8:41 PM Friday9 - October 2026
ಬ್ರೇಕಿಂಗ್ ನ್ಯೂಸ್
ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು ನೈಸ್ ಯೋಜನೆ | 1995ರಿಂದ ಯೋಜನೆ ನಡೆದು ಬಂದ ಹಾದಿಯನ್ನು ಜನರ ಮುಂದಿಡುತ್ತೇನೆ:… ಕಾಡಿನಲ್ಲಿ ಕಾದಾಟದಿಂದ ತೀವ್ರ ಗಾಯ | ದುಬಾರೆ ಶಿಬಿರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಂಡಾನೆ… ದೋಷಪೂರಿತ ಎಸ್‌ಐಆರ್ ಪ್ರಕ್ರಿಯೆ ಸ್ಥಗಿತಗೊಳಿಸಿ: ನಟ ಪ್ರಕಾಶ್ ರೈ ಆಗ್ರಹ ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣ ಹುದ್ದೆಯಿಂದ ವಜಾಗೊಳಿಸಿ ಬಂಧಿಸಿ: ಕಾಂಗ್ರೆಸ್ ಪಾದಯಾತ್ರೆಯಲ್ಲಿ ಆಗ್ರಹ

ಇತ್ತೀಚಿನ ಸುದ್ದಿ

ಮಂಗಳೂರು | ಮೇ 1ರಿಂದ ನೀರಿನ ರೇಷನಿಂಗ್‌ ಜಾರಿ: ಜಿಲ್ಲಾಧಿಕಾರಿ ಆದೇಶ

24/04/2026, 18:38

ಮಂಗಳೂರು(reporterkarnataka.com): ಮಂಗಳೂರು ಮಹಾನಗರ ಪಾಲಿಕೆ (MCC) ವ್ಯಾಪ್ತಿಯಲ್ಲಿ ಮೇ 1 ರಿಂದ ನೀರಿನ ರೇಷನಿಂಗ್‌ ಜಾರಿಗೊಳಿಸಲು ನಿರ್ಧರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಮನಪಾ ಆಡಳಿತಾಧಿಕಾರಿ ದರ್ಶನ್ ಎಚ್.ವಿ. ತಿಳಿಸಿದ್ದಾರೆ.

*ರೇಷನಿಂಗ್‌ ಯಾಕೆ:?*
ಬೇಸಿಗೆಯಲ್ಲಿ ನೀರಿನ ಬೇಡಿಕೆ ಹೆಚ್ಚಾಗಿದ್ದು, ವಿಶೇಷವಾಗಿ ಸುರತ್ಕಲ್‌ ಮತ್ತು ಸುತ್ತಮುತ್ತಲ ಪ್ರದೇಶಗಳಿಗೆ ಸಮರ್ಪಕವಾಗಿ ನೀರು ತಲುಪಿಸುವ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ. ಪಾಲಿಕೆಯ ಎಲ್ಲಾ 60 ವಾರ್ಡ್‌ಗಳಿಗೂ ನ್ಯಾಯಯುತವಾಗಿ ನೀರು ಹಂಚಿಕೆಯಾಗಲಿ ಎಂಬ ನಿಟ್ಟಿನಲ್ಲಿ ಇನ್ನು ಮುಂದೆ ಎರಡು ದಿನಗಳಿಗೊಮ್ಮೆ ನೀರು ಪೂರೈಕೆಯಾಗಲಿದೆ.
ನೀರಿನ ಲಭ್ಯತೆ
“ತುಂಬೆ ಕಿಂಡಿ ಅಣೆಕಟ್ಟು ಹಾಗೂ ಎಎಂಆರ್ ಡ್ಯಾಂನಲ್ಲಿ ಸದ್ಯ ಸಾಕಷ್ಟು ನೀರು ಸಂಗ್ರಹವಿದೆ. ಜೂನ್ 11ರವರೆಗೆ ನಗರಕ್ಕೆ ನೀರು ಪೂರೈಸಲು ಯಾವುದೇ ತಾಂತ್ರಿಕ ತೊಂದರೆಯಿಲ್ಲ. ಪ್ರಸ್ತುತ ತುಂಬೆಯಿಂದ ನಿತ್ಯ 160 ಎಂಎಲ್‌ಡಿ ನೀರನ್ನು ಪಂಪಿಂಗ್ ಮಾಡಲಾಗುತ್ತಿದೆ,” ಎಂದು ಜಿಲ್ಲಾಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.
ಬೇಸಿಗೆಯ ಅಂತ್ಯದವರೆಗೆ ನೀರಿನ ನಿರ್ವಹಣೆಯನ್ನು ಸಮರ್ಥವಾಗಿ ನಿಭಾಯಿಸಲು ಈ ರೇಷನಿಂಗ್ ಪದ್ಧತಿ ಅನಿವಾರ್ಯವಾಗಿದ್ದು, ಸಾರ್ವಜನಿಕರು ಪಾಲಿಕೆಯೊಂದಿಗೆ ಸಹಕರಿಸುವಂತೆ ಕೋರಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು