9:06 PM Friday18 - April 2025
ಬ್ರೇಕಿಂಗ್ ನ್ಯೂಸ್
Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್… Police Encounter | ಹುಬ್ಬಳ್ಳಿ: 5 ವರ್ಷದ ಬಾಲಕಿಯ ಅಪಹರಿಸಿ ಕೊಲೆ: ಆರೋಪಿ… DCM | ಬಿಜೆಪಿಗರು ತಮ್ಮ ಹೋರಾಟ ಕೇಂದ್ರ ಸರಕಾರದ ವಿರುದ್ಧ ಎಂದು ಬೋರ್ಡ್… CET | ಪಿಯುಸಿ ಅಂಕ ಕಡಿಮೆ ಬಂತೆಂದು ಸಿಇಟಿ ಮಿಸ್ ಮಾಡ್ಕೊಬೇಡಿ: ಕರ್ನಾಟಕ… ತುಮಕೂರು ರೈಲ್ವೆ ನಿಲ್ದಾಣಕ್ಕೆ ಸಿದ್ಧಗಂಗ ಶ್ರೀಗಳ ಹೆಸರಿಡುವ ಕುರಿತು ಸಿಎಂ ಜತೆ ಚರ್ಚೆ:…

ಇತ್ತೀಚಿನ ಸುದ್ದಿ

ಮಂಗನ ಕಾಯಿಲೆ: ಅರಣ್ಯ ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ತರಬೇತಿ

30/01/2025, 16:06

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಇಲಾಖೆ, ಜಿಲ್ಲಾ ಸರ್ವೇಕ್ಷಣಾಧಿಕಾರಿಗಳ ಕಚೇರಿ ಮೈಸೂರು, ಜಿಲ್ಲಾ ರೋಗ ವಾಹಕ, ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿಗಳ ಕಚೇರಿ, ತಾಲ್ಲೂಕು ಆರೋಗ್ಯಾಧಿಕಾರಿಗಳ‌ ಕಚೇರಿ ಹೆಚ್.ಡಿ.ಕೋಟೆ, ವಲಯ ಅರಣ್ಯ ಅಧಿಕಾರಿಗಳ ಕಚೇರಿ ದಮ್ಮನ ಕಟ್ಟೆ ಇದರ ಸಹಯೋಗದೊಂದಿಗೆ ವಲಯ ಅರಣ್ಯ ಅಧಿಕಾರಿಗಳು, ಆರೋಗ್ಯ ಇಲಾಖೆ ಸಿಬ್ಬಂದಿ ವರ್ಗದವರಿಗೆ ಕ್ಯಾಸನೂರ್ ಫಾರೆಸ್ಟ್ ಅಥವಾ ಮಂಗನ ಕಾಯಿಲೆ ಬಗ್ಗೆ ತರಬೇತಿ ಶಿಬಿರ ನಡೆಸಲಾಯಿತು.
ದಮ್ಮನಕಟ್ಟೆ ಫಾರೆಸ್ಟ್ ಕಚೇರಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದ ಉದ್ಘಾಟನೆಯನ್ನು ಜಿಲ್ಲಾ ಸರ್ವೇಕ್ಷಣಾಧಿಕಾರಿಗಳಾದ ಡಾ. ನಾಗರಾಜು, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿಗಳಾದ ಡಾ. ಗೋಪಿನಾಥ್, ಎಸಿಎಫ್ ಲಕ್ಷ್ಮಿ ಕಾಂತ್, ತಾಲ್ಲೂಕು ಆರೋಗ್ಯಾಧಿಕಾರಿಗಳಾದ ಡಾ. ರವಿಕುಮಾರ್,
ಪಶು ಸಂಗೋಪನಾ ನಿರ್ದೇಶಕರಾದ ಡಾ. ವೈ ಡಿ. ರಾಜಣ್ಣ,ಆರ್ ಎಫ್ ಒ ಸಿದ್ದರಾಜು, ರಶ್ಮಿ ಸೇರಿದಂತೆ ಮುತ್ತಿತರೆ ಗಣ್ಯರು ದೀಪ ಬೆಳಗುವುದರ ಮೂಲಕ ನೆರವೇರಿಸಿದರು.
ಕಾರ್ಯಕ್ರಮ ಉದ್ಘಾಟಿಸಿ ಸರ್ವೇಕ್ಷಣಾಧಿಕಾರಿಗಳಾದ ಡಾ. ನಾಗರಾಜು ಹಾಗೂ ತಾಲೂಕು ಆರೋಗ್ಯ ಅಧಿಕಾರಿ ಡಾ. ರವಿಕುಮಾರ್ ಮಾತನಾಡಿ.
ಕ್ಯಾಸನೂರ್ ಕಾಯಿಲೆ ಅಂದರೆ ಮಂಗನ ಕಾಯಿಲೆ 1957ರಲ್ಲಿ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಕ್ಯಾಸನೂರು ಕಾಡಿನಲ್ಲಿ ಪತ್ತೆಯಾದುದರಿಂದ ಈ ರೋಗಕ್ಕೆ ಕ್ಯಾಸನೂರು ಕಾಡಿನ ಕಾಯಿಲೆ ಅಥವಾ ಮಂಗನ ಕಾಯಿಲೆ ಎಂದು ಕರೆಯಲಾಯಿತು.
ಇದು ಕಾಡಿನಲ್ಲಿರುವ ಸೋಂಕು ಪೀಡಿತ ಉಣ್ಣೆಗಳು ಕಚ್ಚುವುದರಿಂದ ಮಾತ್ರ ಬರುತ್ತದೆ. ಈ ಕಾಯಿಲೆ ಮನುಷ್ಯರಿಂದ ಮನುಷ್ಯರಿಗೆ ಹರಡುವುದಿಲ್ಲ. ಕಾಡಿನಲ್ಲಿ ಮಂಗಗಳು ಸಾಯುವುದೇ ಈ ಕಾಯಿಲೆಯ ಮುನ್ಸೂಚನೆ ಯಾಗಿರುತ್ತದೆ ಎಂದು ರೋಗದ ಗುಣಲಕ್ಷಣ, ರೋಗದ ಪತ್ತೆ ಹಚ್ಚುವಿಕೆ, ಲಸಿಕೆ ನೀಡುವುದು ಮತ್ತು ಮುಂಜಾಗ್ರತೆಯ ಬಗ್ಗೆ ಅರಣ್ಯ ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿಗಳಿಗೆ ತಿಳಿಸಿದರು.


ಅರಣ್ಯ ಇಲಾಖೆ ಸಿಬ್ಬಂದಿಗಳಿಗೆ ಡಿಎಂಪಿ ತೈಲವನ್ನು ವಿತರಣೆ ಮಾಡಿದ್ದೇವೆ, ಹಾಗೂ KFD ಲಸಿಕೆಯನ್ನು ಸಹ ನೀಡಿದ್ದೇವೆ, ಯಾವುದೇ ಮಂಕಿ, ಸತ್ತರೆ ತಕ್ಷಣ ತಿಳಿಸಿ, ಈ ಮಂಗನ ಕಾಯಿಲೆ ತಡೆಗಟ್ಟಲು ಎಲ್ಲರೂ ಸಹಕರಿಸಿ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ, ವೈದ್ಯಾಧಿಕಾರಿಗಳಾದ ಡಾ.ಶೇಷಾದ್ರಿ, ಡಾ ಆಶ್ರಿತ್ ಶೆಟ್ಟಿ,, ಡಾ.ಚಂದ್ರಶೇಖರ್, ಡಾ.ಹರ್ಷ, ಡಾ.ಕೀರ್ತಿ, ಕೀಟ ತಜ್ಞರಾದ ರತ್ನಕುಮಾರಿ, ಅರಣ್ಯ ಇಲಾಖೆಯ DRF ಮತ್ತು ಸಿಬ್ಬಂದಿ ವರ್ಗದವರು, ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು