8:48 PM Sunday18 - October 2026
ಬ್ರೇಕಿಂಗ್ ನ್ಯೂಸ್
ಗೊತ್ತು ಗುರಿ ಇಲ್ಲದ ಟೂರಿಸಂ ನೀತಿ | ನಿರ್ವಹಣೆ ಇಲ್ಲದೆ ಭೂತ ಬಂಗಲೆಯಂತಾದ… ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20…

ಇತ್ತೀಚಿನ ಸುದ್ದಿ

ಮಾವು ಮಾರುಕಟ್ಟೆ ಮಧ್ಯಪ್ರವೇಶ; ಬೆಲೆ ವ್ಯತ್ಯಾಸ ಪಾವತಿಗೆ ಸರ್ಕಾರದ ಒಪ್ಪಿಗೆ: ಸಚಿವ ಚಲುವರಾಯಸ್ವಾಮಿ

22/06/2025, 00:15

ಬೆಂಗಳೂರು(reporterkarnataka.com):ನಿರಂತರ ಬೆಲೆ ಕುಸಿತದಿಂದ ಕಂಗೆಟ್ಟಿದ್ದ ಮಾವು ಬೆಳೆಗಾರರ ನೆರವಿಗೆ ಸರ್ಕಾರ ಧಾವಿಸಿದೆ.
ರಾಜ್ಯದಲ್ಲಿ ಮಾವಿನ‌ ಬೆಲೆ ಕುಸಿತದ ಹಿನ್ನಲೆ ಮಾರುಕಟ್ಟೆ ಮಧ್ಯಪ್ರವೇಶ ಯೋಜನೆಯಡಿ ನೆರವಾಗುವಂತೆ ರಾಜ್ಯ ಸರ್ಕಾರದ ಮನವಿಗೆ ಕೇಂದ್ರವೂ ಸಕಾರಾತ್ಮಕ ಸಮ್ಮತಿ ನೀಡಿದೆ.
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳೆರೆಡೂ ಪ್ರತಿ ಕೆ.ಜಿ.ಗೆ ಎರೆಡೆರೆಡು ರೂ ಗಳಂತೆ ಒಟ್ಟು‌ 4 ರೂ ವೆತ್ಯಾಸ ಪಾವತಿಸಿ ಮಾರುಕಟ್ಟೆ ಚೈತನ್ಯಕ್ಕೆ ಕ್ರಮಕೈಗೊಳ್ಳಲು ಸಿದ್ದತೆ ನಡೆಸಿವೆ.
ಇಂದು ರಾಜ್ಯ ಕೃಷಿ ಸಚಿವರಾದ ಎನ್. ಚಲುವರಾಯಸ್ವಾಮಿ ಅವರು ವಿಡಿಯೋ‌ ಸಂವಾದದ ಮೂಲಕ ಕೇಂದ್ರ ಕೃಷಿ ಸಚಿವರಾ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಮಾವು ಬೆಳೆಗಾರರ ಪರಿಸ್ಥಿತಿ ಮನವರಿಕೆ ಮಾಡಿಕೊಟ್ಟರು.
2025-26ನೇ ಸಾಲಿನ ಮಾರುಕಟ್ಟೆ ಋತುವಿನಲ್ಲಿ ಮಾವಿಗೆ PDPS ಯೋಜನೆಯ ಅನುಷ್ಠಾನಕ್ಕೆ ಸಚಿವ ಚಲುವರಾಯಸ್ವಾಮಿ ಅವರು ಮಾಡಿದ ಮನವಿಗೆ ಕೇಂದ್ರ ಕೃಷಿ ಸಚಿವರೂ ಸಹ ಸಮ್ಮತಿ ನೀಡಿದರು.
2.5 ಲಕ್ಷ ಮೆಟ್ರಿಕ್ ಟನ್ ಮಾವು ಖರೀದಿಗೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ.
ಸೋಮವಾರ ಈ‌ ಬಗ್ಗೆ ಅಧಿಕೃತ ಆದೇಶ ಹೊರಬೀಳುವ ನಿರೀಕ್ಷೆ ‌ಇದೆ.
ಈ‌ ಸಂದರ್ಭದಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ,ಕೃಷಿ ,ತೋಟಗಾರಿಕೆ ಇಲಾಖೆ‌ ಅಧಿಕಾರಿಗಳು ಹಾಜರಿದ್ದರು.ಮಾವು ಕರ್ನಾಟಕದ ಪ್ರಮುಖ ತೋಟಗಾರಿಕಾ ಬೆಳೆಗಳಲ್ಲೊಂದಾಗಿದೆ.2025-26ನೇ ಋತುವಿನಲ್ಲಿ 1.39 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆಯಲಾಗಿದೆ.
ಈ ಬಾರಿ ಅಂದಾಜು 08 ರಿಂದ 10 ಲಕ್ಷ ಟನ್ ಮಾವು ಉತ್ಪಾದನೆಯಾಗಿದೆ.ರಾಜ್ಯದಲ್ಲಿ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ಚಿಕ್ಕಬಳ್ಳಾಪುರ ಮತ್ತು ರಾಮನಗರ ಪ್ರಮುಖ ಮಾವು ಬೆಳೆ ಪ್ರದೇಶಗಳಾಗಿವೆ.
ಕರ್ನಾಟಕದಲ್ಲಿ, ಮಾವಿನ ಕೊಯ್ಲು ಮೇ ನಿಂದ ಜುಲೈ ವರೆಗೆ ನಡೆಯುತ್ತದೆ. ಈ ಅವಧಿಯಲ್ಲಿ, ಮಾರುಕಟ್ಟೆ ಬೆಲೆಗಳಲ್ಲಿ ಗಮನಾರ್ಹ ಏರಿಳಿತಗಳನ್ನು ಗಮನಿಸಲಾಗಿದೆ.
ಮೇ 2025 ರಲ್ಲಿ, ಕೋಲಾರ, ಚಿಕ್ಕಬಳ್ಳಾಪುರ ಮತ್ತು ರಾಮನಗರದ ಪ್ರಮುಖ ಮಾರುಕಟ್ಟೆಗಳಲ್ಲಿ ಮಾವಿನ ಹಣ್ಣಿನ ಮಾದರಿ ಬೆಲೆಗಳು ಕ್ವಿಂಟಾಲ್‌ಗೆ ರೂ.1,200 ರಿಂದ ರೂ.2,500 ರವರೆಗೆ ಇತ್ತು.
ಶ್ರೀನಿವಾಸಪುರ ಮಾರುಕಟ್ಟೆಯಲ್ಲಿ ತೋತಾಪುರಿ ವರಿಟೆಯ ಚಾಲ್ತಿಯಲ್ಲಿರುವ ಮಾರುಕಟ್ಟೆ ಬೆಲೆಗಳು ಪ್ರತಿ ಕ್ವಿಂಟಾಲ್‌ಗೆ 450-550 ರೂಗೆ ಕುಸಿದಿದೆ.
ಕರ್ನಾಟಕ ಕೃಷಿ ಬೆಲೆ ಆಯೋಗವು ಮಾವಿನ A1 + FL ಕೃಷಿ ವೆಚ್ಚವನ್ನು ಕ್ವಿಂಟಲ್‌ಗೆ 3,460 ರೂ. ಮತ್ತು C-3 ವೆಚ್ಚಕ್ಕೆ 5,466 ರೂ. ಎಂದು ಶಿಫಾರಸು ಮಾಡಿದೆ.
ಈ ನಿಟ್ಟಿನಲ್ಲಿ 11.06.2025 ರಂದು ಭಾರತ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಲಾಯಿತು ಮತ್ತು 13.06.2025 ರಂದು ಸ್ಪಷ್ಟೀಕರಣಗಳಿಗೆ ಉತ್ತರವನ್ನು ನೀಡಲಾಯಿತು.
ತೋಟಗಾರಿಕೆ ಇಲಾಖೆಯ ಅಡಿಯಲ್ಲಿ ಬರುವ ಕರ್ನಾಟಕ ಮಾವು ಅಭಿವೃದ್ಧಿ ಮಂಡಳಿಯನ್ನು PDPS ಅನುಷ್ಠಾನಕ್ಕಾಗಿ ರಾಜ್ಯ ಮಟ್ಟದ ಸಂಸ್ಥೆಯಾಗಿ ಗೊತ್ತುಪಡಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು