1:59 AM Wednesday27 - November 2024
ಬ್ರೇಕಿಂಗ್ ನ್ಯೂಸ್
ಅಡಿಕೆ ಬೆಳೆಗಾರರ ಸಮಸ್ಯೆ: ಕರಾವಳಿ ಸಂಸದರಿಂದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್… ಡಿ.8ರಂದು ಉರ್ವ ಪೊಂಪೈ ಮಾತೆಯ ಪುಣ್ಯಕ್ಷೇತ್ರದ ವಾರ್ಷಿಕ ಹಬ್ಬ: ಬಿಷಪ್ ಡಾ. ಪೀಟರ್… ಕರ್ತವ್ಯಲೋಪ: ಚಿಕ್ಕಮಗಳೂರು ನಗರ ಠಾಣೆ ಇನ್ಸ್ ಪೆಕ್ಟರ್ ರೇಣುಕಾ ಪ್ರಸಾದ್ ಅಮಾನತು ರಾಜ್ಯ ಸರಕಾರದ ಜನಪರ ಕೆಲಸಕ್ಕೆ ಮತದಾರರ ಜೈ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್… ತೀರ್ಥಹಳ್ಳಿ ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ: ತನಿಖೆ ಆರಂಭ ಕಳೆದ ಬಾರಿ ಅರ್ಧಂಬರ್ಧ ಸುಣ್ಣಬಣ್ಣ ಕಂಡ ತುಂಗಾ ಕಮಾನು ಸೇತುವೆಗೆ ಈ ಬಾರಿ… ಅಟಲ್ ಜೀ ಜನಸ್ನೇಹಿ ಕೇಂದ್ರ ಯೋಜನೆಯಲ್ಲಿ ಕೋಲಾರ ಪ್ರಥಮ: ಜಿಲ್ಲಾಧಿಕಾರಿ ಅಕ್ರಂ ಪಾಷಾಗೆ… ಚನ್ನಪಟ್ಟಣದಲ್ಲಿ ಸೋಲು: ನಿಖಿಲ್ ಕುಮಾರಸ್ವಾಮಿಗೆ ರಕ್ತದಲ್ಲಿ ಪತ್ರ ಬರೆದು ಧೈರ್ಯ ತುಂಬಿದ ಕಾರ್ಯಕರ್ತ! ಮೂಡಿಗೆರೆ: ಬೆಂಕಿ ಆಕಸ್ಮಿಕದಲ್ಲಿ ಗುಡಿಸಲು ಸಂಪೂರ್ಣ ಭಸ್ಮ; ಬೀದಿಗೆ ಬಿದ್ದ ಬಡ ಕುಟುಂಬ ರಾಜ್ಯ ವಿಧಾನಸಭೆಯ 3 ಕ್ಷೇತ್ರಗಳ ಉಪ ಚುನಾವಣೆ; ಕಾಂಗ್ರೆಸ್ ಭರ್ಜರಿ ಜಯ; ಕೇಸರಿ…

ಇತ್ತೀಚಿನ ಸುದ್ದಿ

ಮಂಗಳೂರು ವಿವಿ ವಿದ್ಯಾರ್ಥಿ ಪರಿಷತ್ ಉದ್ಘಾಟನೆಗೆ  ಡಾ. ಕಲ್ಲಡ್ಕ ಪ್ರಭಾಕರ ಭಟ್ ಗೆ  ಆಹ್ವಾನ: ಎಸ್ಎಫ್ಐ ಪ್ರತಿಭಟನೆ

30/03/2022, 12:41

ಮಂಗಳೂರು(reporterkarnataka.com): ಮಂಗಳೂರು ವಿಶ್ವವಿದ್ಯಾನಿಲಯದ ವಿದ್ಯಾರ್ಥಿ ಕ್ಷೇಮಪಾಲನಾ ನಿರ್ದೇಶನಾಲಯ 2021-22 ರ ಸಾಲಿನ ಸ್ನಾತಕೋತ್ತರ ವಿದ್ಯಾರ್ಥಿ ಪರಿಷತ್ತಿನ ಉದ್ಘಾಟನಾ ಕಾರ್ಯಕ್ರಮಕ್ಕೆ ಆರ್.ಎಸ್‌.ಎಸ್ ಮುಖಂಡ ಡಾ. ಕಲ್ಲಡ್ಕ ಪ್ರಭಾಕರ ಭಟ್ಟರನ್ನು ಆಹ್ವಾನಿಸಿರುವುದನ್ನು ವಿರೋಧಿಸಿ ವಿವಿ ಕ್ಯಾಂಪಸ್ ಎದುರುಗಡೆ ಭಾರತ ವಿದ್ಯಾರ್ಥಿ ಫೆಡರೇಶನ್ (ಎಸ್.ಎಫ್.ಐ) ವತಿಯಿಂದ ಬುಧವಾರ ಪ್ರತಿಭಟನೆ ನಡೆಯಿತು.


ಕಾರ್ಯಕ್ರಮಕ್ಕೆ ಆಹ್ವಾನಿಸಲು ಅವಕಾಶ ಮಾಡಿಕೊಟ್ಟ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಪಿ. ಸುಬ್ರಮಣ್ಯ ಯಡಪಡಿತ್ತಾಯರ ನಡೆಯನ್ನು ಎಸ್ ಎಫ್ ಐ ಖಂಡಿಸಿತು. ಜಿಲ್ಲಾಡಳಿತ ದ.ಕ ಜಿಲ್ಲೆಯ ಕಾನೂನು ಸುವ್ಯವಸ್ಥೆ ರಕ್ಷಣೆಗಾಗಿ, ಕಾಲೇಜು ಕ್ಯಾಂಪಸ್ ಗಳಲ್ಲಿ ಶಾಂತಿ ಕದಡದಂತೆ ಮುಂಜಾಗ್ರತೆಯ ಭಾಗವಾಗಿ ಈ ಕಾರ್ಯಕ್ರಮದಲ್ಲಿ ಯಾವುದೇ ಕಾರಣಕ್ಕೂ ಕಲ್ಲಡ್ಕ ಪ್ರಭಾಕರ ಭಟ್ಟರು ಭಾಗವಹಿಸಲು ಅವಕಾಶ ನೀಡದಂತೆ ಕ್ರಮಕೈಗೊಳ್ಳಲು ಒತ್ತಾಯಿಸಿತು. ಪ್ರತಿಭಟನಾಕಾರರನ್ನು ಪೊಲೀಸರು ಬಂಧಿಸಿದರು.

ವಿರೋಧ ವ್ಯಕ್ತಪಡಿಸುತ್ತದೆ. ಕೋಮು ಮತಾಂಧತೆಗೆ ವಿದ್ಯಾರ್ಥಿಗಳು ಬಲಿಯಾಗದಂತೆ ಎಚ್ಚರವಹಿಸುವ ಜವಾಬ್ದಾರಿ ಜಿಲ್ಲಾಡಳಿತಕ್ಕೆ ಇದೆ. ಧರ್ಮಾಧಾರಿತ ತಾರತಮ್ಯ, ಜನಾಂಗ ದ್ವೇಷಕ್ಕೆ ಕುಖ್ಯಾತರಾಗಿರುವ ಪ್ರಭಾಕರ್ ಭಟ್ ರಂತವರನ್ನು ವಿದ್ಯಾರ್ಥಿ ಸಂಘದ ಉದ್ಘಾಟನಾ ಕಾರ್ಯಕ್ರಮಕ್ಕೆ ಭಾಗವಹಿಸದಂತೆ ಜಿಲ್ಲಾಡಳಿತ ಕ್ರಮಕೈಗೊಳ್ಳಲು ಒತ್ತಾಯಿಸುತ್ತದೆ.

ಕರಾವಳಿ ಜಿಲ್ಲೆಯಲ್ಲಿ ಕಳೆದ ಹಲವು ದಿನಗಳಿಂದ ಕೋಮುವಾದಿ ಸಂಘಟನೆಗಳು ತಮ್ಮ ಮತೀಯ ದ್ರುವೀಕರಣದ ಅಜೆಂಡಾಗಳನ್ನು ವ್ಯವಸ್ಥಿತವಾಗಿ ಜಾರಿಗೊಳಿಸಲು ಸರಕಾರಿ ಶಾಲಾ ವಠಾರಗಳನ್ನು ದುರ್ಬಳಕೆ ಮಾಡುತ್ತಿರುವ ಘಟನೆಗಳು ನಿರಂತರವಾಗಿ ನಡೆಯುತ್ತಿವೆ. ಈಗಾಗಲೇ ಉಡುಪಿಯ ಶಾಲೆಯಲ್ಲಿ ಹಿಜಾಬ್ ನಿಂದ ಪ್ರಾರಂಭಗೊಂಡ ವಿಷಯಗಳು ಮತೀಯ ರೂಪ ಪಡೆದು ಕೇಸರಿ ಶಾಲು ಸೇರಿದಂತೆ ವಿದ್ಯಾರ್ಥಿಗಳ ನಡುವೆ ಪರಸ್ಪರ ಅಪನಂಬಿಕೆಗಳಿಗೆ, ಗುಂಪು ಘರ್ಷಣೆಗಳಿಗೆ ಎಡೆಮಾಡಿ ಕೊಟ್ಟಿರುವ ಘಟನೆಗಳು ನಮ್ಮ ಕಣ್ಣ ಮುಂದಿವೆ. ಈಗಾಗಲೇ ಹಿಜಾಬ್ ಕಾರಣಕ್ಕೆ ಬಹಳಷ್ಟು ಶಾಲಾ ವಿದ್ಯಾರ್ಥಿಗಳು ತಮ್ಮ ಶಿಕ್ಷಣದಿಂದ ವಂಚಿತರಾಗಿದ್ದಾರೆ. ಬಹಳಷ್ಟು ವಿದ್ಯಾರ್ಥಿಗಳ ಮೇಲೆ ಪೊಲೀಸ್ ಪ್ರಕರಣ ದಾಖಲಾಗಿ ಪರಿತಪಿಸುತ್ತಿದ್ದಾರೆ. ಇನ್ನೊಂದೆಡೆ ಶಿಕ್ಷಣವನ್ನು ಪಡೆಯಲು ಬರುವ ಪ್ರತಿಭಾನ್ವಿತ ವಿದ್ಯಾರ್ಥಿಗಳು ಮತ್ತವರ ಪೋಷಕರು ಇಂತಹ ಘಟನೆಗಳಿಂದ ಭೀತಿಗೊಳಗಾಗಿದ್ದಾರೆ. ಕಾನೂನು ಸುವ್ಯವಸ್ಥೆ ಕಾಪಾಡಲು ಪ್ರಯತ್ನಿಸಬೇಕಾಗಿದ್ದ ಕರ್ನಾಟಕ ರಾಜ್ಯದ ಬಿಜೆಪಿ ಸರಕಾರ ತನ್ನ ಆಡಳಿತ ವೈಫಲ್ಯ ಮರೆಮಾಚಲು ಇಂತಹ ಘಟನೆಗಳಿಗೆ ಕುಮ್ಮಕ್ಕನ್ನು ನೀಡುತ್ತಿದ್ದೆ. ಆ ಕಾರಣಕ್ಕಾಗಿಯೇ ಸಂಘಪರಿವಾರ ಅಲ್ಪ ಸಂಖ್ಯಾತರನ್ನು ಗುರಿಯನ್ನಾಗಿಸಿ ಕೋಮು ಧ್ರುವೀಕರಣ ರಾಜಕಾರಣ ನಡೆಸಲು ಸರಕಾರಿ ಶಾಲೆಗಳಲ್ಲಿ ಪ್ರಾರಂಭಿಸಿ ಇದೀಗ ಕಾಲೇಜು ಕ್ಯಾಂಪಸ್ ಗಳನ್ನು ಮುಂದಿನ ಗುರಿಯನ್ನಾಗಿಸಿವೆ. ಅಂತಹ ಉದ್ದೇಶದಿಂದಲೇ ಆರ್.ಎಸ್.ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ಟರನ್ನು ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ವಿದ್ಯಾರ್ಥಿಗಳ ಕಾರ್ಯಕ್ರಮವೊಂದಕ್ಕೆ ಉದ್ಘಾಟಕರಾಗಿ ಆಹ್ವಾನಿಸಲಾಗಿದೆ. ಇದು ಮಂಗಳೂರು ವಿಶ್ವ ವಿದ್ಯಾನಿಲಯದ ವಿದ್ಯಾರ್ಥಿಗಳ ನಡುವೆ ಪರಸ್ಪರ ಅಪನಂಭಿಕೆಗಳನ್ನು, ಕಂದರಗಳನ್ನು ಸೃಷ್ಟಿ ಮಾಡುವ ಸಾಧ್ಯತೆ ಇದೆ.

ಈ ರೀತಿ ಕಾಲೇಜು ಕ್ಯಾಂಪಸ್ ಗಳಿಗೆ ಸಂವಿಧಾನದ ಆಶಯಗಳಿಗೆ ವಿರುದ್ದವಾಗಿ ವರ್ತಿಸುವ, ಕೋಮು ಪ್ರಚೋದಿತ ದ್ವೇಷಗಳನ್ನು ಹರಡುವ ಮತ್ತು ಅವೈಜ್ಞಾನಿಕ ಮನೋಭಾನೆಗಳನ್ನು ಬಿತ್ತುವ ಆರ್.ಎಸ್.ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ಟರನ್ನು ವಿಶ್ವವಿದ್ಯಾನಿಲಯದ ಕಾರ್ಯಕ್ರಮದ ಉದ್ಘಾಟನೆಗೆ ಆಹ್ವಾನಿಸುವುದನ್ನು ಭಾರತ ವಿದ್ಯಾರ್ಥಿ ಫೆಡರೇಶನ್ ಎಸ್.ಎಫ್.ಐ ದ.ಕ ಜಿಲ್ಲಾ ಸಮಿತಿ ವಿರೋಧಿಸುತ್ತದೆ. 

ಇಂತಹ ಕಾರ್ಯಕ್ರಮಕ್ಕೆ ಆಹ್ವಾನಿಸಲು ಅವಕಾಶ ಮಾಡಿಕೊಟ್ಟ ವಿಶ್ವವಿದ್ಯಾನಿಲಯದ ಕುಲಪತಿ ಪ್ರೋ. ಪಿ. ಸುಬ್ರಮಣ್ಯ ಯಡಪಡಿತ್ತಾಯರ ನಡೆಯನ್ನು ಖಂಡಿಸುತ್ತದೆ. ಹಾಗೂ ಜಿಲ್ಲಾಡಳಿತ ದ.ಕ ಜಿಲ್ಲೆಯ ಕಾನೂನು ಸುವ್ಯವಸ್ಥೆ ರಕ್ಷಣೆಗಾಗಿ, ಕಾಲೇಜು ಕ್ಯಾಂಪಸ್ ಗಳಲ್ಲಿ ಶಾಂತಿ ಕದಡದಂತೆ ಮುಂಜಾಗ್ರತೆಯ ಭಾಗವಾಗಿ ಈ ಕಾರ್ಯಕ್ರಮದಲ್ಲಿ ಯಾವುದೇ ಕಾರಣಕ್ಕೂ ಕಲ್ಲಡ್ಕ ಪ್ರಭಾಕರ ಭಟ್ಟರು ಭಾಗವಹಿಸಲು ಅವಕಾಶ ನೀಡದಂತೆ ಕ್ರಮಕೈಗೊಳ್ಳಲು ಒತ್ತಾಯಿಸುತ್ತದೆ ಎಂದು ಎಸ್.ಎಫ್.ಐ ನ ಜಿಲ್ಲಾ ಮುಖಂಡರಾದ ವಿನಿತ್ ದೇವಾಡಿಗ , ವಿನುಶ ರಮಣ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಇತೀ

ಸಂಚಾಲಕರು

ವಿನಿತ್ ದೇವಾಡಿಗ

ಭಾರತ ವಿದ್ಯಾರ್ಥಿ ಫೆಡರೇಶನ್ SFI

ತಾ.29.03.2022

ಸ್ಥಳ : ಮಂಗಳೂರು.

ಇತ್ತೀಚಿನ ಸುದ್ದಿ

ಜಾಹೀರಾತು