ್ತಾಯ ಹಾಗೂ ಕುಲಸಚಿವ ಪ್ರೊ.ಕಿಶೋರ್ ಕುಮಾರ್ ಅವರ ಮಾರ್ಗದರ್ಶನದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ಕೊಂಕಣಿ ಅಧ್ಯಯನ ಪೀಠದ 2021-22ರ ಸಾಲಿನ ಕಾರ್ಯಯೋಜನೆಯನ್ನು ಅನುಷ್ಠಾನಗೊಳಿಸುವುದರ ಸಲುವಾಗಿ ಮಂಗಳೂರು ವಿಶ್ವವಿದ್ಯಾನಿಲಯ ವ್ಯಾಪ್ತಿಯ ವಿವಿಧ ಕಾಲೇಜುಗಳ ಉಪನ್ಯಾಸಕರ ಸಭೆಯನ್ನು ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಕರೆಯಲಾಗಿತ್ತು. ಸದ್ರಿ ಸಭೆಯಲ್ಲಿ ಕೊಂಕಣಿ ಅಧ್ಯಯನ ಪೀಠದ ಸವಿಸ್ತಾರ ಮಾಹಿತಿಯನ್ನು ಪೀಠದ ಸಂಯೋಜಕ ಡಾ.ಜಯವಂತ ನಾಯಕ್ ನೀಡಿದರು. ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ ವಿವಿಧ ಕಾಲೇಜುಗಳಲ್ಲಿ ಕೊಂಕಣಿ ಸಾಹಿತ್ಯ, ಸಂಸ್ಕೃತಿಗೆ ಸಂಬಂಧಪಟ್ಟ ಕಾರ್ಯಕ್ರಮಗಳನ್ನು ಸಂಘಟಿಸುವ ಕುರಿತು ತೀರ್ಮಾನಿಸಲಾಯಿತು. ಅದೇ ರೀತಿ ವಿವಿಧ ಕಾಲೇಜುಗಳಲ್ಲಿ ವಿಶೇಷ ಉಪನ್ಯಾಸ, ಸರ್ಟಿಫಿಕೇಟ್ ಕೋರ್ಸ್, ಕೊಂಕಣಿ ಕ್ಲಬ್ ನಡೆಸಲು ನಿರ್ಧಾರ ಕೈಗೊಳ್ಳಲಾಗಿದೆ. ಅದಲ್ಲದೇ, ಕೊಂಕಣಿ ಸ್ನಾತಕೋತ್ತರ ಪದವಿಯ ಕುರಿತು ಸಂಯೋಜಕ ದೇವದಾಸ ಪೈ ಮಾಹಿತಿ ನೀಡಿದರು. ಪ್ರಸ್ತುತ ವರ್ಷ ಕಾಲೇಜುಗಳಲ್ಲಿ ನೂತನ ಶಿಕ್ಷಣ ನೀತಿ ಆಶಯವನ್ನು ಆಧರಿಸಿ ಪಠ್ಯಕ್ರಮವನ್ನು ರಚಿಸಲಾಗಿದೆ ಎಂದು ಮಾಹಿತಿ ನೀಡಿದರು. ಕಾಲೇಜುಗಳಲ್ಲಿ ಕೊಂಕಣಿ ಶಿಕ್ಷಣಕ್ಕೆ ಉತ್ತೇಜನ ನೀಡಬೇಕು ಎಂದು ಮಿಲಾಗ್ರಿಸ್ ಕಾಲೇಜಿನ ಪ್ರಾಂಶುಪಾಲ ಪ್ರೊ.ಮೈಕಲ್ ಸಾ0ತುಮೇಯರ್ ಅಭಿಪ್ರಾಯ ಪ್ರಾಯಪಟ್ಟರು. ಮಡಂತ್ಯಾರು ಸೈಂಟ್ ಸೇಕ್ರೆಡ್ ಹಾರ್ಟ್ ಕಾಲೇಜಿನ ಸ್ನಾತಕೋತ್ತರ ವಾಣಿಜ್ಯಶಾಸ್ತ್ರ ವಿಭಾಗದ ಉಪನ್ಯಾಸಕರಾದ ಪ್ರೊ. ವೆಂಕಟೇಶ್ ನಾಯಕ್ ಪೀಠದ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವಲ್ಲಿ ಸಲಹೆ ಸೂಚನೆಗಳನ್ನು ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು