7:29 PM Saturday10 - January 2026
ಬ್ರೇಕಿಂಗ್ ನ್ಯೂಸ್
ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ… ಅಕ್ರಮ ಗಾಂಜಾ ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳ ಬಂಧನ ನಮ್ಮ ಮೆಟ್ರೋದಲ್ಲಿ ವಿದ್ಯಾರ್ಥಿಗಳಿಗೆ ರಿಯಾಯಿತಿ ಪಾಸ್: ಎಎಪಿ ಯುವ ಘಟಕದಿಂದ ಸಹಿ ಸಂಗ್ರಹಣ… ಬಾಂಗ್ಲಾದವರು ನುಸುಳುವವರೆಗೆ ಕೇಂದ್ರ ಗೃಹ ಇಲಾಖೆ ನಿದ್ದೆಗೆ ಜಾರಿತ್ತಾ?: ಸಚಿವ ಕೃಷ್ಣ ಬೈರೇಗೌಡ…

ಇತ್ತೀಚಿನ ಸುದ್ದಿ

ಮಂಗಳೂರು ವಿವಿ ಮತ್ತೆ ಗತ ವೈಭವಕ್ಕೆ: ನೂತನ ಕುಲಪತಿ ಪ್ರೊ. ಧರ್ಮ ವಿಶ್ವಾಸ

16/05/2024, 21:32

ಮಂಗಳಗಂಗೋತ್ರಿ(reporterkarnataka.com): ಮಂಗಳೂರು ವಿವಿಯು ಇಂದು ಹಲವಾರು ಸವಾಲುಗಳನ್ನು ಎದುರಿಸುತ್ತಿದೆ. ಆದರೆ ಶೀಘ್ರದಲ್ಲಿ ಅವೆಲ್ಲವನ್ನು ಮೀರಿ ಮತ್ತೆ ಹಳೆಯ ವೈಭವಕ್ಕೆ ಮರಳುತ್ತೇವೆ ಎಂದು ಮಂಗಳೂರು ವಿವಿಯ 10ನೇ ಉಪ ಕುಲಪತಿಯಾಗಿ ಅಧಿಕಾರ ಸ್ವೀಕರಿಸಿದ ಪ್ರೊ. ಡಾ. ಪಿ. ಎಲ್. ಧರ್ಮ ಹೇಳಿದರು. ತಮ್ಮ ವಿದ್ಯಾರ್ಥಿ ಜೀವನದ ಹಲವು ಸವಿ ನೆನಪುಗಳನ್ನು ಹಂಚಿಕೊಂಡ ಪ್ರೊ. ಡಾ. ಪಿ. ಎಲ್. ಧರ್ಮ ನನ್ನ ವ್ಯಕ್ತಿತ್ವವನ್ನು ರೂಪಿಸಿದ್ದು ಮಂಗಳೂರು ವಿಶ್ವ ವಿದ್ಯಾನಿಲಯ, ಈ ನಿಟ್ಟಿನಲ್ಲಿ ನನ್ನ ಸ್ನೇಹಿತರ, ಅಧ್ಯಾಪಕರ ಪಾತ್ರ ಅಪಾರವಾದದು ಎಂದರು.
ಮಂಗಳೂರು ವಿಶ್ವವಿದ್ಯಾನಿಲಯದ ಅಧ್ಯಾಪಕರ ಸಂಘದ ವತಿಯಿಂದ ವಿಶ್ವವಿದ್ಯಾಲಯದ ನೂತನ ಕುಲಪತಿ, ಇದೇ ವಿವಿ ಯ ರಾಜಶಾಸ್ತ್ರ ವಿಭಾಗದ ಹಿರಿಯ ಪ್ರಾಧ್ಯಾಪಕರು ಪ್ರೊ. ಡಾ. ಪಿ. ಎಲ್ ಧರ್ಮ ಅವರನ್ನು ಅಭಿನಂದಿಸಿದರು. ಈ ಸಂದರ್ಭದಲ್ಲಿ ಮಂಗಳೂರು ವಿವಿ ವಿವಿಧ ವಿಭಾಗಗಳ ಪ್ರಾಧ್ಯಾಪಕರುಗಳಾದ ವಿಶ್ವನಾಥ್, ರವೀಂದ್ರ ಆಚಾರಿ , ಎ. ಎಂ. ಖಾನ್, ನಾರಾಯಣ ಮತ್ತು ಪ್ರಶಾಂತ್ ನಾಯ್ಕ ನೂತನ ಕುಲಪತಿಗಳ ಜೊತೆಗಿನ ತಮ್ಮ ನಡುವಿನ ಭಾಂದವ್ಯದ ಕುರಿತು ಮತ್ತು ಶೈಕ್ಷಣಿಕ ಕ್ಷೇತ್ರಕ್ಕೆ ಅವರ ಕೊಡುಗೆ ಕುರಿತು ಮನದಾಳದ ಮಾತುಗಳನ್ನು ಹಂಚಿಕೊಂಡರು.
ಅಧ್ಯಾಪಕರ ಸಂಘದ ಅಧ್ಯಕ್ಷ ಡಾ. ಮೋಹನ್ ಸಿಂಘೆ ಅಧ್ಯಕ್ಷತೆ ವಹಿಸಿದರು.. ವಿವಿಯ ಪರೀಕ್ಷಾಂಗ ಕುಲಸಚಿವ ಪ್ರೊ . ದೇವೇಂದ್ರಪ್ಪ, ಹಣಕಾಸು ಅಧಿಕಾರಿ, ಪ್ರೊ ವೈ. ಸಂಗಪ್ಪ ಉಪಸ್ಥಿತರಿದ್ದರು
ಪ್ರೊ . ನಿರ್ಮಲ ಪ್ರಾರ್ಥಿಸಿದರು, ಡಾ. ಧನಂಜಯ್ ಕುಂಬ್ಳೆ ಕಾರ್ಯಕ್ರಮವನ್ನು ನಿರೂಪಿಸಿ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು