ಇತ್ತೀಚಿನ ಸುದ್ದಿ
ಮಂಗಳೂರಿನ ಸರಕಾರಿ ಕಚೇರಿಗಳಿಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ: ಆಡಳಿತದಲ್ಲಿ ಲೋಪದೋಷಗಳ ಪರಿಶೀಲನೆ
28/10/2024, 21:59
ಮಂಗಳೂರು(reporterkarnataka.com): ಮಂಗಳೂರು ಲೋಕಾಯುಕ್ತ ಕಚೇರಿಯ ಅಧಿಕಾರಿಯವರು ಮಂಗಳೂರಿನಲ್ಲಿರುವ ತೋಟಗಾರಿಕೆ ಇಲಾಖೆ, ಕೃಷಿ ಇಲಾಖೆ, ಪ್ರವಾಸೋದ್ಯಮ ಇಲಾಖೆ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿ ಹಾಗೂ ಮೀನುಗಾರಿಕೆ ಇಲಾಖೆಯಲ್ಲಿನ ಕಚೇರಿಗೆ ದಿಢೀರ್ ಭೇಟಿ ನೀಡಿ ಪರಿಶೀಲಿಸಿದರು.
ಪರಿಶೀಲನೆ ವೇಳೆ ಕಚೇರಿ ನಿರ್ವಹಣೆಯಲ್ಲಿ ಮತ್ತು ಆಡಳಿತದಲ್ಲಿ ಸಾಕಷ್ಟು ಲೋಪದೋಷಗಳು ಕಂಡುಬಂದಿದ್ದು ಈ ಬಗ್ಗೆ ಮಾಹಿತಿ ಸಂಗ್ರಹಿಸಿ ಸಮಗ್ರ ವರದಿಯನ್ನು ಲೋಕಾಯುಕ್ತ ಕೇಂದ್ರ ಕಚೇರಿಗೆ ಮಾಹಿತಿ ನೀಡಲಾಗುವುದು ಎಂದು ಮಂಗಳೂರು ವಿಭಾಗ, ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಎಂ.ಎ ನಟರಾಜ ತಿಳಿಸಿದ್ದಾರೆ.