ಇತ್ತೀಚಿನ ಸುದ್ದಿ
ಮಂಗಳೂರು ವಿವಿ: ರಾಜ್ಯಪಾಲರಿಂದ ಡಾ. ಅಂಬೇಡ್ಕರ್ ಪ್ರತಿಮೆ ಲೋಕಾರ್ಪಣೆ
06/12/2022, 20:18

ಮಂಗಳೂರು(reporterkarnataka.com): ಮಂಗಳೂರು ವಿಶ್ವವಿದ್ಯಾನಿಲಯದ ಆವರಣದಲ್ಲಿ ನಿರ್ಮಿಸಲಾಗಿರುವ ಡಾ. ಬಿ.ಆರ್. ಅಂಬೇಡ್ಕರ್ ಅವರ 9 ಅಡಿ ಉದ್ದದ ಪ್ರತಿಮೆಯನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಮಂಗಳವಾರ ಲೋಕಾರ್ಪಣೆ ಮಾಡಿದರು.
ಈ ಸಂದರ್ಭದಲ್ಲಿ ಛತ್ತೀಸ್ ಘರ್ ನ ತೋಟಗಾರಿಕೆ, ಅರಣ್ಯ ಹಾಗೂ ದುಗ್೯ ಮಹಾತ್ಮಾ ಗಾಂಧಿ ವಿಶ್ವವಿದ್ಯಾನಿಲಯ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಸಮಾಜ ವಿಜ್ಞಾನ ಹಾಗೂ ಮಾಹೋ ವಿಶ್ವವಿದ್ಯಾಲಯದ ಸಂಸ್ಥಾಪಕ ಕುಲಪತಿಗಳಾದ ಫ್ರೊ ಆರ್.ಎಸ್. ಕುರೀಲ್, ಮಂಗಳೂರು ವಿಶ್ವವಿದ್ಯಾನಿಲಯ ಕುಲಪತಿ ಪ್ರೊ. ಪಿ. ಸುಬ್ರಮಣ್ಯ ಯಡಪಡಿತ್ತಾಯ, ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್ ಹಾಗೂ ಇತರರು ಉಪಸ್ಥಿತರಿದ್ದರು.